Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:20 - ಕನ್ನಡ ಸತ್ಯವೇದವು C.L. Bible (BSI)

20 ಪಟ್ಟಣದ ಹೊರಗಿನ ಆಲೆಯಲ್ಲಿ ದ್ರಾಕ್ಷಿಯ ಹಣ್ಣನ್ನು ಹಿಂಡಲಾಯಿತು. ಆ ಆಲೆಯಿಂದ ರಕ್ತವು ಹರಿಯಿತು. ಅದು ಮುನ್ನೂರು ಕಿಲೊಮೀಟರಿನಷ್ಟು ದೂರವಾಗಿಯೂ ಎರಡು ಮೀಟರಿನಷ್ಟು ಆಳವಾಗಿಯೂ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದನ್ನು ಪಟ್ಟಣದ ಹೊರಗೆ ಆ ತೊಟ್ಟಿಯಲ್ಲಿ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಆಳವಾಗಿ ಇನ್ನೂರು ಮೈಲಿ ದೂರ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ದ್ರಾಕ್ಷಿಯನ್ನು ನಗರದ ಹೊರಭಾಗದಲ್ಲಿದ್ದ ದ್ರಾಕ್ಷಿಯ ಆಲೆಯಲ್ಲಿ ಕಿವುಚಿ ಹಾಕಿದರು. ಆ ದ್ರಾಕ್ಷಿಯ ಆಲೆಯಿಂದ ರಕ್ತವು ಹೊರಕ್ಕೆ ಬಂದಿತು. ಅದು ಕುದುರೆಗಳ ತಲೆಗಳಷ್ಟು ಎತ್ತರಕ್ಕೆ ಏರಿ ಇನ್ನೂರು ಮೈಲಿಗಳಷ್ಟು ದೂರ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಪಟ್ಟಣದ ಹೊರಗೆ ದ್ರಾಕ್ಷಿಯ ತೊಟ್ಟಿಯನ್ನು ತುಳಿಯಲಾಯಿತು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು, ಕುದುರೆಗಳ ಕಡಿವಾಣವನ್ನು ಮುಟ್ಟುವಷ್ಟು ಮುನ್ನೂರು ಕಿಲೋಮೀಟರ್ ದೂರ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಶಾರಾಚ್ಯಾ ಭಾಯ್ರ್ ಘಾನ್ಯಾಚ್ಯಾ ಖಡ್ಡ್ಯಾತ್‍ ಘಾಲುನ್ ದ್ರಾಕ್ಷಿಯಾ ಪಿಳುನ್ ಹೊಲ್ಲ್ಯಾ ತನ್ನಾ, ತ್ಯಾ ಘಾನ್ಯಾಚ್ಯಾ ಖಡ್ಡ್ಯಾತ್ನಾ ರಗ್ತಾಚೊ ಹೊವಾರೊ ದೊನ್‍ಸೆ ಮೈಲಾ ದುರ್ ಪರತ್ ಹೊಂವ್ಲೊ, ತೊ ಹೊವಾರೊ ಟಕ್ಕಲ್ಬರ್ ಖೊಲ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:20
12 ತಿಳಿವುಗಳ ಹೋಲಿಕೆ  

“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.


ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ಕಟ್ಟುವನು ತನ್ನ ವಾಹನಪಶುವನು ದ್ರಾಕ್ಷಾಲತೆಗೆ ಬಿಗಿಯುವನು ತನ್ನ ಹೇಸರಕತ್ತೆಯನು ರಾಜದ್ರಾಕ್ಷೆಗೆ ಒಗೆಯುವನು ತನ್ನ ಬಟ್ಟೆಯನು ದ್ರಾಕ್ಷಾರಸದಲಿ ತೊಳೆವನು ಮೇಲಂಗಿಯನು ಆ ರಕ್ತಗೆಂಪು ರಸದಲಿ.


ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.


ತೋಯಿಸುವೆನು ಸಮನಾಡನು ನಿನ್ನ ರಕ್ತಪ್ರವಾಹದಿಂದ, ಹಳ್ಳಕೊಳ್ಳಗಳು ತುಂಬಿ ತುಳುಕುವುವು ಅದರಿಂದ.


ಸ್ವಾಮಿಯ ಶೂರರೇ, ಕುಡುಗೋಲನ್ನು ಹಾಕಿರಿ; ಫಲ ಪಕ್ವವಾಗಿದೆ. ಬನ್ನಿ, ದ್ರಾಕ್ಷಿಯನ್ನು ತುಳಿಯಿರಿ; ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ರಾಷ್ಟ್ರಗಳ ದುಷ್ಟತನವು ಮಿತಿಮೀರಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು