ಪ್ರಕಟನೆ 11:4 - ಕನ್ನಡ ಸತ್ಯವೇದವು C.L. Bible (BSI)4 ಲೋಕಾಧಿಪತಿಯಾದ ದೇವರ ಸಾನ್ನಿಧ್ಯದಲ್ಲಿರುವ ಎರಡು ಓಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳು ಇವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಭೂಲೋಕದ ಪ್ರಭುವಿನ ಸನ್ನಿಧಿಯಲ್ಲಿ ನಿಂತಿರುವ ಎರಡು ಆಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳೇ ಈ ಇಬ್ಬರು ಸಾಕ್ಷಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇವರು, “ಎಣ್ಣೆಯ ಮರಗಳೂ ಭೂಲೋಕದ ಒಡೆಯ ಆಗಿರುವವರ ಮುಂದೆ ನಿಂತಿರುವ ಎರಡು ದೀಪಸ್ತಂಭಗಳೂ ಆಗಿದ್ದಾರೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೆ ದೊಗೆ ಸಾಕ್ಷಿ ದೊನ್ ಒಲಿವ್ ಝಾಡಾ ಅನಿ ಜಿಮ್ನಿಚ್ಯಾ ಧನಿಯಾಚ್ಯಾ ಇದ್ರಾಕ್ ಇಬೆ ಅಸಲ್ಲೆ ದೊನ್ ದಿವ್ಯಾಚೆ ಖಾಂಬೆ. ಅಧ್ಯಾಯವನ್ನು ನೋಡಿ |
ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”