Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:17 - ಕನ್ನಡ ಸತ್ಯವೇದವು C.L. Bible (BSI)

17 ಇದರಿಂದಾಗಿ ಘಟಸರ್ಪಕ್ಕೆ ಆ ಮಹಿಳೆಯ ಮೇಲೆ ತೀವ್ರತರ ರೋಷವುಂಟಾಯಿತು. ಆಕೆಯ ಇನ್ನುಳಿದ ಸಂತತಿಯವರ ಮೇಲೆ, ಅಂದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವವರ ಮೇಲೆ ಹಾಗೂ ಯೇಸುಸ್ವಾಮಿಯ ಪರವಾಗಿ ಸಾಕ್ಷಿನೀಡುವವರ ಮೇಲೆ, ಯುದ್ಧಮಾಡಲು ಹೊರಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಘಟ ಸರ್ಪವು ಆ ಸ್ತ್ರೀಯ ಮೇಲೆ ಬಹಳ ಕೋಪಗೊಂಡು ಆಕೆಯ ಇತರ ಮಕ್ಕಳೆಲ್ಲರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಅನುಸರಿಸುವವರ ಮತ್ತು ಯೇಸುವಿನ ಕುರಿತು ಸಾಕ್ಷಿ ಹೇಳುವವರ ಮೇಲೆ ಹೋರಾಟ ಮಾಡಲು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹುಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಎಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು, ಯೇಸುವಿನ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ತೊ ಭಯಾನಕ್ ಸಾಂಪ್ ತ್ಯಾ ಭಾಯ್ಕೊಮನ್ಸಿ ವರ್ತಿ ಲೈ ರಾಗ್ ಹೊಲೊ, ಅನಿ ತೊ ತಿಚ್ಯಾ ಪಿಳ್ಗಿಚ್ಯಾ ಮಟ್ಲ್ಯಾರ್ ದೆವಾಕ್ ಖಾಲ್ತಿ ಹೊವ್ನ್ ಚಲ್ತಲ್ಯಾ, ಅನಿ ಜೆಜುಚಿ ಸಾಕ್ಷಿ ಹೊವ್ನ್ ಹೊತ್ಯಾ ಸಗ್ಳ್ಯಾ ಲೊಕಾಂಚ್ಯಾ ವಿರೊದ್ ಮಾರಾಮಾರಿ ಕರುಕ್ ಉಟಲ್ಲೊ ಹಾಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:17
26 ತಿಳಿವುಗಳ ಹೋಲಿಕೆ  

ಆದ್ದರಿಂದ ದೇವರ ಆಜ್ಞೆಗಳನ್ನು ಕೈಗೊಂಡು ಯೇಸುಸ್ವಾಮಿಯಲ್ಲಿ ವಿಶ್ವಾಸವಿಟ್ಟು ನಡೆಯುವ ದೇವಜನರಲ್ಲಿ ಸಹನೆ, ಸಹಿಷ್ಣುತೆ ಇರಬೇಕು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಇವರ ಸಾಕ್ಷ್ಯನೀಡಿಕೆ ಮುಗಿದ ನಂತರ ಪಾತಾಳಕೂಪದಿಂದ ಮೃಗವೊಂದು ಮೇಲೇರಿಬರುತ್ತದೆ; ಅದು ಇವರೊಡನೆ ಯುದ್ಧಮಾಡಿ, ಜಯಗಳಿಸಿ ಇವರನ್ನು ಕೊಂದುಹಾಕುತ್ತದೆ.


ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.


ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.


ಇದಲ್ಲದೆ, ದೇವಜನರ ವಿರುದ್ಧ ಯುದ್ಧಮಾಡಿ, ಜಯಗಳಿಸುವಂತೆ ಅದಕ್ಕೆ ಅವಕಾಶವನ್ನು ಕೊಡಲಾಯಿತು. ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಮೇಲೆ ಅದಕ್ಕೆ ಅಧಿಕಾರವನ್ನು ನೀಡಲಾಯಿತು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ದೇವರ ಪುತ್ರನಲ್ಲಿ ವಿಶ್ವಾಸವಿಡುವವನು ಈ ಸಾಕ್ಷ್ಯವನ್ನು ತನ್ನ ಅಂತರಂಗದಲ್ಲೇ ಹೊಂದಿರುತ್ತಾನೆ. ದೇವರಲ್ಲಿ ವಿಶ್ವಾಸವಿಡದವನಾದರೋ ಅವರನ್ನು ಸುಳ್ಳುಗಾರರನ್ನಾಗಿಸುತ್ತಾನೆ. ಹೇಗೆಂದರೆ, ದೇವರು ತಮ್ಮ ಪುತ್ರನ ಪರವಾಗಿ ಕೊಟ್ಟ ಸಾಕ್ಷ್ಯದಲ್ಲಿ ಅವನಿಗೆ ನಂಬಿಕೆಯಿಲ್ಲ.


ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಪಾಲಿಸುವುದರಿಂದ ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದು ನಿಶ್ಚಯ ಆಗುತ್ತದೆ.


ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


ಅನಂತರ ಆ ಮೃಗವನ್ನು ಕಂಡೆ. ಕುದುರೆಯ ಮೇಲೆ ಕುಳಿತಿದ್ದಾತನ ಮೇಲೂ ಅವನ ಸೈನ್ಯದ ಮೇಲೂ ಯುದ್ಧಮಾಡುವುದಕ್ಕಾಗಿ, ಆ ಮೃಗವೂ ಭೂಲೋಕದ ರಾಜರೂ ಅವರ ಸೈನ್ಯಗಳೊಡನೆ ಒಟ್ಟಾಗಿ ಸೇರಿಬಂದರು.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಆದರೆ ಭೂಮಿ ಆಕೆಯ ನೆರವಿಗೆ ಬಂದಿತು. ಅದು ತನ್ನ ಬಾಯನ್ನು ತೆರೆದು ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು