Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:6 - ಕನ್ನಡ ಸತ್ಯವೇದವು C.L. Bible (BSI)

6 ಆ ಮಹಿಳೆ ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಆಕೆಗೆ ಶುಶ್ರೂಷೆಯಾಗಬೇಕೆಂದು ದೇವರೇ ಆ ಸ್ಥಳವನ್ನು ಸಜ್ಜುಗೊಳಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರುವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಸ್ತ್ರೀಯು ತನಗಾಗಿ ದೇವರು ಸಿದ್ಧಪಡಿಸಿದ್ದ ಮರುಳುಗಾಡಿನ ಒಂದು ಸ್ಥಳಕ್ಕೆ ಓಡಿಹೋದಳು. ಆ ಮರಳುಗಾಡಿನಲ್ಲಿ ಆಕೆಯನ್ನು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪೋಷಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಿ ಬಾಯ್ಕೊಮಾನುಸ್ ಡಂಗ್ಳಿತ್ ಪಳುನ್ ಗೆಲಿ, ತೊ ಜಾಗೊ ದೆವಾನ್ ತಿಚ್ಯಾಸಾಟಿ ತಯಾರ್ ಕರುನ್ ಥವಲ್ಲ್ಯಾನ್ ಥೈ ಎಕ್ ಹಜಾರ್ ದೊನ್‍ಸೆ ಸಾಟ್ ದಿಸಾ ತಿಚಿ ಕಾಳ್ಜಿ ಕರುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:6
10 ತಿಳಿವುಗಳ ಹೋಲಿಕೆ  

ಜಂಬದ ಹೇಳಿಕೆಗಳನ್ನೂ ದೇವದೂಷಣೆಯ ಮಾತುಗಳನ್ನೂ ಆಡುವುದಕ್ಕೆ ಆ ಮೃಗಕ್ಕೆ ಒಂದು ಬಾಯನ್ನು ಕೊಡಲಾಗಿತ್ತು. ನಲವತ್ತ ಎರಡು ತಿಂಗಳುಗಳವರೆಗೆ ತನ್ನ ಕಾರ್ಯ ಸಾಧಿಸಿಕೊಳ್ಳುವ ಅಧಿಕಾರವನ್ನೂ ಅದಕ್ಕೆ ನೀಡಲಾಗಿತ್ತು.


ಆಗ ಆ ಮಹಿಳೆ ಅರಣ್ಯದಲ್ಲಿರುವ ತನ್ನ ಸ್ಥಳಕ್ಕೆ ಹಾರಿಹೋಗುವಂತೆ ದೊಡ್ಡ ಗರುಡಪಕ್ಷಿಗಿರುವಂಥ ಎರಡು ರೆಕ್ಕೆಗಳನ್ನು ಆಕೆಗೆ ಕೊಡಲಾಯಿತು. ಅಲ್ಲಿ ಘಟಸರ್ಪದ ಕಣ್ಣಿಗೆ ಬೀಳದೆ ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುವಂತಾಯಿತು.


ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು.


ಆಗ ಪಿಶಾಚಿ ಯೇಸುವನ್ನು ಬಿಟ್ಟು ತೊಲಗಿತು. ದೇವದೂತರು ಬಂದು ಅವರನ್ನು ಉಪಚರಿಸಿದರು.


1335 ದಿನಗಳ ಮಟ್ಟಿಗೆ ವಿಶ್ವಾಸದಿಂದ ಕಾದಿರುವವರು ಧನ್ಯರು!


ನಾನು ದೇವರಾತ್ಮ ವಶನಾದೆ. ಆಗ ದೇವದೂತನು ನನ್ನನ್ನು ಅಡವಿಗೆ ಕೊಂಡೊಯ್ದನು. ಅಲ್ಲಿ, ಒಂದು ಕಡುಗೆಂಪಾದ ಮೃಗದ ಮೇಲೆ ಕುಳಿತಿದ್ದ ಸ್ತ್ರೀಯೊಬ್ಬಳನ್ನು ಕಂಡೆ. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಮಾತುಗಳೇ ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು