Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:10 - ಕನ್ನಡ ಸತ್ಯವೇದವು C.L. Bible (BSI)

10 ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಸುರಿದನು. ಕೂಡಲೇ ಆ ಮೃಗ ರಾಜ್ಯದ ಮೇಲೆ ಅಂಧಕಾರ ಕವಿಯಿತು. ಜನರು ತಮಗೆ ಬಂದೆರಗಿದ ಬಾಧೆಯನ್ನು ತಾಳಲಾರದೆ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಐದನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಹೊಯ್ಯಲು ಅದರ ರಾಜ್ಯವು ಕತ್ತಲಾಯಿತು. ಜನರು ತಮಗಾದ ಕಷ್ಟದ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಆ ಮೃಗದ ಸಿಂಹಾಸನದ ಮೇಲೆ ಸುರಿದನು. ಮೃಗದ ರಾಜ್ಯದಲ್ಲಿ ಅಂಧಕಾರವು ಕವಿಯಿತು. ಜನರು ನೋವಿನಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಐದನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು, ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪಾಂಚ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ತ್ಯಾ ಭಯಾನಕ್ ಜನವಾರಾಂಚ್ಯಾ ಸಿವಾಸನಾಚ್ಯಾ ವರ್ತಿ ವೊತ್ಲ್ಯಾನ್. ತನ್ನಾ ಭಯಾನಕ್ ಜನವಾರಾಚ್ಯಾ ರಾಜಾತ್ ಕಾಳೊಕ್ ಭರ್‍ಲೊ, ಅನಿ ಲೊಕಾನಿ ಅಪ್ನಾಕ್ ಹೊತಲ್ಯಾ ತರಾಸಾನಿ ಅಪ್ನಾಚ್ಯಾ ಜಿಬ್ಲಿಯಾ ಚಾವುನ್ ಘೆಟ್ಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:10
22 ತಿಳಿವುಗಳ ಹೋಲಿಕೆ  

ಅವನು ಆ ಕೂಪದ ಮುಚ್ಚಳವನ್ನು ತೆರೆದನು. ಅದರೊಳಗಿಂದ ದಟ್ಟಹೊಗೆ ದೊಡ್ಡ ಕುಲುಮೆ ಒಂದರಿಂದ ಬರುತ್ತಿರುವಂತೆ ಮೇಲೇರಿತು. ಇದರಿಂದಾಗಿ ಸೂರ್ಯನೂ ವಾಯುಮಂಡಲವೂ ಕಪ್ಪಾದವು.


ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


“ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ.


ಹೀಗೆ ದೈವಸಂಕಲ್ಪವು ನೆರವೇರಬೇಕೆಂದು ದೇವರೇ ಆ ಜನರನ್ನು ಪ್ರೇರೇಪಿಸುವರು. ಇದೇ ಪ್ರೇರಣೆಯಿಂದಾಗಿ ದೇವರ ವಾಕ್ಯ ನೆರವೇರುವವರೆಗೆ ಅವರು ಒಮ್ಮನಸ್ಸಿನಿಂದ ರಾಜ್ಯಾಧಿಕಾರವನ್ನು ಆ ಮೃಗಕ್ಕೆ ಒಪ್ಪಿಸಿಬಿಡುವರು.


ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ.


ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.”


ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!!


ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು.


ಸುರಿಸಿದನು ಕೋಪರೌದ್ರಗಳನು, ಉಗ್ರಹಿಂಸೆಗಳನು I ಕಳಿಸಿದನವರ ಮೇಲೆ ಸಂಹಾರಕ ದೂತಗಣಗಳನು II


“ಇದನ್ನು ಗ್ರಹಿಸಿಕೊಳ್ಳಲು ಬುದ್ಧಿ ಸಾಮರ್ಥ್ಯವಿರಬೇಕು. ಏಳು ತಲೆಗಳು ಆ ಸ್ತ್ರೀ ಕುಳಿತಿರುವ ಏಳು ಬೆಟ್ಟಗಳನ್ನೂ ಏಳು ರಾಜರನ್ನೂ ಸೂಚಿಸುತ್ತವೆ.


ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.”


ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.


ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.


ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು.


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ನಾಲ್ಕನೆಯ ದೇವದೂತನು ತುತೂರಿಯನ್ನು ಊದಿದನು. ಸೂರ್ಯಚಂದ್ರ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗಕ್ಕೆ ಧಕ್ಕೆ ಉಂಟಾಯಿತು. ಅವುಗಳ ಮೂರನೆಯ ಒಂದು ಭಾಗ ಕಾಂತಿಹೀನವಾಯಿತು. ಇದರಿಂದಾಗಿ ಹಗಲಿನಲ್ಲೂ ರಾತ್ರಿಯಲ್ಲೂ ಮೂರನೆಯ ಒಂದು ಭಾಗದಷ್ಟು ಬೆಳಕು ಕಡಿಮೆಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು