ಪ್ರಕಟನೆ 11:6 - ಕನ್ನಡ ಸತ್ಯವೇದವು C.L. Bible (BSI)6 ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇವರಿಗೆ ಯಾವನಾದರೂ ಕೇಡನ್ನು ಉಂಟುಮಾಡಬೇಕೆಂದಿದ್ದರೆ ಅವನಿಗೆ ಈ ರೀತಿಯಾಗಿ ಕೊಲೆಯಾಗಬೇಕು. ತಾವು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂವಿುಯನ್ನು ಪೀಡಿಸುವದಕ್ಕೂ ಅಧಿಕಾರವುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತೆಂಕಾ ಮಳಬ್ ಧಾಪ್ತಲೊ ಅದಿಕಾರ್‍ಬಿ ಹಾಯ್ ತಸೆ ಮನುನ್ ತೆನಿ ದೆವಾಚಿ ಬಾತ್ಮಿ ಸಾಂಗ್ತಲ್ಯಾ ದಿಸಾತ್ನಿ ಪಾವ್ಸ್ ರ್‍ಹಾಯ್ನಾ. ತೆಂಕಾ ಪಾನಿಯಾಂಚ್ಯಾ ಝರ್‍ಯಾಕ್ನಿ ರಗಾತ್ ಕರುನ್ ಬದಲ್ತಲೊ ಅದಿಕಾರ್‍ಬಿ ದಿಲ್ಲೊ ಹಾಯ್; ತೆಂಚ್ಯಾ ಮನಾಕ್ ಯೆತಾ ತನ್ನಾ ಜಿಮ್ನಿ ವರ್ತಿ ಸಗ್ಳ್ಯಾ ಥರಿಚಿ ಕಸ್ಟಾ ಧಾಡ್ತಲೊ ಅದಿಕಾರ್‍ಬಿ ತೆಂಕಾ ಹಾಯ್. ಅಧ್ಯಾಯವನ್ನು ನೋಡಿ |