ಪ್ರಕಟನೆ 13:8 - ಕನ್ನಡ ಸತ್ಯವೇದವು C.L. Bible (BSI)8 ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಜಿವಾನಿ ಮಾರಲ್ಲ್ಯಾ ಬೊಕ್ಡಾಕ್ ಸಮಂದ್ ಪಡಲ್ಲ್ಯಾ ಜಿವಾಚ್ಯಾ ಪುಸ್ತಕಾತ್ ಜಗ್ ರಚುಚ್ಯಾ ಅದ್ದಿ ಕೊನಾಚಿ ನಾವಾ ಲಿವಲ್ಲಿ ನಾತ್, ತೆನಿ ಸಗ್ಳಿ ಜಿಮ್ನಿ ವೈಲಿ ಲೊಕಾ ತ್ಯಾ ಭಯಾನಕ್ ಜನಾವರಾಕ್ ಆರಾದನ್ ಕರ್‍ತ್ಯಾತ್. ಅಧ್ಯಾಯವನ್ನು ನೋಡಿ |