Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:12 - ಕನ್ನಡ ಸತ್ಯವೇದವು C.L. Bible (BSI)

12 ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಎಂಬ ಮಹಾ ನದಿಯ ಮೇಲೆ ಹೊಯ್ಯಲು ಅದರ ನೀರು ಇಂಗಿಹೋಯಿತು; ಇದರಿಂದ ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರಟಿಸ್ ಮಹಾನದಿಯ ಮೇಲೆ ಸುರಿಸಿದನು. ನದಿಯಲ್ಲಿದ್ದ ನೀರು ಬತ್ತಿಹೋಯಿತು. ಇದರಿಂದ ಪೂರ್ವದಲ್ಲಿದ್ದ ರಾಜರುಗಳು ಬರಲು ಮಾರ್ಗವು ಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಸಾವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ಮೊಟ್ಯಾ ಯುಪ್ರೆಟಿಸ್ ಮನುನ್ ಬಲ್ವುತಲ್ಯಾ ನ್ಹಯ್ ವರ್ತಿ ವೊತ್ಲ್ಯಾನ್. ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಯೆತಲ್ಯಾ ರಾಜಾಕ್ನಿ ವಾಟ್ ಕರುನ್ ದಿವ್‍ಸಾಟ್ನಿ ತಿ ನ್ಹಯ್ ಅಟುನ್ ವಾಳುನ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:12
15 ತಿಳಿವುಗಳ ಹೋಲಿಕೆ  

ತುತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ ಅದು, “ಯೂಫ್ರೆಟಿಸ್ ಮಹಾನದಿಯ ಬಳಿ ಕಟ್ಟಲಾಗಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಆಜ್ಞಾಪಿಸಿತು.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು.


‘ಬತ್ತಿಹೋಗು’ ಎಂದು ಜಲರಾಶಿಗಳಿಗೆ ‘ಒಣಗಿಹೋಗು’ ಎಂದು ನಿನ್ನ ಸೇರುವ ನದಿಗಳಿಗೆ ಅಪ್ಪಣೆ ಕೊಡುವಾತನು ನಾನೆ.


ಹುರಿದುಂಬಿಸಿ ಕರೆತಂದಿರುವೆನು ಒಬ್ಬನನ್ನು ಉತ್ತರದಿಂದ ನನ್ನ ನಾಮವನ್ನು ಪ್ರಚುರಪಡಿಸಲು ಬಂದಿಹನಾತ ಪೂರ್ವದಿಂದ ಕುಂಬಾರನು ಜೇಡಿಮಣ್ಣನ್ನು ತುಳಿಯುವಂತೆ ತುಳಿಯುವನಾತ ರಾಜರನ್ನು ಮಣ್ಣಂತೆ.


ನಾಶಪಡಿಸುವೆನು ಬೆಟ್ಟಗುಡ್ಡಗಳನು ಒಣಗಿಸಿಬಿಡುವೆನು ಹುಲ್ಲು ಸಸಿಗಳನು. ಒಣನೆಲ ಮಾಡುವೆನು ನದಿಗಳನು ಬತ್ತಿಸಿಬಿಡುವೆನು ಕೆರೆಕುಂಟೆಗಳನು.


ಆತ ಬತ್ತಿಸುವನು ಈಜಿಪ್ಟಿನ ಕೊಲ್ಲಿಯನ್ನು, ಒಣಗಿಸುವನು ಬಿಸಿಗಾಳಿಯಿಂದ ಯೂಫ್ರೆಟಿಸ್ ನದಿಯನ್ನು, ಸೀಳುವನದನ್ನು ಏಳು ತೊರೆಗಳನ್ನಾಗಿ. ಈ ಪರಿ ದಾಟುವರು ಜನರು ಕೆರ ಮೆಟ್ಟಿದವರಾಗಿ.


ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.


ಆಗ ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ:


ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.


ಹೀಗೆ ಎರಡನೆಯ ವಿಪತ್ತು ಮುಗಿಯಿತು. ಇಗೋ ಮೂರನೆಯ ವಿಪತ್ತು ಕೂಡಲೇ ಬಂದೆರಗುವುದು.


ಆದುದರಿಂದ ಸ್ವಾಮಿಯಾದ ನಾನು ಅಸ್ಸೀರಿಯದ ಅರಸನನ್ನೂ ಅವನ ಚದುರಂಗ ಬಲವನ್ನೂ ಬರಮಾಡುವೆನು: ಅದು ಯೂಫ್ರಟಿಸ್ ಮಹಾನದಿಯ ಪ್ರವಾಹದಂತೆ ರಭಸವಾಗಿ ಹರಿದುಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು