Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:13 - ಕನ್ನಡ ಸತ್ಯವೇದವು C.L. Bible (BSI)

13 ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದೇ ಗಳಿಗೆಯಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕ ದೇವರನ್ನು ಘನಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಸಮಯದಲ್ಲಿ ಮಹಾಭೂಕಂಪವಾಯಿತು. ಆ ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಭೂಕಂಪದಲ್ಲಿ ಏಳು ಸಾವಿರ ಜನರು ನಾಶವಾದರು. ಸಾಯದೆ ಉಳಿದಿದ್ದ ಜನರು ಬಹು ಭಯಗೊಂಡು ಪರಲೋಕದ ದೇವರನ್ನು ಘನಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ತಾಬೊಡ್ತೊಬ್ ಎಕ್ ಭಯಂಕರ್ ಭುಕಂಪ್ ಹೊಲೊ, ಶಾರಾತ್ಲೊ ಧಾತ್ಲೊ ಎಕ್ ವಾಟೊ ನಾಸ್ ಹೊವ್ನ್ ಗೆಲೊ, ಅನಿ ಸಾತ್ ಹಜಾರ್ ಲೊಕಾ ಮರುನ್ ಗೆಲಿ ಹುರಲ್ಲಿ ಲೊಕಾ ಭಿಯಾಲಿ, ಅನಿ ತೆನಿ ಸರ್ಗಾಚ್ಯಾ ದೆವಾಚ್ಯಾ ಮೊಟೆಪಾನಾಕ್ ಹೊಗಳ್ಳ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:13
21 ತಿಳಿವುಗಳ ಹೋಲಿಕೆ  

ಆತನು ಮಹಾಶಬ್ದದಿಂದ, “ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ; ಅವರಿಗೆ ಸ್ತುತಿಸ್ತೋತ್ರ ಸಲ್ಲಿಸಿರಿ. ಏಕೆಂದರೆ, ಅವರು ತೀರ್ಪುಕೊಡುವ ಗಳಿಗೆಯು ಬಂದಿದೆ. ಆದ್ದರಿಂದ ಭೂಸ್ವರ್ಗಗಳನ್ನೂ ಕಡಲುಕಾರಂಜಿಗಳನ್ನೂ ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸಿರಿ,” ಎಂದು ಹೇಳಿದನು.


ಆ ಯಜ್ಞದ ಕುರಿಮರಿ ಆರನೆಯ ಮುದ್ರೆಯನ್ನು ಒಡೆದಾಗ, ದೊಡ್ಡ ಭೂಕಂಪವಾಯಿತು. ಸೂರ್ಯನು ಕರಿಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.


ಆಕಾನನಿಗೆ ಯೆಹೋಶುವನು, “ಮಗನೇ, ನೀನು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಸ್ತುತಿಸಿ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ಮುಚ್ಚುಮರೆಯಿಲ್ಲದೆ ನನಗೆ ತಿಳಿಸು, ಎಂದನು


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವದಾಯಕ ಉಸಿರು ಬಂದು ಆ ಶವಗಳನ್ನು ಹೊಕ್ಕಾಗ ಅವರು ಎದ್ದುನಿಂತರು. ಇದನ್ನು ಕಂಡವರೆಲ್ಲರೂ ಭಯದಿಂದ ನಡುಗಿದರು.


ಅನಂತರ ಆ ದೇವದೂತನು ಧೂಪಾರತಿಯನ್ನು ಎತ್ತಿಕೊಂಡು, ಅದನ್ನು ಬಲಿಪೀಠದ ಮೇಲಿದ್ದ ಕೆಂಡಗಳಿಂದ ತುಂಬಿಸಿ, ಭೂಮಿಗೆ ಎಸೆದನು. ಆಗ ಮಿಂಚು, ಗುಡುಗು, ಗರ್ಜನೆಗಳು ಮತ್ತು ಭೂಕಂಪವು ಉಂಟಾದವು.


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ ! ಆತನ ಮಹಿಮೆಯನು ಕೀರ್ತಿಸೋಣ;


ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಈ ಗಡ್ಡೆಗಳ ಹಾಗು ಇಲಿಗಳ ರೂಪವನ್ನು ಚಿನ್ನದಿಂದ ಮಾಡಿಸಿ ಇಸ್ರಯೇಲ್ ದೇವರಿಗೆ ಬಹುಮಾನವಾಗಿ ಕೊಡಿ. ಆಗ ಆತನ ಶಿಕ್ಷಾಹಸ್ತ ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಹಾಗು ಪ್ರಾಂತ್ಯಗಳನ್ನೂ ಬಿಟ್ಟುಹೋಗಬಹುದು.


ದೇವಪುತ್ರರೂ ಮನುಷ್ಯಪುತ್ರಿಯರೂ ಕೂಡಿ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದನಂತರವೂ ಜಗದಲ್ಲಿ ‘ನೆಪೀಲಿಯರು’ ಇದ್ದರು. ಇವರೇ ಪ್ರಾಚೀನಕಾಲದ ಸುಪ್ರಸಿದ್ಧ ಪರಾಕ್ರಮಿಗಳು.


ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


ಗುಡುಗು, ಭೂಕಂಪ, ಮಹಾಗರ್ಜನೆ, ಬಿರುಗಾಳಿ, ಚಂಡಮಾರುತ, ಭಸ್ಮಮಾಡುವಂಥ ಅಗ್ನಿಜ್ವಾಲೆ - ಇವುಗಳ ಮೂಲಕ ಸರ್ವೇಶ್ವರ ನಿನ್ನ ಪರವಾಗಿ ಪ್ರತ್ಯಕ್ಷವಾಗುವರು.


ಅಧಿಕಾರಿಗಳು ಆ ಹುಟ್ಟು ಕುರುಡನನ್ನು ಮತ್ತೆ ಕರೆಯಿಸಿ, “ನೀನು ದೇವರ ಮುಂದೆ ಪ್ರಮಾಣಮಾಡಿ ಹೇಳು. ಆ ಮನುಷ್ಯ ಪಾಪಿಯೆಂದು ನಮಗೆ ಗೊತ್ತು,” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು