Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:3 - ಕನ್ನಡ ಸತ್ಯವೇದವು C.L. Bible (BSI)

3 ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸನ್ನಿಧಿಯಲ್ಲಿ ಹೊಸ ಹಾಡನ್ನು ಹಾಡಿದರು. ಈ ಲೋಕದಿಂದ ಬಿಡುಗಡೆ ಹೊಂದಿದ್ದ 1,44,000 ಜನರು ಮಾತ್ರ ಈ ಹಾಡನ್ನು ಕಲಿಯಲು ಶಕ್ತರಾಗಿದ್ದರು. ಈ ಹಾಡನ್ನು ಬೇರೆ ಯಾರೂ ಕಲಿಯಲಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲಾದ ಆ ಒಂದು ಲಕ್ಷ ನಲವತ್ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಸುಟ್ಕಾ ಘಾವಲ್ಯಾ ಹ್ಯಾ ಜಿಮ್ನಿರ್ ಲೊಕಾನಿ ಸೊಡುನ್ ಎಕ್‍ಲಾಕ್ ಚಾಳಿಸಾರ್ ಚಾರ್ ಹಜಾರ್ ಲೊಕಾನಿ, ಸಿವಾಸನ್, ಚಾರ್ ಝಿತ್ತಿ ಸಾವ್ಜಾ, ಅನಿ ಜಾನ್ತ್ಯಾ ಲೊಕಾಂಚ್ಯಾ ಇದ್ರಾಕ್‍ ಇಬೆ ರ್‍ಹಾವ್ನ್ ಅನಿ ತೆನಿ ಎವ್ಡೆಚ್ ಶಿಕುಕ್ ಹೊತಾ ತಸ್ಲಿ ಎಕ್ ನ್ಹವಿ ಗಿತ್ ಗಾವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:3
17 ತಿಳಿವುಗಳ ಹೋಲಿಕೆ  

ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು.


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು.


ಅಲ್ಲೆಲೂಯ! ಹಾಡಿರಿ ಪ್ರಭುವಿಗೆ ನೂತನ ಕೀರ್ತನೆಯನು I ಭಕ್ತರ ಸಭೆಯಲಿ ಸ್ತುತಿಮಾಡಿರಿ ಆತನನು II


ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II


ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II


ಹಾಡುವೆ ದೇವಾ, ನಿನಗೆ ನೂತನ ಕೀರ್ತನೆಯನು I ಪಾಡುವೆ ನುಡಿಸುತ್ತಾ ದಶತಂತಿಯ ವೀಣೆಯನು II


ಹೊಸಗೀತೆಯನು ಹಾಡಿರಿ ಪ್ರಭುವಿಗೆ I ವಿಶ್ವವೆಲ್ಲವು ಹಾಡಲಿ ಆತನಿಗೆ II


ನೂತನ ಕೀರ್ತನೆಯನು ಆತನಿಗೆ ಹಾಡಿರಿ I ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ II


ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ.


ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಮಂದಿ. ಅವರ ಬಿಡಿ ಸಂಖ್ಯೆ ಹೀಗಿತ್ತು :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು