Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:1 - ಕನ್ನಡ ಸತ್ಯವೇದವು C.L. Bible (BSI)

1 ಆಕಾಶದಲ್ಲಿ ಚಿಹ್ನೆಯೊಂದು ಕಾಣಿಸಿಕೊಂಡಿತು. ಮಹಿಳೆಯೊಬ್ಬಳು ಸೂರ್ಯಭೂಷಿತಳಾಗಿದ್ದಳು. ಆಕೆಯ ಪಾದದಡಿ ಚಂದ್ರನಿದ್ದನು. ತಲೆಯ ಮೇಲೆ ಹನ್ನೆರಡು ನಕ್ಷತ್ರ ಖಚಿತವಾದ ಕಿರೀಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪರಲೋಕದಲ್ಲಿ ಒಂದು ಮಹಾಲಕ್ಷಣವು ಕಾಣಿಸಿತು. ಅದೇನಂದರೆ, ಸೂರ್ಯನನ್ನು ಧರಿಸಿಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು. ಸೂರ್ಯನನ್ನು ಧರಿಸಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆಕೆಯ ಪಾದದ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪರಲೋಕದಲ್ಲಿ ಒಂದು ಮಹಾ ಸೂಚನೆಯು ಕಾಣಿಸಿತು: ಒಬ್ಬ ಸ್ತ್ರೀಯು ಸೂರ್ಯನನ್ನು ಧರಿಸಿಕೊಂಡಿದ್ದಳು, ಆಕೆಯ ಪಾದಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಮಳ್ಬಾ ವರ್ತಿ ಎಕ್ ಮೊಟಿ ವಳಕ್ ದಿಸ್ಲಿ, ಎಕ್ ಬಾಯ್ಕೊಮನುಸ್ ಹೊತ್ತಿ ತೆನಿ ದಿಸ್ ನೆಸಲ್ಲಿನ್, ಅನಿ ಬಾರಾ ಚಿಕ್ಕಿಯಾಂಚೊ ಮುಕುಟ್ ತಿಚ್ಯಾ ಟಕ್ಲ್ಯಾ ವರ್ತಿ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:1
35 ತಿಳಿವುಗಳ ಹೋಲಿಕೆ  

“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು.


ಈ ಗಹನವಾದ ರಹಸ್ಯವು ಯೇಸುಕ್ರಿಸ್ತರಿಗೂ ಧರ್ಮಸಭೆಗೂ ಇರುವ ಸಂಬಂಧವನ್ನು ಸೂಚಿಸುತ್ತದೆ ಎಂಬುದೇ ನನ್ನ ಅಭಿಪ್ರಾಯ.


ಸರ್ವೇಶ್ವರನ ಕೈಯಲ್ಲಿ ನೀನು ಸುಂದರ ಕಿರೀಟವಾಗಿ ಮೆರೆಯುವೆ ನಿನ್ನ ದೇವರ ಹಸ್ತದಲ್ಲಿ ರಾಜ ಮುಕುಟವಾಗಿ;


ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


“ಉದಯಿಸುತ್ತಿರುವಳಿವಳು ಅರುಣೋದಯದಂತೆ ಸುಂದರಿಯಾಗಿಹಳು ಚಂದ್ರನಂತೆ ಶುಭ್ರಳಾಗಿಹಳು ಸೂರ್ಯನಂತೆ ಭಯಂಕರಳು ಪತಾಕಿನಿಯಂತೆ ಎಂಥವಳಿರಬಹುದು ಇವಳು ಪೇಳೈ?


ಭೀಕರ ಭೂಕಂಪಗಳಾಗುವುವು; ಕ್ಷಾಮಡಾಮರಗಳು ತಲೆದೋರುವುವು, ಭಯಂಕರ ಘಟನೆಗಳೂ ಬಾಹ್ಯಾಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವುವು.


ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I ಹರಡಿಸಿರುವೆ ಆಗಸವನು ಗುಡಾರದಂತೆ II


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.


ಆಕಾಶದಲ್ಲಿ ಮತ್ತೊಂದು ಚಿಹ್ನೆ ಕಾಣಿಸಿಕೊಂಡಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳಿದ್ದವು, ಹತ್ತು ಕೊಂಬುಗಳಿದ್ದವು; ಅದರ ಏಳು ತಲೆಗಳ ಮೇಲೆ ಏಳು ಮುಕುಟಗಳಿದ್ದವು.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಎಸಗುವೆನು ಆಗಸದಲಿ ಅದ್ಭುತಗಳನು, ಮಾಡುವೆನು ಭುವಿಯಲಿ ಮಹತ್ಕಾರ್ಯಗಳನು; ಕಾಣುವುದಾಗ ಕಿಚ್ಚು, ಕಪ್ಪೊಗೆ, ನೆತ್ತರು,


ಆಗ ನರಪುತ್ರನ ಚಿಹ್ನೆ ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಪೃಥ್ವಿಯ ಪ್ರಜೆಗಳೆಲ್ಲಾ ಅತ್ತು ಪ್ರಲಾಪಿಸುವರು. ನರಪುತ್ರನು ಶಕ್ತಿಸಾಮರ್ಥ್ಯದಿಂದಲೂ ಮಹಾಮಹಿಮೆಯಿಂದಲೂ ಮೇಘಾರೂಢನಾಗಿ ಆಗಮಿಸುವುದನ್ನು ಅವರು ಕಾಣುವರು.


ಸ್ವಜನರನು ದೇವ ಸರ್ವೇಶ್ವರ ಕಾಪಾಡುವನು ಮೇಷಪಾಲನಂತೆ ನಾಡಿನೊಳು ಥಳಥಳಿಸುವರವರು ಕಿರೀಟದ ರತ್ನಗಳಂತೆ.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ.


ಬಳಿಕ ಕೆಲವುಮಂದಿ ಧರ್ಮಶಾಸ್ತ್ರಿಗಳೂ ಫರಿಸಾಯರೂ ಯೇಸುಸ್ವಾಮಿಯನ್ನು ಉದ್ದೇಶಿಸಿ, “ಬೋಧಕರೇ, ನೀವು ಒಂದು ಸೂಚಕಕಾರ್ಯ ಮಾಡುವುದನ್ನು ನೋಡಬೇಕೆಂದಿದ್ದೇವೆ,” ಎಂದರು.


ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.


ಹೇಗೆಂದರೆ, ಕ್ರಿಸ್ತಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ.


ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.


ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


ಆದರೆ ಸ್ವರ್ಗೀಯ ಜೆರುಸಲೇಮ್ ದಾಸಿ ಅಲ್ಲ, ಸ್ವತಂತ್ರಳು, ಈಕೆಯೇ ನಮ್ಮ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು