15 ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.
15 ಮೊದಲನೆಯ ಮೃಗದ ವಿಗ್ರಹಕ್ಕೆ ಜೀವ ಬರುವಂತೆ ಮಾಡುವ ಶಕ್ತಿಯನ್ನು ಎರಡನೆಯ ಮೃಗಕ್ಕೆ ಕೊಡಲಾಯಿತು. ಆಗ ಆ ವಿಗ್ರಹಕ್ಕೆ ಮಾತಾಡುವ ಶಕ್ತಿ ಬಂದಿತು. ಅದು ತನ್ನನ್ನು ಪೂಜಿಸದವರನ್ನೆಲ್ಲಾ ಕೊಲ್ಲುವುದಾಗಿ ಆಜ್ಞೆ ಹೊರಡಿಸಿತು.
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.
ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.
ಅದರಂತೆಯೇ ಮೊದಲನೆಯ ದೇವದೂತನು ಹೋಗಿ ತನ್ನ ಪಾತ್ರೆಯಲ್ಲಿ ಇದ್ದುದನ್ನು ಭೂಮಿಯ ಮೇಲೆ ಸುರಿದನು. ಪರಿಣಾಮವಾಗಿ, ಮೊದಲನೆಯ ಮೃಗದ ಹಚ್ಚೆ ಚುಚ್ಚಿಸಿಕೊಂಡವರ ಮತ್ತು ಅದರ ವಿಗ್ರಹವನ್ನು ಪೂಜಿಸಿದವರ ಮೈಮೇಲೆಲ್ಲಾ ಭಯಂಕರವಾದ ಉರಿ ಹುಣ್ಣುಗಳು ಎದ್ದವು.
ಅಂಥವರ ನರಳಾಟದ ಹೊಗೆ ಸತತ ಮೇಲೇರುತ್ತಿರುತ್ತದೆ. ಮೃಗಕ್ಕೂ ಅದರ ವಿಗ್ರಹಕ್ಕೂ ಪೂಜೆಸಲ್ಲಿಸುವವರು ಮತ್ತು ಅದರ ಹೆಸರನ್ನು ಸೂಚಿಸುವ ಹಚ್ಚೆಯನ್ನು ಚುಚ್ಚಿಸಿಕೊಂಡವರು ಹಗಲಿರುಳೂ ಬಿಡುವಿಲ್ಲದೆ ಸಂಕಟಪಡುವರು,” ಎಂದು ಹೇಳಿದನು.
ಇದಾದ ಮೇಲೆ ಮೂರನೆಯ ದೇವದೂತನು ಬಂದನು. ಈತನು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಯಾರಾದರೂ ಮೊದಲನೆಯ ಮೃಗವನ್ನೂ ಅದರ ವಿಗ್ರಹವನ್ನೂ ಪೂಜಿಸಿದರೆ ಅಥವಾ ತನ್ನ ಹಣೆಯ ಮೇಲಾಗಲೀ ಕೈಯ ಮೇಲಾಗಲೀ ಗುರುತಿನ ಹಚ್ಚೆಯನ್ನು ಚುಚ್ಚಿಸಿಕೊಂಡರೆ,
ಮೊದಲನೆಯ ಮೃಗದ ಎದುರಿನಲ್ಲಿ ಪವಾಡಗಳನ್ನೆಸಗುವ ಅನುಮತಿ ಇದ್ದುದರಿಂದ ಅದು ಭೂನಿವಾಸಿಗಳನ್ನು ಮರುಳುಗೊಳಿಸಿತು. ಖಡ್ಗದಿಂದ ಗಾಯಗೊಂಡಿದ್ದರೂ ಸಾಯದೆ ಬದುಕಿದ್ದ ಮೃಗದ ಗೌರವಾರ್ಥ ಒಂದು ವಿಗ್ರಹವನ್ನು ನಿರ್ಮಿಸಬೇಕೆಂದು ಭೂನಿವಾಸಿಗಳಿಗೆ ಅದು ವಿಧಿಸಿತು.
ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.
ಹೀಗೆ ದೈವಸಂಕಲ್ಪವು ನೆರವೇರಬೇಕೆಂದು ದೇವರೇ ಆ ಜನರನ್ನು ಪ್ರೇರೇಪಿಸುವರು. ಇದೇ ಪ್ರೇರಣೆಯಿಂದಾಗಿ ದೇವರ ವಾಕ್ಯ ನೆರವೇರುವವರೆಗೆ ಅವರು ಒಮ್ಮನಸ್ಸಿನಿಂದ ರಾಜ್ಯಾಧಿಕಾರವನ್ನು ಆ ಮೃಗಕ್ಕೆ ಒಪ್ಪಿಸಿಬಿಡುವರು.
ಇದರ ಮುಂದೆ ಜನರು ತಿಳುವಳಿಕೆಯಿಲ್ಲದ ಪಶುಪ್ರಾಯರು ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಪೊಳ್ಳು, ಶ್ವಾಸವಿಲ್ಲದವುಗಳು, ಅವನು ಎರಕಹೊಯ್ದ ಪುತ್ತಳಿಗಳು.
ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.
ಸೌತೆ ತೋಟದ ಬೆದರುಗಂಬದಂತಿರುವ ಈ ಬೊಂಬೆಗಳು ಮಾತನಾಡಲಾರವು. ಅವನ್ನು ಹೊತ್ತುಕೊಂಡು ಹೋಗಬೇಕು, ಅವು ನಡೆಯಲಾರವು. ಅವುಗಳಿಗೆ ನೀವು ಅಂಜಬೇಕಾಗಿಲ್ಲ, ಅವು ಕೇಡುಮಾಡಲಾರವು; ಮೇಲುಮಾಡಲಿಕ್ಕೂ ಸಾಮರ್ಥ್ಯವಿಲ್ಲದಿರುವುವು.”
ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.
ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ.
ನಾನು ಸಮುದ್ರದ ತೀರದಲ್ಲಿ ನಿಂತಿದ್ದೆ. ಆಗ ನನಗೆ ಈ ದೃಶ್ಯ ಕಾಣಿಸಿತು: ಒಂದು ಮೃಗ ಸಮುದ್ರದಿಂದ ಮೇಲೆ ಏರಿಬಂದಿತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಪ್ರತಿಯೊಂದು ಕೊಂಬಿನ ಮೇಲೂ ಒಂದೊಂದು ಮುಕುಟವಿತ್ತು, ತಲೆಗಳ ಮೇಲೆ ದೇವದೂಷಣೆ ಮಾಡುವ ಹೆಸರುಗಳು ಇದ್ದವು.
ಈ ಮೃಗವು, ಮೊದಲನೆಯ ಮೃಗಕ್ಕಿದ್ದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲೇ ಚಲಾಯಿಸಿತು. ಮಾರಕವಾದ ಗಾಯದಿಂದ ಗುಣಹೊಂದಿದ ಆ ಮೊದಲನೆಯ ಮೃಗವನ್ನು ಭೂಲೋಕವು ಮತ್ತು ಅದರ ನಿವಾಸಿಗಳು ಆರಾಧಿಸುವಂತೆ ಮಾಡಿತು.