ಪ್ರಕಟನೆ 14:11 - ಕನ್ನಡ ಸತ್ಯವೇದವು C.L. Bible (BSI)11 ಅಂಥವರ ನರಳಾಟದ ಹೊಗೆ ಸತತ ಮೇಲೇರುತ್ತಿರುತ್ತದೆ. ಮೃಗಕ್ಕೂ ಅದರ ವಿಗ್ರಹಕ್ಕೂ ಪೂಜೆಸಲ್ಲಿಸುವವರು ಮತ್ತು ಅದರ ಹೆಸರನ್ನು ಸೂಚಿಸುವ ಹಚ್ಚೆಯನ್ನು ಚುಚ್ಚಿಸಿಕೊಂಡವರು ಹಗಲಿರುಳೂ ಬಿಡುವಿಲ್ಲದೆ ಸಂಕಟಪಡುವರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ; ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ನಮಸ್ಕಾರಮಾಡುವವರೂ ಅದರ ಹೆಸರನ್ನು ಸೂಚಿಸುವ ಗುರುತನ್ನು ಹಾಕಿಸಿಕೊಂಡಿರುವವರೆಲ್ಲರೂ ಹಗಲಿರುಳು ಉಪಶಮನವಿಲ್ಲದೆ ಯಾತನೆಪಡುವರು ಎಂದು ಮಹಾ ಶಬ್ದದಿಂದ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವರ ಯಾತನೆಯೆಂಬ ಹೊಗೆಯು ಸದಾ ಏಳುತ್ತಲೇ ಇರುವುದು. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವ ಮತ್ತು ಅದರ ಹೆಸರನ್ನು ಗುರುತು ಹಾಕಿಸಿಕೊಳ್ಳುವ ಜನರಿಗೆ ಹಗಲಲ್ಲೂ ರಾತ್ರಿಯಲ್ಲೂ ವಿಶ್ರಾಂತಿಯೆಂಬುದೇ ಇರುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಿಗಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರು ಹಗಲಿರುಳೂ ವಿಶ್ರಾಂತಿ ಪಡುವುದಿಲ್ಲಾ!” ಎಂದು ಮಹಾಶಬ್ದದಿಂದ ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೆಂಚ್ಯಾ ತರಾಸಾಚೊ ಡುಕೊಟ್ ಸದಾ ಸರ್ವತಾಕ್ ಜಾಸ್ತಿ ಹೊವ್ನ್ ವೈರ್ ಜಾತಾ. ಜನಾವರಾಚೆ ನಾಹೊಲ್ಯಾರ್ ತ್ಯೆಚ್ಯಾ ಮುರ್ತಿಕ್ ಆರಾಧನ್ ಕರ್ತಲೆ ರ್‍ಹಾಂವ್ದಿತ್. ನಾಹೊಲ್ಯಾರ್ ಕೊನಾಚ್ಯಾ ವರ್ತಿ ತೆಚಿ ವಳಕ್ ಹೊತ್ತೆ ರಾಂವ್ದಿತ್, ದಿಸ್ ಅನಿ ರಾತ್ ಮನಿನಸ್ತಾನಾ ಉಲ್ಲೆಬಿ ಆರಾಮ್ ಘೆವ್ಕ್ ಗಾವಿನಸ್ತಾನಾ ತರಾಸ್ ಸೊಸ್ತ್ಯಾತ್”. ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |