Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:4 - ಕನ್ನಡ ಸತ್ಯವೇದವು C.L. Bible (BSI)

4 ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ; ಇವರು ಕನ್ಯೆಯರಂತೆ ನಿಷ್ಕಳಂಕರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನ ಹಿಂದೆ ಹೋಗುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆನಿ ಬಾಯ್ಕಾಮನ್ಸಾನಿಕ್ನಾ ಆಂಗಾಚೊ ಸಮಂದ್ ಕರಿನಸ್ತಾನಾ ಅಪ್ನಾಕುಚ್ ಪವಿತ್ರ್ ಕರುನ್ ಥವ್ನ್ ಘೆವ್ನ್ ಹಾತ್. ತೆನಿ ಲಗಿನ್ ಹೊಲ್ಲೆನಾತ್. ತೆನಿ ಬೊಕ್ಡು ಖೈಯ್ ಜಾತಾ ಥೈ ತ್ಯೆಚ್ಯಾ ಫಾಟ್ನಾ ಜಾತ್ಯಾತ್. ತೆಂಕಾ ಸಗ್ಳ್ಯಾ ಮಾನ್ಸಾಚ್ಯಾಕ್ನಾ ಘೆಟಲ್ಲೆ ಹಾಯ್ ಕುಳಿಯಾನಿತ್ನಾ ಎಚುನ್ ಕಾಡುನ್ ಸುಟ್ಕಾ ಹೊಲ್ಲೆ ಹಾಯ್.ಅಸೆ ತೆಂಕಾ ದೆವಾಕ್ ಅನಿ ಬೊಕ್ಡಾಕ್ ಅದ್ದಿಚೆ ಫಳ್ ಕರುನ್ ಒಪ್ಸುನ್ ದಿಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:4
32 ತಿಳಿವುಗಳ ಹೋಲಿಕೆ  

ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.


ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ನೆನಸಿಕೊ ಆದಿಯಲೆ ನೀ ಸಂಪಾದಿಸಿಕೊಂಡ ಸಭೆಯನು I ಸ್ಮರಿಸಿಕೊ ಸೊತ್ತಾಗಿ ನೀ ರಕ್ಷಿಸಿಕೊಂಡ ಗೋತ್ರವನು I ಜ್ಞಾಪಿಸಿಕೊ ನಿನ್ನ ಸದನವಾಗಿದ್ದ ಸಿಯೋನ್ ಶಿಖರವನು II


ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


“ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.”


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.


ಸ್ತೇಫನನನ್ನು ಮತ್ತು ಆತನ ಕುಟುಂಬದವರನ್ನು ನೀವು ಬಲ್ಲಿರಿ. ಅವರು ಅಖಾಯದ ಪ್ರಥಮ ಕ್ರೈಸ್ತವಿಶ್ವಾಸಿಗಳು. ದೇವಜನರ ಸೇವೆಗೆ ತಮ್ಮನ್ನೇ ಸಮರ್ಪಿಸಿಕೊಂಡವರು. ನಾನು ನಿಮ್ಮಲ್ಲಿ ವಿನಂತಿಸುವುದೇನೆಂದರೆ:


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಪೇತ್ರನು, “ಈಗಲೇ ನಿಮ್ಮ ಹಿಂದೆಬರಲು ಏಕಾಗದು? ಪ್ರಭೂ, ನಿಮಗಾಗಿ ಪ್ರಾಣವನ್ನು ಕೊಡಲೂ ಸಿದ್ಧನಿದ್ದೇನೆ,” ಎಂದನು.


“ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು.


ಆಗ ಒಬ್ಬ ಧರ್ಮಶಾಸ್ತ್ರಿ ಬಂದು, “ಗುರುವೇ, ನೀವು ಎಲ್ಲಿಗೆಹೋದರೂ ನಿಮ್ಮನ್ನು ಹಿಂಬಾಲಿಸಿ ಬರುತ್ತೇನೆ,” ಎಂದನು.


ನೀನು ಹಚ್ಚಿಕೊಂಡಿರುವ ತೈಲ ಎನಿತು ಸುವಾಸನೀಯ ಸುರಿದ ಪರಿಮಳದಂತೆ ವ್ಯಾಪ್ತ ನಿನ್ನ ನಾಮಾಂಕಿತ ಕನ್ಯೆಯರೆಲ್ಲರು ನಿನ್ನನು ಪ್ರೀತಿಸದಿರಲು ಅಸಾಧ್ಯ.


ಮದುವೆಯಾಗಬಾರದು, ಇಂತಿಂಥ ಆಹಾರವನ್ನು ಸೇವಿಸಬಾರದು ಎಂದು ಬೋಧಿಸುತ್ತಾರೆ. ಆದರೆ ಸತ್ಯವನ್ನು ಅರಿತು ಯಾರು ವಿಶ್ವಾಸಿಗಳಾಗಿದ್ದಾರೋ ಅಂಥವರು ಎಲ್ಲ ಆಹಾರಪದಾರ್ಥಗಳನ್ನು ಕೃತಜ್ಞತಾಸ್ತುತಿಯೊಡನೆ ಸೇವಿಸಲೆಂದೇ ದೇವರು ಅವುಗಳನ್ನು ಸೃಷ್ಟಿಸಿದ್ದಾರೆ.


ಹಾಗೇನಾದರೂ ನೀನು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಅಂತೆಯೇ, ಅವಿವಾಹಿತ ಸ್ತ್ರೀಯೊಬ್ಬಳು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಆದರೆ ದಂಪತಿಗಳಿಗೆ ತಾಪತ್ರಯಗಳು ಅನೇಕ. ಇವುಗಳು ನಿಮ್ಮನ್ನು ಬಾಧಿಸದಿರಲೆಂಬುದೇ ನನ್ನ ಹಾರೈಕೆ.


ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ!


ಅರಸನಿಗೆ ರಾಣಿಯರು ಅರವತ್ತು ಮಂದಿ ಉಪಪತ್ನಿಯರು ಎಂಬತ್ತು ಮಂದಿ ಯುವತಿಯರು ಲೆಕ್ಕವಿಲ್ಲದಷ್ಟು ಮಂದಿ.


ಭೂಷಿತಳಾಗಿಹಳಾಕೆ ಕಸೂತಿಕೆಲಸದ ವಸ್ತ್ರಗಳಿಂದ I ಬರುತಿಹಳು ರಾಜನ ಬಳಿಗೆ ಸಖಿಯರ ಪರಿವಾರ ಸಮೇತ II


ತಾಯಿಯ ಉದರದಿಂದಲೇ ನಪುಂಸಕರಾಗಿ ಹುಟ್ಟಿದವರಿದ್ದಾರೆ; ಜನರಿಂದ ನಪುಂಸಕರಾದವರು ಕೂಡ ಇದ್ದಾರೆ; ಸ್ವರ್ಗಸಾಮ್ರಾಜ್ಯದ ನಿಮಿತ್ತ ಅವಿವಾಹಿತರಾಗಿ ಇರುವವರೂ ಇದ್ದಾರೆ; ಇದನ್ನು ಅಂಗೀಕರಿಸಬಲ್ಲವನು ಅಂಗೀಕರಿಸಲಿ,” ಎಂದರು.


ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ಆ ನಗರದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಏಕೆಂದರೆ, ಸರ್ವಶಕ್ತ ದೇವರಾದ ಪ್ರಭುವೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು