Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 15:7 - ಕನ್ನಡ ಸತ್ಯವೇದವು C.L. Bible (BSI)

7 ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ಮಂದಿ ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಆ ಪಾತ್ರೆಗಳಲ್ಲಿ ಯುಗಯುಗಾಂತರಕ್ಕೂ ಜೀವಿಸುವ ದೇವರ ರೋಷವು ತುಂಬಿತುಳುಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾಲ್ಕು ಜೀವಿಗಳಲ್ಲಿ ಒಂದು ಈ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ನೀಡಿತು. ಈ ಪಾತ್ರೆಗಳು ಯುಗಯುಗಾಂತರಗಳಲ್ಲಿಯೂ ಜೀವಿಸುವ ದೇವರ ಕೋಪದಿಂದ ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾಲ್ಕು ಜೀವಿಗಳಲ್ಲಿ ಒಂದು, ಆ ಏಳು ದೂತರಿಗೆ, ಯುಗಯುಗಾಂತರಗಳಲ್ಲಿಯೂ ಜೀವಿಸುವವರಾದ ದೇವರ ಕೋಪದಿಂದ ತುಂಬಿದ್ದ ಏಳು ಚಿನ್ನದ ಬೋಗುಣಿಗಳನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಾನಾ ಚಾರ್ ಝಿತ್ತ್ಯಾ ಸಾವ್ಜಾನಿತ್ಲ್ಯಾ ಎಕ್ ಸಾವ್ಜಾನ್ ತ್ಯಾ ಸಾತ್ ದೆವಾಚ್ಯಾ ದುತಾಕ್ನಿ ಸದಾ ಸರ್ವತಾಕ್‍ ಝಿತ್ತೊ ರ್‍ಹಾತಲ್ಯಾ ದೆವಾಚ್ಯಾ ರಾಗಾನಿ ಭರಲ್ಲೆ ಸಾತ್ ಸೊನ್ಯಾಚೆ ಕಟೊರೆ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 15:7
13 ತಿಳಿವುಗಳ ಹೋಲಿಕೆ  

ಅದರಂತೆಯೇ ಮೊದಲನೆಯ ದೇವದೂತನು ಹೋಗಿ ತನ್ನ ಪಾತ್ರೆಯಲ್ಲಿ ಇದ್ದುದನ್ನು ಭೂಮಿಯ ಮೇಲೆ ಸುರಿದನು. ಪರಿಣಾಮವಾಗಿ, ಮೊದಲನೆಯ ಮೃಗದ ಹಚ್ಚೆ ಚುಚ್ಚಿಸಿಕೊಂಡವರ ಮತ್ತು ಅದರ ವಿಗ್ರಹವನ್ನು ಪೂಜಿಸಿದವರ ಮೈಮೇಲೆಲ್ಲಾ ಭಯಂಕರವಾದ ಉರಿ ಹುಣ್ಣುಗಳು ಎದ್ದವು.


ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು : “ಇನ್ನು ನಿಧಾನಿಸುವಂತಿಲ್ಲ;


ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ಏಳು ಅಂತಿಮ ವಿಪತ್ತುಗಳಿಂದ ತುಂಬಿದ್ದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ದೇವದೂತರುಗಳಲ್ಲಿ ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.


ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.


ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು: “ಕೋಪವೆಂಬ ಮದ್ಯದಿಂದ ತುಂಬಿರುವ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊ. ಯಾವ ರಾಷ್ಟ್ರಗಳ ಬಳಿಗೆ ನಿನ್ನನ್ನು ಕಳಿಸುತ್ತೇನೋ ಆ ರಾಷ್ಟ್ರಗಳೆಲ್ಲ ಈ ಪಾತ್ರೆಯಿಂದ ಕುಡಿಯುವಂತೆ ಮಾಡು.


ಪ್ರಭುವಿನ ಕರಗಳಲ್ಲಿದೆ ಕೋಪಕೊಡ ಒಂದು I ತುಂಬಿದೆ ಅಮಲುಮಿಶ್ರ ರೌದ್ರರಸದಿಂದದು II ಅದನವನು ಸುರಿಯಲು ಕುಡಿವರು ಜಗದ ದುರುಳರು I ಮಡ್ಡಿಯನು ಕೂಡ ಬಿಡದೆ ಕುಡಿವರೆಲ್ಲರು II


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು