Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 15:2 - ಕನ್ನಡ ಸತ್ಯವೇದವು C.L. Bible (BSI)

2 ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗದ ವಿಗ್ರಹಕ್ಕೆ ನಮಸ್ಕರಿಸದೆಯೂ ಅದರ ಹೆಸರಿನ ಅಂಕೆಯನ್ನು ಮುದ್ರೆಹಾಕಿಸಿಕೊಳ್ಳದೆಯೂ ಅದರ ಮೇಲೆ ಜಯ ಹೊಂದಿದವರು ದೇವರ ಸೇವಾರ್ಥವಾದ ವೀಣೆಗಳನ್ನು ಕೈಯಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬೆಂಕಿಯನ್ನು ಬೆರಸಿದ ಗಾಜಿನ ಸಮುದ್ರದಂತೆ ಕಾಣಿಸುವ ಏನೋ ಒಂದು ನನಗೆ ಕಾಣಿಸಿತು. ಮೃಗವನ್ನು, ಅದರ ವಿಗ್ರಹವನ್ನು ಮತ್ತು ಅದರ ಹೆಸರಿನ ಸಂಖ್ಯೆಯನ್ನು ಸೋಲಿಸಿ ಜಯಗಳಿಸಿದವರೆಲ್ಲರೂ ಸಮುದ್ರ ತೀರದಲ್ಲಿ ನಿಂತಿದ್ದರು. ದೇವರು ಅವರಿಗೆ ನೀಡಿದ ತಂತಿವಾದ್ಯಗಳು ಅವರಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನಗೆ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಒಂದು ಕಾಣಿಸಿತು. ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಹೆಸರಿನ ಸಂಖ್ಯೆಯ ಮೇಲೆಯೂ ಜಯಹೊಂದಿದವರು ದೇವರ ಕಿನ್ನರಿಗಳನ್ನು ಕೈಯಲ್ಲಿ ಹಿಡಿದುಕೊಂಡು, ಗಾಜಿನ ಸಮುದ್ರದ ಮೇಲೆ ನಿಂತುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಿಯಾ ಆಗ್ ಮಿಸಳಲ್ಲ್ಯಾ ಕಾಜೆಚ್ಯಾ ಸಮುಂದರಾ ಸರ್ಕೆ ದಿಸ್ತಲೆ ಕಾಯ್‍ಕಿ ಬಗಟ್ಲೊ . ಭಯಾನಕ್ ಜನಾವರಾ ಅನಿ ತ್ಯೆಚ್ಯಾ ಮುರ್ತಿಯಾಂಚ್ಯಾ ವರ್ತಿ ಅನಿ ಅಂಕ್ಯಾನಿ ಜೆ ಕೊನಾಚೆ ನಾಂವ್ ದಾಕ್ವಲ್ಲೆ ಹಾಯ್ ತೆಚೆ ವರ್ತಿ ಜಿಕುನ್ ಜಯ್ ಹೊಲ್ಲ್ಯಾಕ್ನಿಬಿ ಮಿಯಾ ಬಗಟ್ಲೊ. ತೆನಿ ತ್ಯಾ ಕಾಜೆಚ್ಯಾ ಸಮುಂದರಾಕ್ಡೆ ದೆವಾನ್ ತೆಂಕಾ ದಿಲ್ಲಿ ಹಾರ್ಪ್ ಮನ್ತಲಿ ವಾಜ್ಪಾ ಘೆವ್ನ್ ಇಬೆ ಹೊತ್ತ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 15:2
14 ತಿಳಿವುಗಳ ಹೋಲಿಕೆ  

ಇದಲ್ಲದೆ, ಸಿಂಹಾಸನದ ಮುಂದೆ ಸ್ಫಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಂಡುಬಂದಿತು. ಸಿಂಹಾಸನದ ಸುತ್ತಲೂ ಅದರ ನಾಲ್ಕು ಪಾರ್ಶ್ವಗಳಲ್ಲಿ ನಾಲ್ಕು ಜೀವಿಗಳು ಇದ್ದವು. ಅವುಗಳಿಗೆ ಮುಂದೆಯೂ ಹಿಂದೆಯೂ ಅನೇಕ ಕಣ್ಣುಗಳಿದ್ದವು.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ಆ ಕೋಟೆಯನ್ನು ಸೂರ್ಯಕಾಂತ ಶಿಲೆಯಿಂದ ನಿರ್ಮಿಸಲಾಗಿತ್ತು. ನಗರವು ಅಪ್ಪಟ ಬಂಗಾರದಂತೆ ಥಳಥಳಿಸುತ್ತಿತ್ತು.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.


ಮೊದಲನೆಯ ಮೃಗದ ಎದುರಿನಲ್ಲಿ ಪವಾಡಗಳನ್ನೆಸಗುವ ಅನುಮತಿ ಇದ್ದುದರಿಂದ ಅದು ಭೂನಿವಾಸಿಗಳನ್ನು ಮರುಳುಗೊಳಿಸಿತು. ಖಡ್ಗದಿಂದ ಗಾಯಗೊಂಡಿದ್ದರೂ ಸಾಯದೆ ಬದುಕಿದ್ದ ಮೃಗದ ಗೌರವಾರ್ಥ ಒಂದು ವಿಗ್ರಹವನ್ನು ನಿರ್ಮಿಸಬೇಕೆಂದು ಭೂನಿವಾಸಿಗಳಿಗೆ ಅದು ವಿಧಿಸಿತು.


ಪ್ರಿಯರೇ, ಪರಿಶೋಧನೆಗೆಂದು ನಿಮಗೆ ಬಂದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸಂಭವಿಸಿಬಿಟ್ಟಿತೆಂದು ವಿಸ್ಮಯಪಡಬೇಡಿ.


ನಾನು ಸಮುದ್ರದ ತೀರದಲ್ಲಿ ನಿಂತಿದ್ದೆ. ಆಗ ನನಗೆ ಈ ದೃಶ್ಯ ಕಾಣಿಸಿತು: ಒಂದು ಮೃಗ ಸಮುದ್ರದಿಂದ ಮೇಲೆ ಏರಿಬಂದಿತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಪ್ರತಿಯೊಂದು ಕೊಂಬಿನ ಮೇಲೂ ಒಂದೊಂದು ಮುಕುಟವಿತ್ತು, ತಲೆಗಳ ಮೇಲೆ ದೇವದೂಷಣೆ ಮಾಡುವ ಹೆಸರುಗಳು ಇದ್ದವು.


ಆ ಗುರುತಿನ ಹಚ್ಚೆಯನ್ನು ಯಾರು ಚುಚ್ಚಿಸಿಕೊಳ್ಳಲಿಲ್ಲವೋ ಅವರು ಕೊಳ್ಳುವುದಕ್ಕಾಗಲಿ, ಮಾರುವುದಕ್ಕಾಗಲಿ ಸಾಧ್ಯ ಇರಲಿಲ್ಲ. ಆ ಗುರುತಿನ ಮುದ್ರೆ ಏನೆಂದರೆ ಮೃಗದ ಹೆಸರು ಇಲ್ಲವೆ, ಆ ಹೆಸರನ್ನು ಸೂಚಿಸುವ ಸಂಖ್ಯೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು