Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:13 - ಕನ್ನಡ ಸತ್ಯವೇದವು C.L. Bible (BSI)

13 ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಂತರ ನಾನು ಪರಲೋಕದಿಂದ ಒಂದು ಧ್ವನಿಯನ್ನು ಕೇಳಿದೆನು. ಆ ಧ್ವನಿಯು ಹೀಗೆ ಹೇಳಿತು: “ಇದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿದ್ದು ಸಾಯುವಂತಹ ಜನರು ಧನ್ಯರು.” “ಹೌದು, ಇದು ನಿಜ. ಆ ಜನರು ತಮ್ಮ ಪ್ರಯಾಸದ ಕೆಲಸವನ್ನು ಮುಗಿಸಿದವರಾಗಿ ವಿಶ್ರಾಂತಿ ಪಡೆಯುತ್ತಾರೆ. ಅವರು ಮಾಡಿದುದೆಲ್ಲವೂ ಅವರೊಂದಿಗೇ ಇರುತ್ತದೆ” ಎಂದು ಪವಿತ್ರಾತ್ಮನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾನಾ ಸರ್‍ಗಾ ವೈನಾ ಎಕ್ ಅವಾಜ್,“ ಹೆ ಲಿವ್ ಹಿತ್ನಾ ಫಿಡೆ ಧನಿಯಾಚ್ಯಾ ಕಾಮಾತ್ ರಾವ್ನ್ ಮರಲ್ಲೆ ಕವ್ಡೆ ಸುಖಿ!” ಮನ್ತಲೆ ಮಿಯಾ ಆಯಿಕ್ಲೊ, ತನ್ನಾ ಪವಿತ್ರ್ ಆತ್ಮ್ಯಾನ್,“ಹೊಯ್ ಖರೆಚ್ ತೆ! ತೆನಿ ತೆಂಚ್ಯಾ ಮೊಟ್ಯಾ ರಾಬ್ನುಕಿತ್ನಾ ಆರಾಮ್ ಘೆವ್ನ್ ಖುಶಿ ಕರ್‍ತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತೆಂಚಿ ಬರಿ ಕಾಮಾ ತೆಂಚ್ಯಾ ಬರ್ಯಾ ಕಾಮಾಚೆ ಪ್ರತಿಫಳ್ ತೆಚ್ಯಾ ವಾಂಗ್ಡಾಚ್‍ ಜಾತಾ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:13
41 ತಿಳಿವುಗಳ ಹೋಲಿಕೆ  

ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.


ಯೇಸುಕ್ರಿಸ್ತರು ಮರಳಿ ಬರುವಾಗ, ನಾವು ಮೃತರಾಗಿದ್ದರೂ ಜೀವಂತವಾಗಿದ್ದರೂ ಅವರೊಡನೆಯೇ ನಾವು ಜೀವಿಸಬೇಕೆಂದೆ ನಮಗಾಗಿ ಅವರು ಸಾವನ್ನಪ್ಪಿದರು.


ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು.


ಸಿಂಹಾಸನಾರೂಢನಾಗಿದ್ದವನು ಆಗ, “ಇಗೋ, ನಾನೆಲ್ಲವನ್ನೂ ಹೊಸದಾಗಿಸುತ್ತೇನೆ,” ಎಂದನು. ಅಲ್ಲದೆ ಅವನು, “ಇದನ್ನು ನೀನು ಬರೆ, ಈ ಮಾತುಗಳು ಸತ್ಯವಾದುವು ಹಾಗೂ ವಿಶ್ವಾಸಾರ್ಹವಾದುವು,” ಎಂದು ಹೇಳಿದನು.


ಅವರಲ್ಲಿ ಪ್ರತಿಯೊಬ್ಬನಿಗೂ ಬಿಳಿಯ ನಿಲುವಂಗಿಯನ್ನು ಕೊಡಲಾಗಿತ್ತು. ಅಲ್ಲದೆ ಅವರಿಗೆ, “ಇನ್ನು ತುಸುಕಾಲ ಕಾದುಕೊಂಡಿರಿ, ನಿಮ್ಮ ಹಾಗೆಯೇ ಹತರಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ಜೊತೆಸೇವಕರ ಪಟ್ಟಿಯು ಭರ್ತಿಯಾಗುವ ತನಕ ವಿಶ್ರಮಿಸಿ,” ಎಂದು ತಿಳಿಸಲಾಯಿತು.


ಆದ್ದರಿಂದ ಈ ದೇಹವನ್ನು ತ್ಯಜಿಸಿ, ಪ್ರಭುವನ್ನೇ ನೆಚ್ಚಿ ನೆಲಸುವುದು ಲೇಸೆಂದು ಧೈರ್ಯದಿಂದ ಹೇಳುತ್ತೇವೆ.


ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ವಾಯುಮಂಡಲದ ಮೇಲೆ ಸುರಿದನು. ಆಗ ದೇವಾಲಯದ ಸಿಂಹಾಸನದ ಕಡೆಯಿಂದ ಒಂದು ದೊಡ್ಡ ಧ್ವನಿ ಉಂಟಾಗಿ, “ಮುಗಿಸಿದ್ದಾಯಿತು,” ಎಂದು ಹೇಳಿತು.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ I ಸಂಭಾವಿತನಾಗುವನು ಅವುಗಳ ಪಾಲನೆಯಿಂದ II


ನಡೆವುದು ಪ್ರಭುವಿನ ಮುಂದೆ ನೀತಿ I ಮಾಡುವುದು ಆತನ ಹೆಜ್ಜೆಗೆ ಹಾದಿ II


ಯೇಸು ಸತ್ತು ಪುನರುತ್ಥಾನ ಹೊಂದಿದರೆಂದು ನಾವು ವಿಶ್ವಾಸಿಸುತ್ತೇವೆ ಅಲ್ಲವೇ? ಹಾಗೆಯೇ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟು ಮರಣಹೊಂದಿದವರನ್ನು ದೇವರು ಯೇಸುಕ್ರಿಸ್ತರೊಡನೆ ಮರಳಿ ಕರೆದುಕೊಳ್ಳುತ್ತಾರೆ.


ಅಷ್ಟೇ ಅಲ್ಲದೆ, ಕ್ರಿಸ್ತಯೇಸುವಿನಲ್ಲಿ ಮೃತರಾದವರೆಲ್ಲರೂ ವಿನಾಶವಾದರು.


ನಾವು ಬದುಕಿದರೂ ಸತ್ತರೂ ಪ್ರಭುವಿಗೆ ಸೇರಿದವರು.


ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಏಳು ಗುಡುಗುಗಳು ನುಡಿದುದನ್ನು ಕೂಡಲೇ ನಾನು ಬರೆಯಬೇಕೆಂದಿದ್ದೆ. ಆಗ ಸ್ವರ್ಗದಿಂದ ಬಂದ ಒಂದು ಧ್ವನಿ, “ಆ ಏಳು ಗುಡುಗುಗಳು ನುಡಿದುದನ್ನು ರಹಸ್ಯವಾಗಿ ಇಡು. ಅವುಗಳನ್ನು ಬರೆಯಬೇಡ,” ಎಂದು ನನಗೆ ಆಜ್ಞಾಪಿಸಿತು.


“ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ನೀನು ಹೋಗಿ ಅಂತ್ಯದವರೆಗೆ ವಿಶ್ವಾಸದಿಂದಿರು. ನೀನು ‘ದೀರ್ಘನಿದ್ರೆ’ಯನ್ನು ಹೊಂದಿ, ನಿನಗೆ ನಿರ್ಧರಿಸಲಾದ ಸ್ಥಾನವನ್ನು ಪಡೆಯಲು ಯುಗಸಮಾಪ್ತಿಯಲ್ಲಿ ಎದ್ದುಬರುವೆ,” ಎಂದು ಹೇಳಿದನು.


ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.


ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಟ್ಟಬಯಲಾಗುತ್ತವೆ; ಇನ್ನು ಕೆಲವರ ಪಾಪಗಳು ಮರೆಯಾಗಿದ್ದು ಕ್ರಮೇಣ ಬೆಳಕಿಗೆ ಬರುತ್ತವೆ.


ಅಂತೆಯೇ, ಕೆಲವರ ಸತ್ಕಾರ್ಯಗಳು ಎಲ್ಲರಿಗೂ ಬೇಗನೆ ಗೋಚರವಾಗುತ್ತವೆ. ಇನ್ನು ಕೆಲವರ ಸತ್ಕಾರ್ಯಗಳು ಅಗೋಚರವಾಗಿದ್ದರೂ ಸದಾ ಗುಟ್ಟಾಗಿರಲಾರವು.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು