Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:2 - ಕನ್ನಡ ಸತ್ಯವೇದವು C.L. Bible (BSI)

2 ಆಕೆ ತುಂಬು ಗರ್ಭಿಣಿ, ಪ್ರಸವ ವೇದನೆಯಿಂದ ನರಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಕೆಯು ಗರ್ಭಿಣಿಯಾಗಿದ್ದು ಹೆರುವುದಕ್ಕೆ ಪ್ರಸವವೇದನೆಯಿಂದ ನರಳುತ್ತಾ ಅಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಸಂಕಟಪಡುತ್ತಾ ಕೂಗುತ್ತಿದ್ದಳು. ಪರಲೋಕದಲ್ಲಿ ಮತ್ತೊಂದು ಲಕ್ಷಣವು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಕೆಯು ಗರ್ಭಿಣಿಯಾಗಿದ್ದಳು ಆಕೆಯು ಪ್ರಸವವೇದನೆಯಿಂದ ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಕೆಯು ಗರ್ಭಿಣಿಯಾಗಿದ್ದು, ಪ್ರಸವವೇದನೆಯಿಂದ ನರಳುತ್ತಾ ಕೂಗುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತಿ ಲಗ್ಗುನಾಚ್ ಬಾನತ್ ಹೊನಾರ್ ಹೊತ್ತಿ, ಅನಿ ಪೊರಾಕ್ ಬಾನತ್ ಹೊತಲೊ ತರಾಸ್ ಅನಿ ದುಕ್ ತಿಕಾ ಬೊಬ್ ಮಾರುಕ್‍ಲಾವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:2
12 ತಿಳಿವುಗಳ ಹೋಲಿಕೆ  

ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು.


ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.


ಗರ್ಭಿಣಿಯಾದ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ; ಮಗುವನ್ನು ಹೆರುತ್ತಲೇ ಜಗದಲ್ಲಿ ಮಾನವನೊಬ್ಬನು ಜನಿಸಿದನೆಂಬ ಉಲ್ಲಾಸದಿಂದ ತಾನು ಪಟ್ಟ ವೇದನೆಯನ್ನು ಮರೆತುಬಿಡುತ್ತಾಳೆ;


“ಸಂತಾನವಿಲ್ಲದ ಸ್ತ್ರೀಯೇ, ಸಂತೋಷಿಸು ಪ್ರಸವವೇದನೆಯನರಿಯದವಳೇ, ಹರ್ಷೋದ್ಗಾರಮಾಡು ಗಂಡನುಳ್ಳವಳಿಗಿಂತ ಕೈಬಿಟ್ಟವಳ ಸಂತಾನ ಹೆಚ್ಚು.” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ.


ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ಆನಂದ ಗೀತೆಯನು ಹಾಡು ಹೆರದವಳೇ, ಬಂಜೆಯಾಗಿದ್ದವಳೇ; ಉಲ್ಲಾಸದಿಂದ ಅರಚು, ಬೇನೆಯನು ಅನುಭವಿಸದವಳೇ. ‘ಗಂಡನುಳ್ಳವಳಿಗಿಂತ ಹೆಚ್ಚು ಮಕ್ಕಳನ್ನು ಹೆರುವೆ’ ಎಂದು ಹೇಳುತ್ತಾರೆ ಸರ್ವೇಶ್ವರ ಸ್ವಾಮಿ ನಿನಗೆ.


ಹೆರಿಗೆ ಹತ್ತಿರವಾದ ಗರ್ಭಿಣಿ ಚೀರುವಂತೆ ಯಾತನೆಪಡುವ ಬೇನೆಯಿಂದಾಕೆ ಅರಚುವಂತೆ ಮಾಡಿರುವೆ, ಸರ್ವೇಶ್ವರಾ, ನಿನಗಾಗಿ ನಾವು ಮೊರೆಯಿಡುವಂತೆ.


ಇಗೋ ಕೇಳಿ, ನಗರದ ಕಡೆಯಿಂದ ಕೋಲಾಹಲದ ಶಬ್ದ, ದೇವಾಲಯದಲ್ಲಿ ಶಬ್ದ, ಸರ್ವೇಶ್ವರ ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ !


ನೀನೀಗ ರೋದಿಸುವುದೇಕೆ? ಪ್ರಸವವೇದನೆ ಪಡುವವಳಂತೆ ನರಳುವುದೇಕೆ? ನಿನಗೆ ರಾಜನಿಲ್ಲವೇ? ನಿನ್ನ ಸಲಹೆಗಾರ ಸತ್ತುಹೋದನೇ?


ಇವೆಲ್ಲವೂ ಪ್ರಸವ ವೇದನೆಯ ಪ್ರಾರಂಭ ಮಾತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು