Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:8 - ಕನ್ನಡ ಸತ್ಯವೇದವು C.L. Bible (BSI)

8 ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಗೂಢಾರ್ಥವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಹೆಸರುಗಳುಂಟು; ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ಸಾಕ್ಷಿಗಳ ಎರಡು ಶವಗಳು ಮಹಾನಗರದ ಬೀದಿಯಲ್ಲಿ ಬಿದ್ದಿರುತ್ತವೆ. ಈ ನಗರಕ್ಕೆ ಸೊದೋಮ್ ಮತ್ತು ಈಜಿಪ್ಟ್ ಎಂದು ಹೆಸರಾಗುತ್ತದೆ. ಆ ನಗರದ ಹೆಸರುಗಳಿಗೆ ವಿಶೇಷ ಅರ್ಥವಿದೆ. ಪ್ರಭುವು ಈ ನಗರದಲ್ಲಿಯೇ ಶಿಲುಬೆಗೇರಿಸಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಗಳು ಸಾಂಕೇತಿಕವಾಗಿ ಸೊದೋಮ್ ಹಾಗೂ ಈಜಿಪ್ಟ್ ಎಂದೂ ಹೆಸರುಗಳಿರುವುದು. ಇವರ ಒಡೆಯ ಆಗಿರುವವರನ್ನು ಸಹ ಅಲ್ಲಿಯೇ ಶಿಲುಬೆಗೆ ಹಾಕಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ತೆಂಚಿ ಮಡಿ ಮೊಟ್ಯಾ ಶಾರಾಚ್ಯಾ ವನಿಯಾತ್ನಿ ಪಡಲ್ಲಿ ರಾತ್ಯಾತ್ ಥೈ ಧನಿಯಾಕ್ ಖುರ್ಸಾರ್ ಮಾರಲ್ಲೆ ಹೊತ್ತೆ. ತ್ಯಾ ಶಾರಾಚಿ ವಳಕ್ ದಿತಲ್ಲೆ ನಾಂವ್ ಸೊದೊಮ್ ನಾತರ್ ಇಜಿಪ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:8
40 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


ಅವಳಿಗಾದ ಚಿತ್ರಹಿಂಸೆಯ ನಿಮಿತ್ತ ಭಯಪಟ್ಟು ದೂರದಲ್ಲೇ ನಿಂತು ಗೋಳಾಡುತ್ತಾ : “ಅಯ್ಯೋ ! ಅಯ್ಯೋ ! ಬಲಿಷ್ಠ ಬಾಬಿಲೋನ್ ಮಹಾನಗರಿಯೇ, ಒಂದೇ ತಾಸಿನಲ್ಲಿ ಬಂದೊದಗಿತಲ್ಲಾ ನಿನಗಿಂಥ ದುರ್ಗತಿ,” ಎಂದು ಪ್ರಲಾಪಿಸುವರು.


ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.”


ಯೇಸುಸ್ವಾಮಿ ಕೂಡ ತಮ್ಮ ರಕ್ತದಿಂದ ಜನರನ್ನು ಪರಿಶುದ್ಧಗೊಳಿಸುವುದಕ್ಕೋಸ್ಕರ, ನಗರದ್ವಾರದ ಹೊರಗಡೆ ಮರಣಕ್ಕೆ ಈಡಾದರು.


ಅವರು ಅವಳನ್ನು ದಹಿಸಿದ ಬೆಂಕಿಯ ದಟ್ಟ ಹೊಗೆಯನ್ನು ಕಂಡು, “ಈ ಮಹಾನಗರಿಗೆ ಸರಿಸಮನಾದ ನಗರವೊಂದುಂಟೇ?” ಎಂದು ಉದ್ಗರಿಸಿದರು.


ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಜನರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳ ತನಕ ದಿಟ್ಟಿಸಿ ನೋಡುವರು; ಅವುಗಳನ್ನು ಸಮಾಧಿಮಾಡಲು ಬಿಡಲೊಲ್ಲರು.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.


ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.


“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


ಹೀಗೆ ನಾನು ನಿನ್ನ ಲಂಪಟತನವನ್ನೂ ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆದುಬಂದ ನಿನ್ನ ಸೂಳೆತನವನ್ನೂ ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ ಈಜಿಪ್ಟನ್ನು ನೆನಪಿಗೆ ತಂದುಕೊಳ್ಳಲಾರೆ.”


ಆದರೂ ಇವಳು ತಾನು ಈಜಿಪ್ಟ್ ದೇಶದಲ್ಲಿ ಸೂಳೆಯಾಗಿದ್ದ ತನ್ನ ತಾರುಣ್ಯವನ್ನು ನೆನಪುಮಾಡಿಕೊಂಡು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿದಳು.


ಅವಳು ಈಜಿಪ್ಟಿನಲ್ಲಿ ಇದ್ದಂದಿನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಬಾಲ್ಯದಲ್ಲಿಯೇ ಅಲ್ಲಿಯವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ನಸುಕಿ, ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.


ಅವರು ಈಜಿಪ್ಟಿನಲ್ಲಿ ಸೂಳೆತನ ಮಾಡುತ್ತಿದ್ದರು. ಬಾಲ್ಯದಲ್ಲಿ ವೇಶ್ಯೆಯರಾಗಿ ನಡೆಯುತ್ತಿದ್ದರು. ಅಲ್ಲಿನ ಪುರುಷರು ಅವರ ಸ್ತನಗಳನ್ನು ಹಿಸುಕಿದರು, ಎಳೆಯ ತೊಟ್ಟುಗಳನ್ನು ಸವರಿಸಿದರು.


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು.


ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ಅನಂತರ ಎರಡನೆಯ ದೇವದೂತನು ಬಂದನು. ಆತನು, “ಪತನ ಹೊಂದಿದಳು, ಪತನ ಹೊಂದಿದಳು ಬಾಬಿಲೋನ್ ಮಹಾನಗರಿ; ಹಾದರವೆಂಬ ಕಾಮೋದ್ರೇಕದ ಮದ್ಯವನು ಸಕಲರಿಗೂ ಕುಡಿಸಿದ ನಗರಿ ಪತನವಾದಳು,” ಎಂದು ಹೇಳಿದನು.


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ಅನಂತರವೂ ವಿಶ್ವಾಸಭ್ರಷ್ಟನಾದರೆ, ಅಂಥವನು ಪಶ್ಚಾತ್ತಾಪಪಟ್ಟು ದೈವಾಭಿಮುಖನಾಗುವುದು ಅಸಾಧ್ಯ. ಏಕೆಂದರೆ, ಅಂಥವನು ತನ್ನ ಪಾಲಿಗೆ ದೇವರ ಪುತ್ರನನ್ನು ಪುನಃ ಶಿಲುಬೆಗೆ ಏರಿಸಿ ಅವರನ್ನು ಬಹಿರಂಗವಾಗಿ ಅವಮಾನಗೊಳಿಸುವವನಾಗುತ್ತಾನೆ.


ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.


ಅವರು ಊರೀಯನನ್ನು ಈಜಿಪ್ಟಿನಿಂದ ಎಳೆದು ಅರಸ ಯೆಹೋಯಾಕೀಮನ ಬಳಿಗೆ ತಂದರು. ಅರಸ ಅವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಜನಸಾಮಾನ್ಯರ ಸಮಾಧಿಗಳ ನಡುವೆ ಹೂಣಿಸಿದ.


ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.”


ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.


“ನಿನ್ನ ಉತ್ತರಕ್ಕೆ ತನ್ನ ಕುವರಿಯರೊಂದಿಗೆ ವಾಸಿಸುವ ಸಮಾರಿಯ, ನಿನ್ನ ಅಕ್ಕ; ನಿನ್ನ ದಕ್ಷಿಣ ಕಡೆಯಲ್ಲಿ ಕುವರಿಯರೊಂದಿಗೆ ವಾಸಿಸುವ ಸೊದೋಮ್, ನಿನ್ನ ತಂಗಿ.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಗರ್ವಪಡುವುದು, ಹೊಟ್ಟೆ ತುಂಬಿಸಿಕೊಳ್ಳುವುದು, ಸ್ವಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಆಕೆಯ ಕುವರಿಯರಲ್ಲೂ ಇದ್ದವು. ಅಲ್ಲದೆ ಅವರು ದೀನದಲಿತರಿಗೆ ಬೆಂಬಲವಾಗಿರಲಿಲ್ಲ.


ಪಟ್ಟಣದ ಹೊರಗಿನ ಆಲೆಯಲ್ಲಿ ದ್ರಾಕ್ಷಿಯ ಹಣ್ಣನ್ನು ಹಿಂಡಲಾಯಿತು. ಆ ಆಲೆಯಿಂದ ರಕ್ತವು ಹರಿಯಿತು. ಅದು ಮುನ್ನೂರು ಕಿಲೊಮೀಟರಿನಷ್ಟು ದೂರವಾಗಿಯೂ ಎರಡು ಮೀಟರಿನಷ್ಟು ಆಳವಾಗಿಯೂ ಹರಿಯಿತು.


ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರವುಳ್ಳ ಮಹಾನಗರದ ಸೂಚನೆಯಾಗಿದ್ದಾಳೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು