Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:5 - ಕನ್ನಡ ಸತ್ಯವೇದವು C.L. Bible (BSI)

5 ಸುಳ್ಳು ಮಾತು ಅವರ ಬಾಯಿಂದ ಬರುವುದಿಲ್ಲ; ಅವರು ನಿರ್ದೋಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವರ ಬಾಯಲ್ಲಿ ಸುಳ್ಳು ಸಿಕ್ಕಲಿಲ್ಲ; ಇವರು ನಿರ್ದೋಷಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈ ಜನರು ಸುಳ್ಳುಗಾರರಾಗಿರಲಿಲ್ಲ. ಇವರು ನಿರ್ದೋಷಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇವರ ಬಾಯಲ್ಲಿ ಸುಳ್ಳು ಸಿಕ್ಕಲಿಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆನಿ ಕನ್ನಾಬಿ ಝುಟೆ ಬೊಲಲ್ಲೆ ನಾ; ತೆಂಚ್ಯಾ ಭುತ್ತುರ್ ಕಾಯ್ಬಿ ಚುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:5
20 ತಿಳಿವುಗಳ ಹೋಲಿಕೆ  

ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.


ಇಸ್ರಯೇಲಿನಲ್ಲಿ ಅಳಿದುಳಿದವರು ಅನ್ಯಾಯಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು. ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.”


ಯಾರಪರಾಧವನು ಪ್ರಭು ಎಣಿಸಿಲ್ಲವೋ I ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು II


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ಈಗಲಾದರೋ ಯೇಸುಕ್ರಿಸ್ತರ ದೈವಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ.


ಪಿಲಾತನು ಮುಖ್ಯಯಾಜಕರನ್ನೂ ಜನರ ಗುಂಪನ್ನೂ ನೋಡಿ, “ಈ ಮನುಷ್ಯರಲ್ಲಿ ಶಿಕ್ಷಾರ್ಹದೋಷ ಯಾವುದೂ ನನಗೆ ಕಾಣುವುದಿಲ್ಲ,” ಎಂದನು.


“ಆನಂದಕರ ಜೀವನದ ಬಯಕೆ ಯಾರಿಗಿದೆಯೋ ಸುದಿನಗಳನು ಕಾಣುವ ಆಶೆ ಯಾರಿಗಿದೆಯೋ ಅಂಥವನು ಬಿಗಿಹಿಡಿಯಲಿ ನಾಲಿಗೆಯನು ಕೆಟ್ಟದನು ನುಡಿಯದಂತೆ ತಡೆಹಿಡಿಯಲಿ ತುಟಿಯನು ಕಪಟವನಾಡದಂತೆ.


ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು.


ಹೀಗಿರಲು ಮುಖ್ಯಾಧಿಕಾರಿಗಳು ಮತ್ತು ಪ್ರಾಂತ್ಯಾಧಿಪತಿಗಳು ರಾಜ್ಯಾಡಳಿತದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವೂ ದೊರಕಲಿಲ್ಲ. ಅವನಲ್ಲಿ ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ಅಷ್ಟು ನಂಬಿಕಸ್ತನಾಗಿದ್ದನು! ಅವನಲ್ಲಿ ಯಾವ ಅಕ್ರಮವಾಗಲಿ, ಆಲಸ್ಯವಾಗಲಿ ಕಾಣಸಿಗಲಿಲ್ಲ.


ನನ್ನ ಮಾತುಗಳೆಲ್ಲ ನೀತಿಭರಿತ ಅವುಗಳಲ್ಲಿ ಇಲ್ಲ ಕುಟಿಲ, ಕುತಂತ್ರ.


ಕಾದಿಡು ನಾಲಿಗೆಯನು ಕೇಡನು ಆಡದಂತೆ I ಬಿಗಿಯಿಡು ತುಟಿಯನ್ನು ಕುಟಿಲವನು ನುಡಿಯದಂತೆ II


ಮಾಡಲಿಲ್ಲ ಆತ ಯಾವ ಪಾಪಕೃತ್ಯ ಅವನ ಬಾಯಲಿರಲಿಲ್ಲ ವಂಚನೆಯ ವಾಕ್ಯ ಹೂಣಿದರಾತನನು ಸತ್ತಮೇಲೆ ದುರುಳರ ಹಾಗೂ ದುಷ್ಕರ್ಮಿಗಳ ನಡುವೆ.


ಅದರ ಮಧ್ಯೆಯೇ ಇವೆ ವಿನಾಶಕರ ಶಕ್ತಿಗಳು I ಅದರ ಬೀದಿಬಿಟ್ಟು ತೊಲಗವು ಮೋಸ ವಂಚನೆಗಳು II


ನನ್ನ ಪ್ರಿಯಳೇ, ಸರ್ವಾಂಗಸುಂದರಿಯೇ, ನಿನ್ನೊಳು ಯಾವ ಕಳಂಕವು ಇಲ್ಲದಿರುವೆ.


ಸತ್ಯಬೋಧೆ ಅವರ ಬಾಯಲ್ಲಿ ನೆಲೆಸಿತ್ತು. ಅವರ ತುಟಿಗಳಿಂದ ಅಪರಾಧವಾದುದೇನೂ ಹೊರಬರಲಿಲ್ಲ. ಶಾಂತಿಯಿಂದ, ಸದ್ಧರ್ಮದಿಂದ ಅವರು ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡರು. ಹಲವರನ್ನು ಪಾಪಕ್ಕೆ ವಿಮುಖರಾಗಿಸಿದರು.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು