Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:6 - ಕನ್ನಡ ಸತ್ಯವೇದವು C.L. Bible (BSI)

6 ಅದು ಬಾಯಿ ತೆರೆದು ದೇವರನ್ನು ದೂಷಿಸಿತು; ಅವರ ನಾಮವನ್ನು ಶಪಿಸಿತು. ಅವರ ಆಲಯವನ್ನು, ಅಂದರೆ ಸ್ವರ್ಗನಿವಾಸಿಗಳೆಲ್ಲರನ್ನೂ ತೆಗಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದು ಬಾಯಿತೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ ಆತನ ನಿವಾಸವನ್ನೂ ಪರಲೋಕ ನಿವಾಸಿಗಳನ್ನೂ ದೂಷಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಮೃಗವು ದೇವರಿಗೆ ಅಪಮಾನ ಮಾಡಲು ತನ್ನ ಬಾಯನ್ನು ತೆರೆಯಿತು. ಅಲ್ಲದೆ ದೇವರ ಹೆಸರಿನ ವಿರುದ್ಧವಾಗಿಯೂ ದೇವರು ವಾಸಿಸುವ ಸ್ಥಳದ ವಿರುದ್ಧವಾಗಿಯೂ ಪರಲೋಕದಲ್ಲಿ ಜೀವಿಸುವ ಜನರೆಲ್ಲರ ವಿರುದ್ಧವಾಗಿಯೂ ದೂಷಣೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ಮೃಗವು ತನ್ನ ಬಾಯಿತೆರೆದು, ದೇವರಿಗೆ ವಿರುದ್ಧವಾಗಿ ದೂಷಿಸಿ, ಅವರ ನಾಮವನ್ನೂ ಅವರ ನಿವಾಸವನ್ನೂ ಮತ್ತು ಪರಲೋಕ ನಿವಾಸಿಗಳನ್ನೂ ದೂಷಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆ ಭಯಾನಕ್ ಜನಾವರ್ ದೆವಾಕ್ ಎವ್ಡೆಚ್ ನ್ಹಯ್ ತ್ಯೆಚ್ಯಾ ನಾವಾಕ್, ತೊ ವಸ್ತಿ ಕರ್ತಲ್ಯಾ ಜಾಗ್ಯಾಕ್, ಅನಿ ಸರ್ಗಾತ್ ವಸ್ತಿ ಕರ್ತಲ್ಯಾಂಚ್ಯಾ ಸಗ್ಳ್ಯಾಂಚ್ಯಾ ವರ್ತಿ ಸರ್‍ಪುಕ್‍ಲಾಗ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:6
26 ತಿಳಿವುಗಳ ಹೋಲಿಕೆ  

ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”


ಕ್ರಿಸ್ತಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವನಿರ್ಮಿತ ಗರ್ಭಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಖದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು.


ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಅನಂತರ ಆ ಪ್ರವಾದಿಗಳಿಗೆ, “ಮೇಲೇರಿ ಬನ್ನಿ,” ಎಂದು ಸ್ವರ್ಗದಿಂದ ಒಂದು ಮಹಾವಾಣಿ ತಿಳಿಸಿತು. ಶತ್ರುಗಳು ಅವರನ್ನು ನೋಡುತ್ತಿದ್ದಂತೆಯೇ ಅವರು ಮೇಘಾರೂಢರಾಗಿ ಸ್ವರ್ಗಕ್ಕೇರಿದರು.


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಇದಲ್ಲದೆ, ಸ್ವರ್ಗ, ಭೂಮಿ, ಪಾತಾಳಗಳಲ್ಲೂ ಸಮುದ್ರದಲ್ಲೂ ಇರುವ ಸಮಸ್ತ ಸೃಷ್ಟಿಗಳು ಹೀಗೆ ಹಾಡುವುದನ್ನು ಕೇಳಿಸಿಕೊಂಡೆ : “ಸಿಂಹಾಸನದಲ್ಲಿ ಕುಳಿತವನಿಗೆ, ಯಜ್ಞಕುರಿಮರಿಯಾದಾತನಿಗೆ ಸಲ್ಲಲಿ ಯುಗಯುಗಾಂತರಕ್ಕೆ ಘನಮಾನ, ಗೌರವ, ಪರಾಕ್ರಮ, ಮತ್ತು ಮಹಿಮೆ.”


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ಅಂದರೆ, ಒಂದು ಗುಡಾರವನ್ನು ಕಟ್ಟುತ್ತಿದ್ದರು. ಅದರಲ್ಲಿ ಎರಡು ಭಾಗಗಳು ಇದ್ದವು. ಮೊದಲನೆಯ ಭಾಗಕ್ಕೆ ಪವಿತ್ರಸ್ಥಳ ಎಂದು ಹೆಸರು. ಅಲ್ಲಿ, ಒಂದು ದೀಪಸ್ತಂಭ ಮತ್ತು ಒಂದು ಮೇಜು ಇದ್ದವು. ಆ ಮೇಜಿನ ಮೇಲೆ ಅರ್ಪಣೆಯ ನೈವೇದ್ಯ ರೊಟ್ಟಿಗಳನ್ನು ಇಡುತ್ತಿದ್ದರು.


ಅವರ ಗಂಟಲೇ ತೆರೆದ ಸಮಾಧಿಯಾಗಿದೆ ನಾಲಗೆಗಳಲಿ ಮರೆಮೋಸ ತುಂಬಿತುಳುಕುತಿದೆ. ತುಟಿಯ ಕಂಪನದಲಿ ಘೋರ ವಿಷವಿದೆ.


ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.


ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವಸಂಪೂರ್ಣತೆಯನು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಕೊನೆಗೆ ಯೋಬನೇ ಬಾಯ್ದೆರೆದು ತನ್ನ ಹುಟ್ಟು ದಿನವನ್ನು ಹೀಗೆಂದು ಶಪಿಸಿದ:


ನಾಕವನೆ ತಾಕುತಿದೆ ಅವರ ಗರ್ವದ ನುಡಿ I ಜಗದಲಿ ಹರಡುತಿದೆ ಅವರ ದರ್ಪದ ನುಡಿ II


ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಾಗಲೆ ಅವುಗಳ ನಡುವೆ ಇಗೋ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದಕ್ಕೆ ಎಡೆಮಾಡಿಕೊಡಲು ಮುಂಚಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಆಶ್ಚರ್ಯವೆಂದರೆ, ಆ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳಿದ್ದವು. ಬಡಾಯಿ ಕೊಚ್ಚಿಕೊಳ್ಳುವ ಬಾಯೂ ಇತ್ತು.


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


‘ಇರುವರು ದೇವರ ಸಿಂಹಾಸನದ ಸಮ್ಮುಖದಲ್ಲೇ ಆರಾಧಿಪರಾತನನು ಹಗಲಿರುಳು ದೇವಾಲಯದಲ್ಲೇ ಸಂರಕ್ಷಿಪನಾತನು ಅವರನ್ನು ಗುಡಾರದಂತೆ.


ಇವುಗಳಾದ ಮೇಲೆ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ ಸ್ವರ್ಗದ ದೇವಾಲಯವು ತೆರೆದಿತ್ತು. ದೈವಪ್ರಸನ್ನತೆಯ ಗುಡಾರವು ಅದರೊಳಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು