ಪ್ರಕಟನೆ 12:10 - ಕನ್ನಡ ಸತ್ಯವೇದವು C.L. Bible (BSI)10 ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು : “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾ ಶಬ್ದವನ್ನು ಕೇಳಿದೆನು, ಅದು - ಈಗ ಜಯವೂ ಶಕ್ತಿಯೂ ರಾಜ್ಯವೂ ನಮ್ಮ ದೇವರಿಗೆ ಉಂಟಾಯಿತು; ಆತನು ಅಭಿಷೇಕಿಸಿದವನ ಅಧಿಕಾರವು ಈಗ ಸ್ಥಾಪಿತವಾಯಿತು; ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ಪರಲೋಕದಲ್ಲಾದ ಒಂದು ಮಹಾಶಬ್ದವನ್ನು ನಾನು ಕೇಳಿದೆನು: “ನಮ್ಮ ದೇವರ ಜಯವು, ಶಕ್ತಿಯು ಮತ್ತು ರಾಜ್ಯವು ಹಾಗೂ ಆತನವನಾಗಿರುವ ಕ್ರಿಸ್ತನ ಅಧಿಕಾರವು ಈಗ ಬಂದಿವೆ. ನಮ್ಮ ಸಹೋದರರ ಮೇಲೆ ದೂಷಣೆ ಮಾಡುವವನನ್ನು ಹೊರಕ್ಕೆ ಎಸೆದಿರುವುದರಿಂದ ಇವುಗಳೆಲ್ಲಾ ಬಂದಿವೆ. ನಮ್ಮ ದೇವರ ಮುಂದೆ ಹಗಲಿರುಳು ನಮ್ಮ ಸಹೋದರರ ಬಗ್ಗೆ ಅವನು ದೂರು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತನ್ನಾ ಸರ್ಗಾತ್ ಮೊಟೊ ಧನ್ ಮಿಯಾ ಆಯಿಕ್ಲೊ, “ಅತ್ತಾ ದೆವಾಚಿ ಸುಟ್ಕಾ ಯೆಲಾ! ಅತ್ತಾ ದೆವಾನ್ ಎಕ್ ರಾಜಾ ಸರ್ಕೊ ಅಪ್ಲೊ ಬಳ್ ದಾಕ್ವುಲ್ಯಾನಾಯ್! ಅತ್ತಾ ತ್ಯೆಚ್ಯಾ ಕ್ರಿಸ್ತಾನ್ ಅಪ್ನಾಚೊ ಅಧಿಕಾರ್ ದಾಕ್ವುಲ್ಯಾನಾಯ್! ದೆವಾಚ್ಯಾ ಇದ್ರಾಕ್ ಇಬೆ ರ್‍ಹಾವ್ನ್ ವಿಶ್ವಾಸ್, ಹೊತ್ಯಾ ಭಾವ್ ಭೆನಿಕ್ನಿ ಕರ್ತಲ್ಯಾಕ್ನಿ ದಿಸ್ ಅನಿ ರಾತ್ ಪಸ್ವುತಲ್ಯಾಕ್ ಸರ್ಗಾತ್ನಾ ಕಾಡುನ್ ಭಾಯ್ರ್ ಟಾಕುನ್ ಹೊಲ್ಲೆ ಹಾಯ್. ಅಧ್ಯಾಯವನ್ನು ನೋಡಿ |