ಪ್ರಕಟನೆ 13:4 - ಕನ್ನಡ ಸತ್ಯವೇದವು C.L. Bible (BSI)4 ಜನರು ಆ ಮೃಗವನ್ನು ಮಾತ್ರವಲ್ಲ, ಅದಕ್ಕೆ ಅಧಿಕಾರವನ್ನು ಕೊಟ್ಟ ಘಟಸರ್ಪವನ್ನೂ ಆರಾಧಿಸಿದರು. ಮೃಗವನ್ನು ಕುರಿತು, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ನಮಸ್ಕಾರ ಮಾಡುವವರಾದರು. ಇದಲ್ಲದೆ ಆ ಮೃಗಕ್ಕೂ ನಮಸ್ಕಾರ ಮಾಡಿ - ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧಮಾಡುವದಕ್ಕೆ ಯಾರು ಶಕ್ತರು? ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಘಟಸರ್ಪವು ತನ್ನ ಶಕ್ತಿಯನ್ನೆಲ್ಲಾ ಆ ಮೃಗಕ್ಕೆ ನೀಡಿದ್ದರಿಂದ ಜನರೆಲ್ಲರೂ ಆ ಸರ್ಪವನ್ನೂ ಆ ಮೃಗವನ್ನೂ ಆರಾಧಿಸಿ, “ಮೃಗಕ್ಕಿಂತಲೂ ಅಧಿಕ ಬಲಶಾಲಿಗಳು ಯಾರಿದ್ದಾರೆ? ಅದರ ವಿರುದ್ಧ ಯಾರು ಹೋರಾಡಬಲ್ಲರು?” ಎಂದು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಜನರು ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟಿದ್ದರಿಂದ, ಆ ಘಟಸರ್ಪನನ್ನು ಆರಾಧಿಸಿದರು. ಇದಲ್ಲದೆ ಆ ಮೃಗವನ್ನೂ ಆರಾಧಿಸಿ, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಸಗ್ಳೆಜಾನಾನಿ ಭಯಾನಕ್ ಸಾಪಾಚೆ ಆರಾದಾನ್ ಕರ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಅಪ್ನಾಚೊ ಸಗ್ಳೊ ಅದಿಕಾರ್ ತ್ಯಾ ಭಯಾನಕ್ ಸಾಪ್ ದಿಲ್ಲ್ಯಾನ್. ತೆನಿ, ಹ್ಯಾ ಭಯಾನಕ್ ಸಾಪ್ ಸರ್ಕೆ ಕೊನ್ ಹಾಯ್? ಹೆಚ್ಯಾ ವಾಂಗ್ಡಾ ಕುಸ್ತಿ ಧರುನ್ ಕೊನಾಕ್ ಹೊತಾ? ಮನುನ್ಗೆತ್ ಭಯಾನಕ್ ಸಾಪ್‍ಬಿ ಆರಾದನ್ ಕರ್ಲ್ಯಾನಿ. ಅಧ್ಯಾಯವನ್ನು ನೋಡಿ |