Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:13 - ಕನ್ನಡ ಸತ್ಯವೇದವು C.L. Bible (BSI)

13 ಇವುಗಳಾದ ಮೇಲೆ ಕಪ್ಪೆಗಳಂತಿದ್ದ ಮೂರು ದುಷ್ಟಾತ್ಮಗಳನ್ನು ನಾನು ಕಂಡೆ. ಅವು ಘಟಸರ್ಪದ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಕಪಟ ಪ್ರವಾದಿಯ ಬಾಯೊಳಗಿಂದಲೂ ಹೊರಟುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮತ್ತು ಘಟಸರ್ಪ ಮೃಗ ಸುಳ್ಳುಪ್ರವಾದಿ ಇವರ ಬಾಯಿಗಳಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳನ್ನು ನಾನು ನೋಡಿದೆನು. ಅವು ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಹೊರಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಕಪ್ಪೆಗಳಂತೆ ಕಾಣುವ ಮೂರು ಅಶುದ್ಧಾತ್ಮಗಳು ಘಟಸರ್ಪನ ಬಾಯೊಳಗಿಂದಲೂ ಮತ್ತು ಸುಳ್ಳು ಪ್ರವಾದಿಯ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಬರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ಮಿಯಾ ತಿನ್ ಬುರ್ಶ್ಯಾ ಅತ್ಮ್ಯಾಕ್ನಿ ಬಗಟ್ಲೊ, ತೆ ಬೆಡ್ಕಿಯಾಂಚ್ಯಾ ಸರ್ಕೆ ದಿಸುಲಾಗಲ್ಲೆ. ತೆ ಮೊಟ್ಯಾ ಸಾಪಾಚ್ಯಾ ತೊಂಡಾತ್ನಾ, ತ್ಯಾ ಭಯಾನಕ್ ಜನವಾರಾಚ್ಯಾ ತೊಂಡಾತ್ನಾ, ಅನಿ ಝುಟ್ಯಾ ಪ್ರವಾದ್ಯಾಚ್ಯಾ ತೊಡಾತ್ನಾ ಯೆವ್‍ಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:13
17 ತಿಳಿವುಗಳ ಹೋಲಿಕೆ  

ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.


ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


ಇವು ಪವಾಡ ಕಾರ್ಯಗಳನ್ನು ಎಸಗುವ ದೆವ್ವಾತ್ಮಗಳು. ಸರ್ವಶಕ್ತ ದೇವರ ಮಹಾದಿನದಲ್ಲಿ ನಡೆಯುವ ಯುದ್ಧಕ್ಕಾಗಿ ಭೂಲೋಕದ ರಾಜರುಗಳನ್ನೆಲ್ಲಾ ಒಟ್ಟುಗೂಡಿಸಲು ಅವು ಹೊರಟವು.


ತುಂಬಿಕೊಂಡವು ಕಪ್ಪೆಗಳು ನಾಡಿನೊಳೆಲ್ಲ I ಹರಡಿಕೊಂಡವು ಅರಸನ ಕೊಠಡಿಗಳಲೆಲ್ಲ II


ಕಳುಹಿಸಿದನು ವಿನಾಶಕರ ಹುಳುಗಳನು I ಹಾಳುಮಾಡುವ ವಿಷಮಂಡೂಕಗಳನು II


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು