Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:17 - ಕನ್ನಡ ಸತ್ಯವೇದವು C.L. Bible (BSI)

17 ಆ ಗುರುತಿನ ಹಚ್ಚೆಯನ್ನು ಯಾರು ಚುಚ್ಚಿಸಿಕೊಳ್ಳಲಿಲ್ಲವೋ ಅವರು ಕೊಳ್ಳುವುದಕ್ಕಾಗಲಿ, ಮಾರುವುದಕ್ಕಾಗಲಿ ಸಾಧ್ಯ ಇರಲಿಲ್ಲ. ಆ ಗುರುತಿನ ಮುದ್ರೆ ಏನೆಂದರೆ ಮೃಗದ ಹೆಸರು ಇಲ್ಲವೆ, ಆ ಹೆಸರನ್ನು ಸೂಚಿಸುವ ಸಂಖ್ಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಸಂಖ್ಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡಿಸಕೂಡದೆಂತಲೂ ಆಜ್ಞೆಮಾಡುತ್ತದೆ. ಆ ಗುರುತು ಯಾವದಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಅಂಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಗುರುತಿಲ್ಲದೆ ಯಾರೂ ಕೊಳ್ಳುವಂತಿಲ್ಲ ಮತ್ತು ಮಾರುವಂತಿಲ್ಲ. ಈ ಗುರುತು ಏನೆಂದರೆ ಆ ಮೃಗದ ಹೆಸರು ಅಥವಾ ಅದರ ಹೆಸರಿನ ಸಂಖ್ಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆ ಗುರುತಾಗಲಿ, ಮೃಗದ ಹೆಸರಾಗಲಿ, ಅದರ ಹೆಸರಿನ ಸಂಖ್ಯೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕೊನ್‍ಬಿ ಹಿ ವಳಕ್ ನಸ್ತಾನಾ ಇಕಾತ್ ಘೆವ್ ನ್ಹಯ್ ನಾಹೊಲ್ಯಾರ್ ಇಕಾತ್ ದಿವ್ಚೆ ನ್ಹಯ್, ತ್ಯಾ ಭಯಾನಕ್ ಸಾಪಾಚೆ ನಾಂವ್ ತೆ, ನಾ ಹೊಲ್ಯಾರ್ ಭಯಾನಕ್ ಸಾಪಾಚ್ಯಾ ನಾವಾಸಾಟ್ನಿ ಮನುನ್ ಹೊತ್ತೆ ಆಂಕೆ ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:17
11 ತಿಳಿವುಗಳ ಹೋಲಿಕೆ  

ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು.


ಅಂಥವರ ನರಳಾಟದ ಹೊಗೆ ಸತತ ಮೇಲೇರುತ್ತಿರುತ್ತದೆ. ಮೃಗಕ್ಕೂ ಅದರ ವಿಗ್ರಹಕ್ಕೂ ಪೂಜೆಸಲ್ಲಿಸುವವರು ಮತ್ತು ಅದರ ಹೆಸರನ್ನು ಸೂಚಿಸುವ ಹಚ್ಚೆಯನ್ನು ಚುಚ್ಚಿಸಿಕೊಂಡವರು ಹಗಲಿರುಳೂ ಬಿಡುವಿಲ್ಲದೆ ಸಂಕಟಪಡುವರು,” ಎಂದು ಹೇಳಿದನು.


ಹಿರಿಯ ಕಿರಿಯ, ಬಡವ ಬಲ್ಲಿದ, ದಾಸ ದಣಿ ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತಿನ ಹಚ್ಚೆ ಚುಚ್ಚಿಸಿಕೊಳ್ಳಬೇಕೆಂದು ಆ ಎರಡನೆಯ ಮೃಗ ಆಜ್ಞಾಪಿಸಿತು.


ಆ ಹೆಸರು ಆ ದಾಸರ ಹಣೆಗಳ ಮೇಲೆ ಲಿಖಿತವಾಗಿರುವುದು.


ಇದಾದ ಮೇಲೆ ಮೂರನೆಯ ದೇವದೂತನು ಬಂದನು. ಈತನು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಯಾರಾದರೂ ಮೊದಲನೆಯ ಮೃಗವನ್ನೂ ಅದರ ವಿಗ್ರಹವನ್ನೂ ಪೂಜಿಸಿದರೆ ಅಥವಾ ತನ್ನ ಹಣೆಯ ಮೇಲಾಗಲೀ ಕೈಯ ಮೇಲಾಗಲೀ ಗುರುತಿನ ಹಚ್ಚೆಯನ್ನು ಚುಚ್ಚಿಸಿಕೊಂಡರೆ,


ಇದನ್ನು ಅರ್ಥಮಾಡಿಕೊಳ್ಳಲು ಜ್ಞಾನ ಬೇಕು. ಬುದ್ಧಿವಂತನು ಮೃಗದ ಸಂಖ್ಯೆಯನ್ನು ಎಣಿಸಲಿ. ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆ. ಆ ಸಂಖ್ಯೆಯು 666.


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.


ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡದಿರಲಿ. ಯೇಸುವಿನ ದಾಸನೆಂದು ಸೂಚಿಸುವ ಕೆಂಗುರುತುಗಳು ನನ್ನ ದೇಹದಲ್ಲಿ ಮುದ್ರಿತವಾಗಿವೆ.


“ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು