Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:16 - ಕನ್ನಡ ಸತ್ಯವೇದವು C.L. Bible (BSI)

16 ಆಗ ಮೋಡದ ಮೇಲೆ ಕುಳಿತಿದ್ದವನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿದನು. ಭೂಮಿಯ ಕೊಯಿಲು ಮುಗಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಹಾಕಿ ಭೂವಿುಯ ಪೈರನ್ನು ಕೊಯಿದನು; ಭೂವಿುಯ ಪೈರು ಕೊಯ್ಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಮೋಡದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೇಘದ ಮೇಲೆ ಕುಳಿತಿದ್ದವರು ತಮ್ಮ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದರು. ಆಗ ಭೂಮಿಯ ಪೈರು ಕೊಯ್ಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ತ್ಯಾ ಮೊಡಾ ವರ್ತಿ ಬಸಲ್ಲ್ಯಾನ್ ಅಪ್ನಾಚೊ ಧಾರ್‍ಲೊ ಇಳೊ ಜಗಾವರ್ತಿ ಘಾಟ್ಲ್ಯಾನ್, ಅನಿ ಜಿಮ್ನಿಚೆ ಪಿಕ್ ಕಾತ್ರುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:16
7 ತಿಳಿವುಗಳ ಹೋಲಿಕೆ  

ಆ ದೇವದೂತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದನು; ಅವುಗಳನ್ನು ದೇವರ ರೋಷವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಎಸೆದನು.


ಅನಂತರ ನನ್ನ ಕಣ್ಣಿಗೆ ಒಂದು ಬಿಳಿಯ ಮೋಡ ಕಾಣಿಸಿತು. ಆ ಮೋಡದ ಮೇಲೆ ನರಪುತ್ರನಂಥ ವ್ಯಕ್ತಿಯೊಬ್ಬನು ಕುಳಿತಿದ್ದನು. ಆತನ ತಲೆಯ ಮೇಲೆ ಚಿನ್ನದ ಕಿರೀಟವಿತ್ತು; ಕೈಯಲ್ಲಿ ಹರಿತವಾದ ಕುಡುಗೋಲಿತ್ತು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಇನ್ನೊಬ್ಬ ದೇವದೂತನು ದೇವಮಂದಿರದಿಂದ ಹೊರಗೆ ಬಂದನು. ಈತನು ಮೋಡದ ಮೇಲೆ ಕುಳಿತಿದ್ದ ಅವನನ್ನು ಉದ್ದೇಶಿಸಿ, “ಭೂಮಿಯ ಫಸಲು ಮಾಗಿದೆ, ಕೊಯ್ಲಿನ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ತೆಗೆದು ಕೊಯಿಲು ಮಾಡಲು ಆರಂಭಿಸು,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ಮಗದೊಬ್ಬ ದೇವದೂತನು ಸ್ವರ್ಗದ ದೇವಮಂದಿರದಿಂದ ಹೊರಗೆ ಬಂದನು. ಆತನ ಕೈಯಲ್ಲೂ ಹರಿತವಾದ ಕುಡುಗೋಲು ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು