Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:7 - ಕನ್ನಡ ಸತ್ಯವೇದವು C.L. Bible (BSI)

7 ಆತನು ಮಹಾಶಬ್ದದಿಂದ, “ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ; ಅವರಿಗೆ ಸ್ತುತಿಸ್ತೋತ್ರ ಸಲ್ಲಿಸಿರಿ. ಏಕೆಂದರೆ, ಅವರು ತೀರ್ಪುಕೊಡುವ ಗಳಿಗೆಯು ಬಂದಿದೆ. ಆದ್ದರಿಂದ ಭೂಸ್ವರ್ಗಗಳನ್ನೂ ಕಡಲುಕಾರಂಜಿಗಳನ್ನೂ ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು - ನೀವೆಲ್ಲರು ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ, ಆತನು ನ್ಯಾಯತೀರ್ಪುಮಾಡುವ ಗಳಿಗೆಯು ಬಂದಿದೆ. ಭೂಲೋಕ ಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನಿಗೆ ನಮಸ್ಕಾರ ಮಾಡಿರಿ ಎಂದು ಮಹಾಶಬ್ದದಿಂದ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ದೇವರಿಗೆ ಭಯಪಡಿರಿ. ಆತನನ್ನು ಸ್ತುತಿಸಿರಿ. ಜನರಿಗೆಲ್ಲ ದೇವರು ತೀರ್ಪು ನೀಡುವ ಸಮಯವು ಹತ್ತಿರ ಬಂದಿದೆ. ದೇವರನ್ನು ಆರಾಧಿಸಿರಿ. ಪರಲೋಕವನ್ನೂ ಭೂಮಿಯನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಸೃಷ್ಟಿಸಿದವನು ಆತನೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು, “ನೀವು ದೇವರಿಗೆ ಭಯಪಟ್ಟು ಅವರಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಅವರು ನ್ಯಾಯತೀರ್ಪು ಮಾಡುವ ಸಮಯ ಬಂದಿದೆ. ಭೂಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದ ದೇವರನ್ನೇ ಆರಾಧಿಸಿರಿ!” ಎಂದು ಮಹಾಧ್ವನಿಯಿಂದ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆನಿ ಮೊಟ್ಯಾನ್,“ದೆವಾಕ್ ಮಾನ್ ಕರಾ ಅನಿ ತ್ಯೆಚ್ಯಾ ಮೊಟ್ಯಾಪಾನಾಚೆ ಸ್ತುತಿ ಕರಾ!, ಸಗ್ಳ್ಯಾ ಲೊಕಾಂಚಿ ಝಡ್ತಿ ಕರ್ತಲೊ ತೆಚೊ ಎಳ್ ಯೆವ್ನ್ ಪಾವ್ಲಾ. ಸರ್ಗ್, ಜಿಮಿನ್, ಸಮುಂದರ್ ಅನಿ ಪಾನಿಯಾಚೆ ಝರಿಯಾ ಕರಲ್ಲ್ಯಾಕ್ ಆರಾದನ್ ಕರಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:7
44 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.


ಕೆರಳಿದವು ವಿಶ್ವ ರಾಷ್ಟ್ರಗಳು ಎರಗಿತು ನಿನ್ನ ಪ್ರಕೋಪವು ಸಮೀಪಿಸಿತು ಮೃತರ ನ್ಯಾಯತೀರ್ಪಿನ ದಿನವು ಬಂದಿದೆ ಸಮಯ ಸನ್ಮಾನಿಸಲು ನಿನ್ನ ದಾಸರನು, ಪ್ರವಾದಿಗಳನು, ದೇವಪ್ರಜೆಗಳನು ನಿನ್ನಲ್ಲಿ ಭಯಭಕುತಿಯುಳ್ಳ ಹಿರಿಯ ಕಿರಿಯರನು. ಇದಿಗೋ ಬಂದಿದೆ ಗಳಿಗೆಯು ಲೋಕನಾಶಕರನ್ನು ವಿನಾಶಗೊಳಿಸಲು", ಎಂದು ಹಾಡಿದರು.


ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ಸೃಷ್ಟಿಯಾಯಿತು ಗಗನ ಮಂಡಲ ಆತನ ನುಡಿಯೊಂದಕೆ I ರೂಪುಗೊಂಡಿತು ತಾರಾ ಮಂಡಲ ಅವನುಸಿರು ಮಾತ್ರಕೆ II


ಅವಳಿಗಾದ ಚಿತ್ರಹಿಂಸೆಯ ನಿಮಿತ್ತ ಭಯಪಟ್ಟು ದೂರದಲ್ಲೇ ನಿಂತು ಗೋಳಾಡುತ್ತಾ : “ಅಯ್ಯೋ ! ಅಯ್ಯೋ ! ಬಲಿಷ್ಠ ಬಾಬಿಲೋನ್ ಮಹಾನಗರಿಯೇ, ಒಂದೇ ತಾಸಿನಲ್ಲಿ ಬಂದೊದಗಿತಲ್ಲಾ ನಿನಗಿಂಥ ದುರ್ಗತಿ,” ಎಂದು ಪ್ರಲಾಪಿಸುವರು.


ಮನುಷ್ಯರು ಆ ಕಡು ಕಾವಿನಲ್ಲಿ ಬೆಂದು ನರಳಿದರು. ಈ ಮಾರಕ ವ್ಯಾಧಿಗಳ ಮೇಲೆ ಅಧಿಕಾರ ಇದ್ದ ದೇವರನ್ನೂ ದೂಷಿಸಿದರು. ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾಗಲಿಲ್ಲ; ಅವರ ಮಹಿಮೆಯನ್ನು ಸ್ತುತಿಸಲಿಲ್ಲ.


ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.


ನಮಗುದ್ಧಾರ ಪ್ರಭುವಿನ ನಾಮದಲಿ I ಭೂಮ್ಯಾಕಾಶವನು ಸೃಜಿಸಿದಾತನಲಿ II


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ಆ ವಾಣಿ ಮತ್ತೆ ಕೇಳಿಸಿತು : ‘ಗಟ್ಟಿಯಾಗಿ ಕೂಗು’ ಎಂದಿತು ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು : “ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ.


ಬಳಿಕ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿ : “ದೇವರ ಎಲ್ಲಾ ದಾಸರೇ, ಅವರಲ್ಲಿ ಭಯಭಕ್ತಿಯುಳ್ಳ ಹಿರಿಯಕಿರಿಯರೇ, ನಮ್ಮ ದೇವರನ್ನು ಕೊಂಡಾಡಿ,” ಎಂದು ಹೇಳಿತು.


“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಸರ್ವೇಶ್ವರನ ಮಹಿಮೆಯನು ಹೊಗಳಲಿ ಆತನ ಸ್ತೋತ್ರವ ಪಸರಿಸಲಿ ದ್ವೀಪದ್ವೀಪಗಳಲಿ.


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ಜಿನುಗುಟ್ಟುತಿಹುದು ಪಾಪವು ದುಷ್ಟನ ಮನದಲಿ I ದೇವ ಭಯವೇ ಇಲ್ಲ ಅವನ ಕಣ್ಣೆದುರಿನಲಿ II


ಆಕಾನನಿಗೆ ಯೆಹೋಶುವನು, “ಮಗನೇ, ನೀನು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಸ್ತುತಿಸಿ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ಮುಚ್ಚುಮರೆಯಿಲ್ಲದೆ ನನಗೆ ತಿಳಿಸು, ಎಂದನು


ಮೂರನೆಯ ದೇವದೂತನು ತುತೂರಿಯನ್ನು ಊದಿದನು. ಪಂಜಿನಂತೆ ಉರಿಯುತ್ತಿದ್ದ ದೊಡ್ಡ ನಕ್ಷತ್ರವೊಂದು ಆಕಾಶದಿಂದ ಕೆಳಕ್ಕೆ ಬಿತ್ತು. ಅದು ನದಿಗಳಲ್ಲಿ ಮೂರನೆಯ ಒಂದು ಭಾಗದ ಮೇಲೂ ನೀರಿನ ಒರತೆಗಳ ಮೇಲೂ ಬಿತ್ತು.


ದೇವರನ್ನು ಸ್ತುತಿಸುವುದಕ್ಕೆ ಈ ಹೊರನಾಡಿನವನು ಹೊರತು ಬೇರಾರೂ ಬರಲಿಲ್ಲವೇ?” ಎಂದರು.


“ದೇವರು ತಮ್ಮ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು - ಅದು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.”


ಪ್ರಳಯ ಬಂದಿತು, ಪೂರ್ಣಪ್ರಳಯ ಬಂದಿತು, ನಿನ್ನನ್ನು ಚಚ್ಚುವುದಕ್ಕೆ ಚಚ್ಚರಗೊಂಡಿದೆ, ಇಗೋ ಬಂದೇ ಬಂತು;


“ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.


ಇಗೋ, ಈ ವಾಣಿಯನ್ನು ಕೇಳಿ : “ಸರ್ವೇಶ್ವರ ಸ್ವಾಮಿಗೆ ಮಾರ್ಗವನ್ನು ಸಿದ್ಧಮಾಡಿ ಅರಣ್ಯದಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗಮಾಡಿ ಅಡವಿಯಲಿ.


ಸಮುದ್ರವು ಆತನದೆ-ಅದ ನಿರ್ಮಿಸಿದವ ಆತನೆ I ಒಣನೆಲವು ಆತನದೆ-ಅದ ರೂಪಿಸಿದವ ಆತನೆ II


ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಈ ಗಡ್ಡೆಗಳ ಹಾಗು ಇಲಿಗಳ ರೂಪವನ್ನು ಚಿನ್ನದಿಂದ ಮಾಡಿಸಿ ಇಸ್ರಯೇಲ್ ದೇವರಿಗೆ ಬಹುಮಾನವಾಗಿ ಕೊಡಿ. ಆಗ ಆತನ ಶಿಕ್ಷಾಹಸ್ತ ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಹಾಗು ಪ್ರಾಂತ್ಯಗಳನ್ನೂ ಬಿಟ್ಟುಹೋಗಬಹುದು.


ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.


ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.


ಆಗ ಹಡಗುಗಳ ಮಾಲೀಕರೆಲ್ಲರೂ ಸಮುದ್ರದ ಪ್ರಯಾಣಿಕರೂ ನಾವಿಕರೂ ಸಮುದ್ರದ ದುಡಿಮೆಗಾರರೂ ದೂರದಲ್ಲಿ ನಿಂತಿದ್ದರು.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.


ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


ಇಹಪರಗಳನು ಉಂಟುಮಾಡಿದ ಪ್ರಭುವಿಂದ I ಲಭಿಸುವಂತಾಗಲಿ ನಿಮಗೆ ಆಶೀರ್ವಾದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು