Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 15:8 - ಕನ್ನಡ ಸತ್ಯವೇದವು C.L. Bible (BSI)

8 ದೇವರ ಸಾನ್ನಿಧ್ಯದ ತೇಜಸ್ಸು ಮತ್ತು ಪ್ರಭಾವಗಳು ದೇವಾಲಯವನ್ನು ಧೂಮದಿಂದ ತುಂಬಿದವು. ಇದರಿಂದಾಗಿ, ಆ ಏಳು ದೇವದೂತರು ತಂದ ಏಳು ವಿಪತ್ತುಗಳು ಮುಗಿಯುವ ತನಕ ಆ ದೇವಾಲಯವನ್ನು ಪ್ರವೇಶಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರ ತೇಜಸ್ಸಾನ್ನಿಧ್ಯದಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಪವಿತ್ರಸ್ಥಾನವು ತುಂಬಿದ ಕಾರಣ ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಪವಿತ್ರಸ್ಥಾನದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರ ವೈಭವ ಮತ್ತು ಶಕ್ತಿಯ ಹೊಗೆಯಿಂದ ಆಲಯವು ತುಂಬಿಹೋಯಿತು. ಏಳು ದೇವದೂತರ ಏಳು ಉಪದ್ರವಗಳು ಮುಗಿಯುವ ತನಕ ಆಲಯದಲ್ಲಿ ಪ್ರವೇಶಿಸಲು ಯಾರಿಗೂ ಸಾಧ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಿ ಗುಡಿ ದೆವಾಚ್ಯಾ ಬಳಾಚ್ಯಾ ಅನಿ ಮಹಿಮೆಚ್ಯಾ ಡುಕ್ಟಾನಿ ಭರುನ್ ಗೆಲ್ಲಿ, ಸಾತ್ ದೆವಾಚ್ಯಾ ದುತಾನಿ ಹಾನಲ್ಲಿ ಸಾತ್ ಪಿಡಾ ಸರಿ ಪತರ್ ಕೊನಾಕ್‍ಬಿ ದೆವಾಚ್ಯಾಗುಡಿತ್ ಗುಸುಕ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 15:8
14 ತಿಳಿವುಗಳ ಹೋಲಿಕೆ  

ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಧೂಮವು ಆಲಯವನ್ನೆಲ್ಲ ತುಂಬಿತು.


ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.


ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.


ಈಯುವುವು ಜಿಂಕೆಗಳು, ನಗ್ನವಾಗುವುವು ವೃಕ್ಷಗಳು I ಜಯಜಯ ಘೋಷಮಾಡುವರೆಲ್ಲರು ಆತನಾಲಯದೊಳು II


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ನಮ್ಮ ಪ್ರಾರ್ಥನೆ ನಿನಗೆ ಮುಟ್ಟಬಾರದೆಂದೆ ಮೋಡಗಳ ಹಿಂದೆ ಮರೆಮಾಡಿಕೊಂಡೆ.


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.


ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು