ಪ್ರಕಟನೆ 13:12 - ಕನ್ನಡ ಸತ್ಯವೇದವು C.L. Bible (BSI)12 ಈ ಮೃಗವು, ಮೊದಲನೆಯ ಮೃಗಕ್ಕಿದ್ದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲೇ ಚಲಾಯಿಸಿತು. ಮಾರಕವಾದ ಗಾಯದಿಂದ ಗುಣಹೊಂದಿದ ಆ ಮೊದಲನೆಯ ಮೃಗವನ್ನು ಭೂಲೋಕವು ಮತ್ತು ಅದರ ನಿವಾಸಿಗಳು ಆರಾಧಿಸುವಂತೆ ಮಾಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಈ ಮೃಗವು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಸನ್ನಿಧಿಯಲ್ಲೇ ನಡಿಸುತ್ತದೆ. ಇದು ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ನಮಸ್ಕರಿಸುವಂತೆ ಮಾಡುವಂಥದಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಈ ಮೃಗವು ಮೊದಲಿನ ಮೃಗದ ಅಧಿಕಾರವನ್ನೇ ಬಳಸುತ್ತದೆ. ಭೂಮಿಯ ಮೇಲೆ ವಾಸಿಸುವ ಜನರೆಲ್ಲರೂ ಮೊದಲಿನ ಮೃಗವನ್ನು ಆರಾಧಿಸುವಂತೆ ಮಾಡಲು ಅದು ತನ್ನ ಶಕ್ತಿಯನ್ನೆಲ್ಲಾ ಬಳಸುತ್ತದೆ. ಮರಣಕರವಾದ ಗಾಯದಿಂದ ಗುಣಮುಖವಾದದ್ದೇ ಮೊದಲನೆಯ ಮೃಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲಿ ಚಲಾಯಿಸಿತು. ಇದು ಮರಣಕರವಾದ ಗಾಯದಿಂದ ವಾಸಿಯಾದ ಮೊದಲನೆಯ ಮೃಗವನ್ನು ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತೆನಿ ತ್ಯಾ ಪಯ್ಲೆಚ್ಯಾ ಭಯಾನಕ್ ಸಾಪಾಚ್ಯಾ ಇದ್ರಾಕುಚ್ ತೆಕಾ ದಿಲ್ಲ್ಯಾ ಮೊಟ್ಯಾ ಅದಿಕಾರಾಚೊ ಉಪಯೊಗ್ ಕರ್ಲ್ಯಾನ್ ತೆನಿ ಜಿಮ್ನಿಕ್ ಅನಿ ತ್ಯೆಚ್ಯಾ ವರ್ತಿ ಜಿವನ್ ಕರ್ತಾಲ್ಯಾ ಸಗ್ಳ್ಯಾನಿ ತ್ಯೆಚ್ಯಾವರ್ತಿ ಅನಿ ತ್ಯಾ ದುಕ್ ಗುನ್ ಹೊಲ್ಲ್ಯಾ ಜನಾವರಾಚೆ ಆರಾದನ್ ಕರುಕ್ ಜಬರ್ದಸ್ತಿ ಕರ್ಲ್ಯಾನ್. ಅಧ್ಯಾಯವನ್ನು ನೋಡಿ |
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.