Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:2 - ಕನ್ನಡ ಸತ್ಯವೇದವು C.L. Bible (BSI)

2 ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಅದು ಅನ್ಯಜನರಿಗಾಗಿ ಬಿಟ್ಟದೆ; ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು. ಏಕೆಂದರೆ ಅದು ಯೆಹೂದ್ಯರಲ್ಲದವರಿಗಾಗಿ ಬಿಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಖರೆ ಭಾಯ್ಲ್ಯಾ ಬಾಜುಕ್ ಮೆಜುನಕೊ, ಕಶ್ಯಾಕ್ ಮಟ್ಲ್ಯಾರ್ ತೆಂಕಾ ಚಾಳಿಸಾರ್ ದೊನ್ ಮ್ಹಯಿನೆ ಪವಿತ್ರ್ ಶಾರ್ ಜುದೆವ್ ನ್ಹಯ್ ಹೊತ್ಯಾ ಲೊಕಾಚ್ಯಾ ಹಾತಾತ್ ದಿವ್ನ್ ಹೊಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:2
32 ತಿಳಿವುಗಳ ಹೋಲಿಕೆ  

ಆ ಮಹಿಳೆ ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಆಕೆಗೆ ಶುಶ್ರೂಷೆಯಾಗಬೇಕೆಂದು ದೇವರೇ ಆ ಸ್ಥಳವನ್ನು ಸಜ್ಜುಗೊಳಿಸಿದ್ದರು.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.”


ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಯಾವನಾದರೂ ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳಲ್ಲಿ ಏನನ್ನಾದರೂ ತೆಗೆದುಹಾಕಿದರೆ, ಈ ಪುಸ್ತಕದಲ್ಲಿ ವಿವರಿಸಿರುವ ಜೀವವೃಕ್ಷದಲ್ಲಿಯೂ ಪವಿತ್ರನಗರದಲ್ಲಿಯೂ ಅವನಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.”


ಹೀಗೆ ಎದ್ದವರು ಸಮಾಧಿಗಳಿಂದ ಹೊರಗೆಬಂದು, ಯೇಸು ಪುನರುತ್ಥಾನ ಹೊಂದಿದ ಬಳಿಕ ಪವಿತ್ರನಗರಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.


“ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ.”


ಬಳಿಕ ಪಿಶಾಚಿ ಅವರನ್ನು ಪವಿತ್ರ ನಗರಕ್ಕೆ ಅಂದರೆ ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುದಿಯ ಮೇಲೆ ನಿಲ್ಲಿಸಿ,


ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ ಆ ಗಣದ ಕೆಲವು ನಕ್ಷತ್ರಗಳನ್ನೂ ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.


ಆಲಯವನ್ನು ನಾಲ್ಕು ಪಾರ್ಶ್ವಗಳಲ್ಲಿಯೂ ಅಳೆದನು; ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರಳತೇ ಕೋಲುದ್ದದ, ಐನೂರಳತೇ ಕೋಲಗಲದ ಗೋಡೆ ಸುತ್ತಮುತ್ತಲಿತ್ತು.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವದಾಯಕ ಉಸಿರು ಬಂದು ಆ ಶವಗಳನ್ನು ಹೊಕ್ಕಾಗ ಅವರು ಎದ್ದುನಿಂತರು. ಇದನ್ನು ಕಂಡವರೆಲ್ಲರೂ ಭಯದಿಂದ ನಡುಗಿದರು.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ಅದಾದ ಮೇಲೆ ಇತರ ಮೃಗಗಳಿಗಿಂತ ವಿಲಕ್ಷಣವಾಗಿಯೂ ಅತಿಭಯಂಕರವಾಗಿಯೂ ಕಬ್ಬಿಣದ ಹಲ್ಲು, ಕಂಚಿನ ಉಗುರು ಉಳ್ಳದ್ದಾಗಿಯೂ ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿದ್ದ ಹಾಗು ಮಿಕ್ಕದ್ದನ್ನು ಕಾಲಿನಿಂದ ತುಳಿಯುತ್ತಿದ್ದ ಆ ನಾಲ್ಕನೆಯ ಮೃಗದ ವಿಷಯವನ್ನು ತಿಳಿದುಕೊಳ್ಳಲು ಬಯಸಿದೆ.


ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !


ಹೆಮ್ಮೆಪಡುವರಿವರು ತಾವು ಪವಿತ್ರನಗರದವರೆಂದು ಭರವಸೆಯಿಂದಿರುವರು ದೇವರು ಇಸ್ರಯೇಲಿನವನೇ ಎಂದು ಆತನ ಹೆಸರು ಸೇನಾಧೀಶ್ವರ ಸರ್ವೇಶ್ವರನೇ ಎಂದು.


ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II


ನೀವು ಆ ನಾಡನ್ನು ನಾಲ್ವತ್ತು ದಿನಗಳು ಸಂಚರಿಸಿ ನೋಡಿದಿರಿ. ಅಂತೆಯೇ ಒಂದು ದಿನಕ್ಕೆ ಒಂದು ವರ್ಷದ ಮೇರೆಗೆ ನಾಲ್ವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸಿರಿ; ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳುವಿರಿ.


ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.


ಅಷ್ಟು ದಿವಸಗಳು ತೀರಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಅಧರ್ಮವನ್ನು ಹೊತ್ತುಕೊಳ್ಳಬೇಕು. ವರ್ಷ ಒಂದಕ್ಕೆ ಒಂದು ದಿವಸ ಮೇರೆಗೆ ನಲವತ್ತು ದಿನ ಅವರ ಅಧರ್ಮವನ್ನು ಹೊತ್ತುಕೊಳ್ಳಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ.


ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.


ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರರವರೆಗೆ ನಡೆಯುವುವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆ ಆಗುವುದು,” ಎಂದು ಹೇಳಿದನು.


ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು