Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:5 - ಕನ್ನಡ ಸತ್ಯವೇದವು C.L. Bible (BSI)

5 ಜಂಬದ ಹೇಳಿಕೆಗಳನ್ನೂ ದೇವದೂಷಣೆಯ ಮಾತುಗಳನ್ನೂ ಆಡುವುದಕ್ಕೆ ಆ ಮೃಗಕ್ಕೆ ಒಂದು ಬಾಯನ್ನು ಕೊಡಲಾಗಿತ್ತು. ನಲವತ್ತ ಎರಡು ತಿಂಗಳುಗಳವರೆಗೆ ತನ್ನ ಕಾರ್ಯ ಸಾಧಿಸಿಕೊಳ್ಳುವ ಅಧಿಕಾರವನ್ನೂ ಅದಕ್ಕೆ ನೀಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ಮತ್ತು ನಾಲ್ವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡಲು ಅವಕಾಶ ನೀಡಲಾಯಿತು. ಆ ಮೃಗಕ್ಕೆ ಅದರ ಶಕ್ತಿಯನ್ನು ನಲವತ್ತೆರಡು ತಿಂಗಳ ಕಾಲ ಬಳಸಲು ಅವಕಾಶ ನೀಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಕೊಡಲಾಯಿತು. ನಲವತ್ತೆರಡು ತಿಂಗಳುಗಳವರೆಗೆ ಕಾರ್ಯಸಾಧಿಸುವ ಅಧಿಕಾರವನ್ನೂ ಅದಕ್ಕೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಭಯಾನಕ್ ಸಾಪ್ ದೆವಾಕ್ ಅವ್ಮಾನ್ ಕರ್ತಲ್ಯಾ ಬಡಾಯೆಚ್ಯಾ ಗೊಸ್ಟಿಯಾ ಬೊಲ್ತಲೆ ತೊಂಡ್ ದಿವ್ನ್ ಹೊಲ್ಲೆ ಹೊತ್ತೆ, ಅನಿ ತೆಕಾ ಹ್ಯೊ ಅಧಿಕಾರ್ ಚಾಲ್ವುಕ್ ಚಾಳಿಸಾರ್-ದೊನ್ ಮ್ಹಯಿನೆ ಎವ್ಡೆಚ್ ಪರ್‍ವಾನ್ಗಿ ದಿಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:5
17 ತಿಳಿವುಗಳ ಹೋಲಿಕೆ  

ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಾಗಲೆ ಅವುಗಳ ನಡುವೆ ಇಗೋ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದಕ್ಕೆ ಎಡೆಮಾಡಿಕೊಡಲು ಮುಂಚಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಆಶ್ಚರ್ಯವೆಂದರೆ, ಆ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳಿದ್ದವು. ಬಡಾಯಿ ಕೊಚ್ಚಿಕೊಳ್ಳುವ ಬಾಯೂ ಇತ್ತು.


ಆ ಮಹಿಳೆ ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಆಕೆಗೆ ಶುಶ್ರೂಷೆಯಾಗಬೇಕೆಂದು ದೇವರೇ ಆ ಸ್ಥಳವನ್ನು ಸಜ್ಜುಗೊಳಿಸಿದ್ದರು.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ನಾನು ನೋಡುತ್ತಾ ಇದ್ದೆ: ಆ ಕಿರುಕೊಂಬು ಬಡಾಯಿಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.


ಆಗ ಆ ಮಹಿಳೆ ಅರಣ್ಯದಲ್ಲಿರುವ ತನ್ನ ಸ್ಥಳಕ್ಕೆ ಹಾರಿಹೋಗುವಂತೆ ದೊಡ್ಡ ಗರುಡಪಕ್ಷಿಗಿರುವಂಥ ಎರಡು ರೆಕ್ಕೆಗಳನ್ನು ಆಕೆಗೆ ಕೊಡಲಾಯಿತು. ಅಲ್ಲಿ ಘಟಸರ್ಪದ ಕಣ್ಣಿಗೆ ಬೀಳದೆ ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುವಂತಾಯಿತು.


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ಅದರ ತಲೆಯ ಮೇಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ,


ಇದಲ್ಲದೆ, ದೇವಜನರ ವಿರುದ್ಧ ಯುದ್ಧಮಾಡಿ, ಜಯಗಳಿಸುವಂತೆ ಅದಕ್ಕೆ ಅವಕಾಶವನ್ನು ಕೊಡಲಾಯಿತು. ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಮೇಲೆ ಅದಕ್ಕೆ ಅಧಿಕಾರವನ್ನು ನೀಡಲಾಯಿತು.


ಇವರ ಸಾಕ್ಷ್ಯನೀಡಿಕೆ ಮುಗಿದ ನಂತರ ಪಾತಾಳಕೂಪದಿಂದ ಮೃಗವೊಂದು ಮೇಲೇರಿಬರುತ್ತದೆ; ಅದು ಇವರೊಡನೆ ಯುದ್ಧಮಾಡಿ, ಜಯಗಳಿಸಿ ಇವರನ್ನು ಕೊಂದುಹಾಕುತ್ತದೆ.


ಕಪಟವಾಡುವ ತುಟಿಗಳನು ಪ್ರಭು ಕಡಿದುಬಿಡಲಿ I ಬಡಾಯಿಕೊಚ್ಚುವ ಜಿಹ್ವೆಯನು ಕತ್ತರಿಸಿಬಿಡಲಿ II


ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರರವರೆಗೆ ನಡೆಯುವುವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆ ಆಗುವುದು,” ಎಂದು ಹೇಳಿದನು.


1335 ದಿನಗಳ ಮಟ್ಟಿಗೆ ವಿಶ್ವಾಸದಿಂದ ಕಾದಿರುವವರು ಧನ್ಯರು!


ನಿಮ್ಮನ್ನು ಯಾರೂ ಯಾವ ರೀತಿಯಲ್ಲೂ ವಂಚಿಸದಿರಲಿ. ಆ ದಿನವು ಬರುವುದಕ್ಕೆ ಮುಂಚೆ ದೇವರಿಗೆ ವಿರುದ್ಧವಾದ ‘ಅಂತಿಮ ಪ್ರತಿಭಟನೆ’ ಉಂಟಾಗುವುದು. ‘ಪಾಪಪುರುಷನಾದ’ ಅಧರ್ಮಿ ತಲೆ ಎತ್ತಿಕೊಳ್ಳುವನು.


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು