Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:2 - ಕನ್ನಡ ಸತ್ಯವೇದವು C.L. Bible (BSI)

2 ಇದಲ್ಲದೆ, ಸ್ವರ್ಗದಿಂದ ಮಹಾಧ್ವನಿಯೊಂದು ಕೇಳಿಸಿತು. ಅದು ಭೋರ್ಗರೆಯುವ ಜಲಪ್ರವಾಹದಂತೆಯೂ ದೊಡ್ಡ ಗುಡುಗಿನ ಗರ್ಜನೆಯಂತೆಯೂ ಇತ್ತು. ನಾವು ಕೇಳಿದಂಥ ಧ್ವನಿ ಕಿನ್ನರಿಯನ್ನು ನುಡಿಸುತ್ತಿರುವ ವಾದ್ಯಗಾರರ ಸ್ವರದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಪರಲೋಕದಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಪರಲೋಕದ ಕಡೆಯಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಪರಲೋಕದಿಂದ ಒಂದು ಶಬ್ದವನ್ನು ಕೇಳಿಸಿಕೊಂಡೆನು. ಅದು ನೀರಿನ ಪ್ರವಾಹದಂತೆ ಭೋರ್ಗರೆಯುವ ಶಬ್ದದಂತೆ ಮತ್ತು ಗುಡುಗಿನ ಧ್ವನಿಯಂತೆ ಇದ್ದಿತು. ಜನರು ತಮ್ಮ ತಂತಿವಾದ್ಯಗಳನ್ನು ಬಾರಿಸುತ್ತಿರುವರೋ ಎಂಬಂತೆ ಆ ಶಬ್ದವು ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಪರಲೋಕದಿಂದ ಜಲ ಪ್ರವಾಹದಂತೆಯೂ ಮಹಾ ಗುಡುಗಿನ ಶಬ್ದದಂತೆಯೂ ಇದ್ದ ಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ಕಿನ್ನರಿಗಳನ್ನು ನುಡಿಸುತ್ತಿರುವ ಕಿನ್ನರರ ಶಬ್ದದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ಮಿಯಾ ಸರ್‍ಗಾ ವೈನಾ ಎಕ್ ಅವಾಜ್ ಆಯಿಕ್ಲೊ ತೊ ಅವಾಜಾ ದಬ್‍ದಬ್ಯಾಚ್ಯಾ ಸರ್ಕೊ ಹೊತ್ತೊ, ಮೊಟ್ಯಾ ಗುಡ್ಗುಡ್ಯಾಚ್ಯಾ ಸರ್ಕೊ ತೊ ಅವಾಜ್ ಹೊತ್ತೊ. ತೊ ಅವಾಜ್ ವಾಜ್ವುತಲ್ಯಾನಿ ಅಪ್ನಾಚಿ ಹಾರ್ಪ್ ಮನ್ತಲಿ ವಾಜಾಪಾ ವಾಜ್ವುಲ್ಯಾ ಸರ್ಕೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:2
29 ತಿಳಿವುಗಳ ಹೋಲಿಕೆ  

ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ಅವರ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆ ಥಳಥಳಿಸುತ್ತಾ ಇದ್ದವು. ಧ್ವನಿ, ಜಲಪಾತದಂತೆ ಭೋರ್ಗರೆಯುತ್ತಿತ್ತು.


ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.


ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ I ಕೀರ್ತಿಸಿ ದಶತಂತಿ ವೀಣೆಯನು ಬಾರಿಸುತ II


ದಾವೀದನೂ ಎಲ್ಲ ಇಸ್ರಯೇಲರೂ ಕಿನ್ನರಿ, ಸ್ವರಮಂಡಲ, ತಮಟೆ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು, ಪೂರ್ಣಾವೇಶದಿಂದ ಗೀತೆಗಳನ್ನು ಹಾಡುತ್ತಾ, ಸರ್ವೇಶ್ವರನ ಮುಂದೆ ನರ್ತನ ಮಾಡುತ್ತಾ ಹೋದರು.


ಮೂರನೆಯ ದಿನ ಸೂರ್ಯೋದಯ ಆಗುವಾಗ ಆ ಬೆಟ್ಟದ ಮೇಲೆ ಗುಡುಗು, ಮಿಂಚು, ಕಾರ್ಮುಗಿಲು ಹಾಗು ತುತೂರಿಯ ಮಹಾಧ್ವನಿ ಉಂಟಾಯಿತು. ಪಾಳೆಯದಲ್ಲಿದ್ದ ಜನರೆಲ್ಲರು ನಡುಗಿದರು.


“ಎಲೈ ಬಾಬಿಲೋನೇ , ಕಿನ್ನರಿಗಾರರ, ಸಂಗೀತಗಾರರ ಕೊಳಲ ನುಡಿಸುವವರ, ತುತೂರಿಯನೂದುವವರ ಮಧುರ ಗಾನವು ಕೇಳಿಬರದು ನಿನ್ನಲಿ ಮತ್ತೆಂದೂ, ಕುಶಲಕರ್ಮಿಗಳಾರೂ ಕಾಣಸಿಗರು ಇನ್ನೆಂದೂ, ಬೀಸುವ ಕಲ್ಲಿನ ಶಬ್ದವೇ ಇರದು ನಿನ್ನಲ್ಲಿ ಎಂದೆಂದೂ !


ಅನಂತರ ಆ ಪ್ರವಾದಿಗಳಿಗೆ, “ಮೇಲೇರಿ ಬನ್ನಿ,” ಎಂದು ಸ್ವರ್ಗದಿಂದ ಒಂದು ಮಹಾವಾಣಿ ತಿಳಿಸಿತು. ಶತ್ರುಗಳು ಅವರನ್ನು ನೋಡುತ್ತಿದ್ದಂತೆಯೇ ಅವರು ಮೇಘಾರೂಢರಾಗಿ ಸ್ವರ್ಗಕ್ಕೇರಿದರು.


ಇದನ್ನೂ ನಾನು ಕಂಡೆ: ಯಜ್ಞದ ಕುರಿಮರಿಯಾದಾತನು ಏಳು ಮುದ್ರೆಗಳಲ್ಲಿ ಒಂದನ್ನು ಒಡೆದನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಗುಡುಗಿನಂತಿದ್ದ ಸ್ವರದಿಂದ, “ಇಲ್ಲಿ ಬಾ,” ಎಂದು ಕರೆಯುವುದನ್ನು ನಾನು ಕೇಳಿಸಿಕೊಂಡೆ.


ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ಸಾಗರಗಳ ಗರ್ಜನೆಗಿಂತ I ಸಮುದ್ರ ತರಂಗಗಳಿಗಿಂತ I ಮಹೋನ್ನತ ಪ್ರಭು ಬಲವಂತ II


ವರ್ಣಿಸುವುದುಚಿತ ವೀಣಾ ಸ್ವರಮಂಡಲದಿಂದ I ಕೊಳಲ ದನಿಯಿಂದ, ಕಿನ್ನರಿಯ ನಾದಸ್ವರದಿಂದ II


ಚೇತನಗೊಳ್ಳು ಮನವೇ, ಚೇತನಗೊಳ್ಳು I ಎಚ್ಚರಗೊಳ್ಳಲಿ ವೀಣೆ ತಂಬೂರಿಗಳು I ಎಬ್ಬಿಸಿ ರವಿಯನು ಪ್ರಾತಃಕಾಲದೊಳು II


ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.


ಸ್ವಜನರಿಗೆ ಸರ್ವೇಶ್ವರ ಪ್ರತ್ಯಕ್ಷನಾಗುವನು ಮಿಂಚಿನಂತೆ ಬಿಡುವನು ತನ್ನ ಬಾಣಗಳನು ಮೊಳಗಿಸುವನು ಕಾಳಗದ ತುತೂರಿಯನು ದಕ್ಷಿಣದ ಬಿರುಗಾಳಿಯೊಂದಿಗೆ ಮುನ್ನುಗ್ಗುವನು.


ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.


ಆತನ ನಾಮವನು ಕೀರ್ತಿಸಲಿ ಕುಣಿತದಿಂದ I ಆತನನು ಭಜಿಸಲಿ ತಮಟೆ, ಕಿನ್ನರಿಗಳಿಂದ II


ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ I ಭಜಿಸಿರಿ ಆತನನು ವಾದ್ಯಮೇಳದೊಂದಿಗೆ II


ಆ ಗುಡುಗು ಮಿಂಚನ್ನು, ತುತೂರಿ ಧ್ವನಿಯನ್ನು ಹಾಗು ಬೆಟ್ಟದಿಂದ ಹೊರಡುತ್ತಿದ್ದ ಹೊಗೆಯನ್ನು ಜನರೆಲ್ಲರು ನೋಡಿದರು. ನೋಡಿ ನಡುಗುತ್ತಾ ದೂರದಲ್ಲೇ ನಿಂತುಕೊಂಡರು.


ಧನ್ಯವಾದವಿತ್ತು ಹಾಡಿರಿ ಪ್ರಭುವನು I ಕಿನ್ನರಿಯೊಡನೆ ಭಜಿಸಿರಿ ನಮ್ಮ ದೇವನನು II


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


ಸುರನರರ ನುಡಿಗಳ ನಾನಾಡಬಲ್ಲೆನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ.


ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಜೆರುಸಲೇಮಿನಲ್ಲಿರುವ ಸರ್ವೇಶ್ವರನಾಲಯಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು