Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:17 - ಕನ್ನಡ ಸತ್ಯವೇದವು C.L. Bible (BSI)

17 “ಪ್ರಭುವೇ, ದೇವನೇ, ಸರ್ವಶಕ್ತನೇ, ಇರುವಾತನೂ ಇದ್ದಾತನೂ ನೀನೇ ಘನಾಧಿಕಾರವನ್ನು ತೋರಿ ನೀ ಆಳುತ್ತಿರುವೆ ಧನ್ಯವಾದಗಳನ್ನು ನಿನಗೆ ಸಲ್ಲಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕರ್ತನೇ, ಸರ್ವಶಕ್ತನಾದ ದೇವರೇ, ಸದಾ ಇರುವಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳಿದ್ದರಿಂದ ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಹಿರಿಯರು ಹೀಗೆ ಹೇಳಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ಭೂತಕಾಲದಲ್ಲಿ ಇದ್ದಾತನೇ, ವರ್ತಮಾನ ಕಾಲದಲ್ಲಿ ಇರುವಾತನೇ, ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀನು ನಿನ್ನ ಮಹಾ ಅಧಿಕಾರವನ್ನು ಉಪಯೋಗಿಸಿ ನಿನ್ನ ಆಡಳಿತವನ್ನು ಆರಂಭಿಸಿದ್ದರಿಂದ ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೀಗೆ ಹೇಳಿದರು: “ಕರ್ತ ಆಗಿರುವ, ಸರ್ವಶಕ್ತರಾದ ದೇವರೇ, ಮೊದಲು ಇದ್ದು ಈಗಲೂ ಇರುವವರೂ, ನೀವು ನಿಮ್ಮ ಮಹಾ ಅಧಿಕಾರವನ್ನು ಪಡೆದು ಆಳಿದ್ದರಿಂದ ನಿಮಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಧನಿಯಾ ಸಗ್ಳ್ಯಾನಿಕಿ ಮೊಟ್ಯಾ ದೆವಾ ಅತ್ತಾ ಅಸಲ್ಲ್ಯಾ ಅನಿ ಫಾಟಿ ಹೊತ್ತ್ಯಾ! ತಿಯಾ ತುಜೊ ಮೊಟೊ ಅದಿಕಾರ್ ತುಜ್ಯಾ ತಾಬೆತ್ ಘೆಟ್ಲೆ ಅನಿ ಅಧಿಕಾರ್ ಚಾಲ್ವುಕ್ ಚಾಲು ಕರ್‍ಲೆ ಮನುನ್ ತುಕಾ ಧನ್ಯವಾದ್ ದಿತಾಂವ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:17
27 ತಿಳಿವುಗಳ ಹೋಲಿಕೆ  

“ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.


ಆಗ ಜಲಾಧಿಕಾರಿಯಾದ ದೂತನು : “ತ್ರಿಕಾಲಸ್ಥನು ಪರಿಶುದ್ಧನು ನೀನೇ ನೀನಿತ್ತ ತೀರ್ಪು ನ್ಯಾಯಬದ್ಧವಾದುದೇ.


ತರುವಾಯ ನನಗೆ ಮತ್ತೊಂದು ಧ್ವನಿ ಕೇಳಿಸಿತು. ಅದು ದೊಡ್ಡ, ಜನಸಮೂಹದ ಆರ್ಭಟದಂತೆಯೂ ಭೋರ್ಗರೆಯುವ ಜಲಪ್ರವಾಹದ ಮೊರೆತದಂತೆಯೂ ಭಾರಿ ಗುಡುಗಿನ ಗರ್ಜನೆಯಂತೆಯೂ ಇತ್ತು. ಅದು ಇಂತೆಂದಿತು : “ಅಲ್ಲೆಲೂಯ ! ಸರ್ವಶಕ್ತ ನಮ್ಮ ಪ್ರಭು ದೇವ ರಾಜ್ಯವಾಳುತಿಹನಾತ.


ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು : “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”


ಹೇ ಪ್ರಭು, ಪರಾಕ್ರಮ ತೋರಿ, ಪರಮಪದಗಳಿಸಿಕೊ I ಕೀರ್ತಿಸುತ ನಿನ್ನ ಸಾಮರ್ಥ್ಯವನು, ಪೊಗಳುವೆನಿದೊ II


ಇವು ಪವಾಡ ಕಾರ್ಯಗಳನ್ನು ಎಸಗುವ ದೆವ್ವಾತ್ಮಗಳು. ಸರ್ವಶಕ್ತ ದೇವರ ಮಹಾದಿನದಲ್ಲಿ ನಡೆಯುವ ಯುದ್ಧಕ್ಕಾಗಿ ಭೂಲೋಕದ ರಾಜರುಗಳನ್ನೆಲ್ಲಾ ಒಟ್ಟುಗೂಡಿಸಲು ಅವು ಹೊರಟವು.


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ವರ್ಣಿಸಲು ಅಸಾಧ್ಯವಾದ ದೇವರ ಕೃಪಾವರಕ್ಕಾಗಿ ಅವರಿಗೆ ಸ್ತುತಿಸ್ತೋತ್ರ ಸಲ್ಲಲಿ!


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


ಆಗ ಕಲ್ಲನ್ನು ತೆಗೆದುಹಾಕಲಾಯಿತು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ಪಿತನೇ , ನನ್ನ ಪ್ರಾರ್ಥನೆಗೆ ನೀವು ಕಿವಿಗೊಡುತ್ತೀರಿ; ಆದುದರಿಂದ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನನ್ನ ಪಿತೃಗಳ ದೇವಾ, ಮಾಡುವೆ ನಿನ್ನ ಗುಣಗಾನ, ನಿನಗೆ ನನ್ನ ಧನ್ಯವಾದ. ಏಕೆಂದರೆ ನೀನೇ ನನಗೆ ಜ್ಞಾನಶಕ್ತಿಗಳನ್ನು ದಯಪಾಲಿಸಿದಾತ. ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಾತ ನೀನೇ ಹೌದು, ರಾಜ ಬಯಸಿದ ಗುಟ್ಟನ್ನು ನಮಗೆ ವ್ಯಕ್ತಪಡಿಸಿದಾತ ನೀನೇ.


ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು