Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:10 - ಕನ್ನಡ ಸತ್ಯವೇದವು C.L. Bible (BSI)

10 ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೆ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು; ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆನಿಬಿ ದೆವಾಚ್ಯಾ ಮೊಟ್ಯಾ ರಾಗಾಚ್ಯಾ ಆಯ್ದಾನಾತ್ಲೆ ವಾಯ್ನ್ ಫಿತ್ಯಾತ್! ದೆವಾಚೊ ರಾಗ್ ಮನ್ತಲ್ಯಾ ಆಯ್ದಾನಾತ್ ತೊ ವಾಯ್ನ್ ಪುರಾ ತಾಕ್ತಿನ್ ವೊತುನ್ ಹೊಲಾ, ಹೆ ಸಗ್ಳೆ ಕರಲ್ಲೆ ಸಗ್ಳೆ ಜಾನಾ ಪವಿತ್ರ್ ದೆವ್‍ದುತಾಂಚ್ಯಾ ಅನಿ ಬೊಕ್ಡಾಚ್ಯಾ ಇದ್ರಾಕ್ ಆಗಿತ್ ಅನಿ ಗಂದಕಾತ್ ತರಾಸ್ ಕರುನ್ ಘೆತ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:10
45 ತಿಳಿವುಗಳ ಹೋಲಿಕೆ  

ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ !


ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ಪ್ರಭುವಿನ ಕರಗಳಲ್ಲಿದೆ ಕೋಪಕೊಡ ಒಂದು I ತುಂಬಿದೆ ಅಮಲುಮಿಶ್ರ ರೌದ್ರರಸದಿಂದದು II ಅದನವನು ಸುರಿಯಲು ಕುಡಿವರು ಜಗದ ದುರುಳರು I ಮಡ್ಡಿಯನು ಕೂಡ ಬಿಡದೆ ಕುಡಿವರೆಲ್ಲರು II


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಅವಳು ಅಳೆದ ಅಳತೆಯಲ್ಲೇ ನೀವು ಅವಳಿಗೆ ಅಳೆಯಿರಿ; ಅವಳ ಕೃತ್ಯಗಳಿಗೆ ಇಮ್ಮಡಿಯಾಗಿ ಹಿಂದಿರುಗಿಸಿರಿ ಬೆರೆಸಿಕೊಡಿ ದ್ವಿಗುಣದಿ ಅವಳೇ ಬೆರೆಸಿದ ಮದ್ಯದ ಬಟ್ಟಲಲಿ.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಅವನೇ ತನ್ನ ವಿನಾಶವನು ಕಣ್ಣಾರೆ ಕಾಣಲಿ ಅವನೇ ಸರ್ವಶಕ್ತನಾ ರೌದ್ರರಸವನು ಸವಿಯಲಿ.


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ನೀನು ಸನ್ಮಾನದಿಂದಲ್ಲ, ಅವಮಾನದಿಂದ ತುಂಬಿರುವೆ; ನೀನೂ ಕುಡಿ; ಕುಡಿದು ನಗ್ನನಾಗು. ಸರ್ವೇಶ್ವರಸ್ವಾಮಿಯ ಬಲಗೈಯಲ್ಲಿರುವ ಕೋಪದ ಕೊಡ ನಿನ್ನ ಪಾಲಿಗೂ ಬರುವುದು. ಅವಮಾನವೇ ನಿನ್ನ ಸನ್ಮಾನವನ್ನು ಆವರಿಸಿಬಿಡುವುದು.


ಅದನ್ನು ಹೊತ್ತಿಸಿದವನು ಸರ್ವೇಶ್ವರನಾದ ನಾನೇ ಎಂದು ಸಕಲ ನರಪ್ರಾಣಿಗಳಿಗೆ ಆಗ ಗೋಚರವಾಗುವುದು; ಅದು ಆರಿಹೋಗದು’.


ಸರ್ವೇಶ್ವರಾ: “ನೀನು ಅವರಿಗೆ ಹೀಗೆಂದು ಹೇಳು: ‘ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೇಳಿದ್ದಾರೆ - ನೀವು ಕುಡಿಯಬೇಕು, ಕುಡಿದು ಕಕ್ಕಬೇಕು. ನಾನು ಕಳಿಸುವ ಖಡ್ಗಕ್ಕೆ ತುತ್ತಾಗಿ ಬೀಳಬೇಕು, ಬಿದ್ದು ಏಳಬಾರದು.’


ಎದೋಮಿನ ತೊರೆಗಳು ಡಾಂಬರಾಗಿ ಹರಿಯುವುವು. ಅದರ ಮಣ್ಣು ಗಂಧಕವಾಗುವುದು, ನಾಡೆಲ್ಲಾ ಉರಿಯುವ ಡಾಂಬರಿನಂತೆ ಇರುವುದು.


ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.


ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು.


‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!


ಬಾಬಿಲೋನಿನ ರಾಜ್ಯಪಾಲರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಯೋಧರು, ಇವರೆಲ್ಲರಿಗೆ ತಲೆಗೇರುವ ತನಕ ಕುಡಿಸುವೆನು. ಅವರು ಎಂದೆಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆ ಮಾಡುವರು ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರನೆಂಬ ರಾಜಾಧಿರಾಜರು.”


ಸರ್ವೇಶ್ವರ ಇಂತೆನ್ನುತ್ತಾರೆ: “ಕಷ್ಟವೆಂಬ ಕೊಡದಿಂದ ಕುಡಿಸಲು ಯಾರ ಪಾಲಿಗೆ ಬರಲಿಲ್ಲವೋ ಅಂಥವರೇ ಕುಡಿಯಬೇಕಾಗಿರುವಲ್ಲಿ ನೀನು ಅದರಿಂದ ತಪ್ಪಿಸಿಕೊಳ್ಳುವೆಯಾ? ಇಲ್ಲ, ಅದು ಸಾಧ್ಯವಿಲ್ಲ, ನೀನು ಕುಡಿದೇ ತೀರಬೇಕು.


ನೀನಿದನು ಕಣ್ಣಾರೆ ಕಾಣುವೆ I ದುರುಳರ ದಂಡನೆಯನು ನೋಡುವೆ II


ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ I ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ II


ಪ್ರಭುವನು ನಂಬಿ ನಡೆ ಆತನ ಪಥದಲೇ I ಉದ್ಧಾರವಾಗುವೆ, ನಾಡಿಗೊಡೆಯನಾಗುವೆ I ದುಷ್ಟರ ವಿನಾಶವನು ಕಣ್ಣಾರೆ ಕಾಣುವೆ II


ಅನ್ಯಜನರು ವಾಸಮಾಡುವರು ಅವನ ಗುಡಾರದೊಳಗೆ ಗಂಧಕವನ್ನು ಸುರಿಸಲಾಗುವುದು ಅವನ ಮನೆಯ ಮೇಲೆ.


ಎಂತಲೆ ಜನರವರ ಕಡೆ ತಿರುಗಿಕೊಳ್ಳುವರು I ನೀರಂತೆ ಅವರ ಮಾತನು ಹೀರಿಕೊಳ್ಳುವರು II


ಸಜ್ಜನರು ಚಕಿತರಾಗುವರು ಕಂಡಿದನು I “ದೇವರನು ಆಶ್ರಯಿಸಿಕೊಳ್ಳದವನಿವನು I ಸಿರಿ ಸಂಪತ್ತಿನಲೆ ಭರವಸೆಯಿಟ್ಟವನು I ತುಚ್ಛಕಾರ್ಯಗಳಲೆ ಹೆಚ್ಚಳಪಟ್ಟವನು” I ಎಂದು ಜರೆದು ಮಾಡುವರು ಪರಿಹಾಸ್ಯವನು II


ನಾನು ಗೋಗನ ಸಂಗಡ ವ್ಯಾಜ್ಯವಾಡುತ್ತಾ ಅವನನ್ನು ವ್ಯಾಧಿಗೂ ವಧೆಗೂ ಗುರಿಮಾಡುವೆನು. ಅವನ ಮೇಲೂ ಅವನ ಪಡೆಗಳ ಮೇಲೂ ಅವನೊಂದಿಗಿರುವ ಬಹು ಜನಾಂಗಗಳ ಮೇಲೂ ವಿಪರೀತ ಮಳೆ, ದೊಡ್ಡ ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.


ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ಮಂದಿ ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಆ ಪಾತ್ರೆಗಳಲ್ಲಿ ಯುಗಯುಗಾಂತರಕ್ಕೂ ಜೀವಿಸುವ ದೇವರ ರೋಷವು ತುಂಬಿತುಳುಕುತ್ತಿತ್ತು.


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಅನಂತರ ಮೃತ್ಯುವನ್ನೂ ಪಾತಾಳವನ್ನೂ ಅಗ್ನಿಸರೋವರಕ್ಕೆ ಎಸೆಯಲಾಯಿತು. ಆ ಅಗ್ನಿಸರೋವರವೇ ಎರಡನೆಯ ಮರಣ.


ಎರಡು ಕೈಗಳಿದ್ದು ನರಕದ ಆರದ ಬೆಂಕಿಗೆ ಗುರಿಯಾಗುವುದಕ್ಕಿಂತ ಅಂಗಹೀನನಾಗಿ ಅಮರಜೀವವನ್ನು ಪಡೆಯುವುದೇ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು