Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:14 - ಕನ್ನಡ ಸತ್ಯವೇದವು C.L. Bible (BSI)

14 ಅನಂತರ ನನ್ನ ಕಣ್ಣಿಗೆ ಒಂದು ಬಿಳಿಯ ಮೋಡ ಕಾಣಿಸಿತು. ಆ ಮೋಡದ ಮೇಲೆ ನರಪುತ್ರನಂಥ ವ್ಯಕ್ತಿಯೊಬ್ಬನು ಕುಳಿತಿದ್ದನು. ಆತನ ತಲೆಯ ಮೇಲೆ ಚಿನ್ನದ ಕಿರೀಟವಿತ್ತು; ಕೈಯಲ್ಲಿ ಹರಿತವಾದ ಕುಡುಗೋಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ನೋಡಲಾಗಿ ಇಗೋ, ಪ್ರಕಾಶಮಾನವಾದ ಒಂದು ಮೇಘವು ನನಗೆ ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದವನೊಬ್ಬನು ಕೂತಿರುವದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ ಆತನ ಕೈಯಲ್ಲಿ ಹದವಾದ ಕುಡುಗೋಲೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ನೋಡಿದಾಗ ನನ್ನ ಎದುರಿನಲ್ಲಿ ಮನುಷ್ಯಕುಮಾರನಂತೆ ಕಾಣುತ್ತಿದ್ದವನು ಆ ಬಿಳಿಯ ಮೋಡದ ಮೇಲೆ ಕುಳಿತಿದ್ದನು. ಆತನ ತಲೆಯ ಮೇಲೆ ಚಿನ್ನದ ಕಿರೀಟವಿತ್ತು ಮತ್ತು ಆತನ ಕೈಯಲ್ಲಿ ಹರಿತವಾದ ಕುಡುಗೋಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ನೋಡಲಾಗಿ, ಒಂದು ಬಿಳಿ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯಪುತ್ರರಂತೆ ಒಬ್ಬರು ಕುಳಿತಿರುವುದನ್ನು ಕಂಡೆನು. ಅವರ ತಲೆಯ ಮೇಲೆ ಚಿನ್ನದ ಕಿರೀಟವೂ ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾನಾ ಮಾಕಾ ಎಕ್ ಫಾಂಡ್ರೆ ಮೊಡ್ ದಿಸ್ಲೆ ಅನಿ ತ್ಯಾ ಮೊಡಾ ವರ್ತಿ ಬಸಲ್ಲೊ ಮಾನ್ಸಾಚ್ಯಾ ಸರ್ಕೊ ದಿಸುಲಾಗಲ್ಲೊ, ತ್ಯೆಚ್ಯಾ ಟಕ್ಲ್ಯಾರ್ ಎಕ್ ಸೊನ್ಯಾಚೆ ಮುಕುಟ್ ಹೊತ್ತೆ, ಅನಿ ತ್ಯೆಚ್ಯಾ ಹಾತಿತ್ ಎಕ್ ಧಾರ್‍ಲೊ ಇಳೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:14
19 ತಿಳಿವುಗಳ ಹೋಲಿಕೆ  

ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ಆ ದೀಪಸ್ತಂಭಗಳ ನಡುವೆ ‘ನರಪುತ್ರ'ನಂಥ ಒಬ್ಬ ವ್ಯಕ್ತಿಯಿದ್ದರು. ಅವರು ನಿಲುವಂಗಿಯನ್ನು ತೊಟ್ಟಿದ್ದರು. ಅದು ಅವರ ಪಾದಗಳನ್ನು ಮುಟ್ಟುವಷ್ಟು ನೀಳವಾಗಿತ್ತು. ಅಲ್ಲದೆ, ಚಿನ್ನದ ಎದೆಪಟ್ಟಿಯನ್ನು ಕಟ್ಟಿಕೊಂಡಿದ್ದರು.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II


ಆಗ ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ಬಿಲ್ಲೊಂದು ಇತ್ತು. ಅವನಿಗೆ ಜಯಮಾಲೆಯನ್ನು ಹಾಕಲಾಗಿತ್ತು. ಅವನು ಜಯಪ್ರದನಾಗಿ, ಜಯದ ಮೇಲೆ ಜಯಗಳಿಸುವ ಸಲುವಾಗಿ ಹೊರಟುಹೋದನು.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರನ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.


ನೀನಾತನನು ಸ್ವಾಗತಿಸಿದೆ ಶುಭಾಶಯದೊಂದಿಗೆ I ಚಿನ್ನದ ಕಿರೀಟವನು ಮುಡಿಸಿದೆ ಆತನ ಶಿರಸ್ಸಿಗೆ II


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಆತನ ಕಣ್ಣುಗಳು ಬೆಂಕಿಯ ಕೆಂಡಗಳಂತಿವೆ; ತಲೆಯ ಮೇಲೆ ಅನೇಕ ಕಿರೀಟಗಳಿವೆ.ಆತನ ಹೆಸರನ್ನು ಬರೆದಿಟ್ಟಿದೆ; ಅದು ಆತನಿಗೇ ಹೊರತು ಬೇರೆ ಯಾರಿಗೂ ತಿಳಿಯದು.


“ಪ್ರಭುವೇ, ದೇವನೇ, ಸರ್ವಶಕ್ತನೇ, ಇರುವಾತನೂ ಇದ್ದಾತನೂ ನೀನೇ ಘನಾಧಿಕಾರವನ್ನು ತೋರಿ ನೀ ಆಳುತ್ತಿರುವೆ ಧನ್ಯವಾದಗಳನ್ನು ನಿನಗೆ ಸಲ್ಲಿಸುವೆ.


ನಾನು ಮತ್ತೊಂದು ದೃಶ್ಯವನ್ನು ಕಂಡೆ. ಒಬ್ಬ ಬಲಿಷ್ಠ ದೇವದೂತನು ಸ್ವರ್ಗದಿಂದ ಇಳಿದುಬಂದನು. ಅವನು ಮೇಘಾಂಬರನಾಗಿದ್ದನು. ಅವನ ತಲೆಯ ಮೇಲೆ ಮುಗಿಲು ಬಿಲ್ಲೊಂದು ಇತ್ತು. ಮುಖವು ಸೂರ್ಯನಂತೆ ಇತ್ತು. ಕಾಲುಗಳು ಅಗ್ನಿಸ್ತಂಭಗಳಂತಿದ್ದವು.


ಬೆಳೆಯು ಮಾಗಿದಾಗ ಸುಗ್ಗಿಯು ಬಂತೆಂದು ವ್ಯವಸಾಯಗಾರನು ಕುಡುಗೋಲನ್ನು ಬಳಸುತ್ತಾನೆ,” ಎಂದರು.


ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು