Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:11 - ಕನ್ನಡ ಸತ್ಯವೇದವು C.L. Bible (BSI)

11 ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಮ್ಮ ಸಹೋದರರು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಸೋಲಿಸಿದರು. ಅವರು ತಮ್ಮ ಜೀವಗಳನ್ನು ಪ್ರೀತಿಸಲಿಲ್ಲ. ಅವರು ಮರಣಕ್ಕೆ ಭಯಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಮ್ಚ್ಯಾ ಭಾವ್ ಅನಿ ಭೆನಿಯಾನಿ ಅಪ್ನಾಚಿ ಪರ್ವಾ ಕರಿನಸ್ತಾನಾ, ಬೊಕ್ಡಾಚ್ಯಾ ರಗ್ತಾಚ್ಯಾ ಅನಿ ತೆನಿ ಪರ್ಗಟ್ ಕರಲ್ಲ್ಯಾ ಖರ್‍ಯಾಚ್ಯಾ ಬಳಾನ್ ತೆಕಾ ಹಾರ್ವುನ್ ಜಿಕ್ಲ್ಯಾನಾತ್, ಅನಿ ತೆನಿ ತೆಂಚೊ ಜಿವ್ ಸೈತ್ ದಿವ್ಕ್ ತಯಾರ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:11
33 ತಿಳಿವುಗಳ ಹೋಲಿಕೆ  

ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ?


ಆದರೆ ನಮ್ಮ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ನಮಗೆ ಜಯವನ್ನು ದೊರಕಿಸಿಕೊಟ್ಟಿರುವ ದೇವರಿಗೆ ಸ್ತೋತ್ರ ಸಲ್ಲಲಿ!


ನಾನು ನನ್ನ ಪಿತನಿಂದ ಅಧಿಕಾರ ಪಡೆದಿರುವಂತೆಯೇ, ಜಯಹೊಂದುವವನಿಗೆ ಹಾಗು ನಾನು ಮೆಚ್ಚುವ ಕಾರ್ಯಗಳನ್ನು ಕೊನೆಯವರೆಗೂ ಮುಂದುವರಿಸಿಕೊಂಡು ಹೋಗುವವನಿಗೆ, ‘ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು ಅವನು ಅವುಗಳನ್ನು ಕಬ್ಬಿಣದ ದಂಡದಿಂದ ಆಳುವನು ಮಣ್ಣಿನ ಮಡಕೆಯಂತೆ ಅವುಗಳನ್ನು ನುಚ್ಚುನೂರು ಮಾಡುವನು.’ ಅಂಥವನಿಗೆ ಉದಯ ತಾರೆಯನ್ನು ನೀಡುವೆನು.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


“ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು.


ಇವರ ಸಾಕ್ಷ್ಯನೀಡಿಕೆ ಮುಗಿದ ನಂತರ ಪಾತಾಳಕೂಪದಿಂದ ಮೃಗವೊಂದು ಮೇಲೇರಿಬರುತ್ತದೆ; ಅದು ಇವರೊಡನೆ ಯುದ್ಧಮಾಡಿ, ಜಯಗಳಿಸಿ ಇವರನ್ನು ಕೊಂದುಹಾಕುತ್ತದೆ.


ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.


ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ಇದರಿಂದಾಗಿ ಘಟಸರ್ಪಕ್ಕೆ ಆ ಮಹಿಳೆಯ ಮೇಲೆ ತೀವ್ರತರ ರೋಷವುಂಟಾಯಿತು. ಆಕೆಯ ಇನ್ನುಳಿದ ಸಂತತಿಯವರ ಮೇಲೆ, ಅಂದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವವರ ಮೇಲೆ ಹಾಗೂ ಯೇಸುಸ್ವಾಮಿಯ ಪರವಾಗಿ ಸಾಕ್ಷಿನೀಡುವವರ ಮೇಲೆ, ಯುದ್ಧಮಾಡಲು ಹೊರಟುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು