Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:17 - ಕನ್ನಡ ಸತ್ಯವೇದವು C.L. Bible (BSI)

17 ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ವಾಯುಮಂಡಲದ ಮೇಲೆ ಸುರಿದನು. ಆಗ ದೇವಾಲಯದ ಸಿಂಹಾಸನದ ಕಡೆಯಿಂದ ಒಂದು ದೊಡ್ಡ ಧ್ವನಿ ಉಂಟಾಗಿ, “ಮುಗಿಸಿದ್ದಾಯಿತು,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಆಯಿತು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಏಳನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದ ಮೇಲೆ ಹೊಯ್ಯಲು ದೇವಾಲಯದಲ್ಲಿರುವ ಸಿಂಹಾಸನದ ಕಡೆಯಿಂದ ಮಹಾ ಶಬ್ದವು ಉಂಟಾಗಿ - ಆಯಿತು ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಗಾಳಿಯಲ್ಲಿ ಸುರಿದನು. ಆಗ ಒಂದು ಮಹಾಧ್ವನಿಯು ಸಿಂಹಾಸನದಿಂದ ಆಲಯದ ಹೊರಕ್ಕೆ ಬಂದಿತು. ಆ ಧ್ವನಿಯು, “ಮುಗಿದುಹೋಯಿತು!” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಳನೆಯ ದೂತನು ತನ್ನ ಬೋಗುಣಿಯಲ್ಲಿರುವುದನ್ನು ವಾಯುಮಂಡಲದ ಮೇಲೆ ಸುರಿಯಲು, ಆ ದೇವಾಲಯದೊಳಗಿನ ಸಿಂಹಾಸನದಿಂದ ಬಂದ ಮಹಾಧ್ವನಿಯು, “ಸಂಭವಿಸಿದ್ದಾಯಿತು” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾ ಸಾತ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ವಾರ್‍ಯಾತ್ ವೊತ್ಲ್ಯಾನ್. ತನ್ನಾ ದೆವಾಚ್ಯಾಗುಡಿತ್ ಸಿವಾಸನಾ ವೈನಾ,“ಸರುನ್ ಗೆಲೆ!” ಮನ್ತಲೊ ಎಕ್ ಮೊಟೊ ಧನ್ ಆಯಿಕ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:17
13 ತಿಳಿವುಗಳ ಹೋಲಿಕೆ  

ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ಯೇಸು ಆ ಹುಳಿರಸವನ್ನು ಸೇವಿಸುತ್ತಲೇ, “ಎಲ್ಲಾ ನೆರವೇರಿತು,” ಎಂದು ನುಡಿದು ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿದರು.


ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.


ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.


ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.


ಮಗದೊಬ್ಬ ದೇವದೂತನು ಸ್ವರ್ಗದ ದೇವಮಂದಿರದಿಂದ ಹೊರಗೆ ಬಂದನು. ಆತನ ಕೈಯಲ್ಲೂ ಹರಿತವಾದ ಕುಡುಗೋಲು ಇತ್ತು.


ಇನ್ನೊಬ್ಬ ದೇವದೂತನು ದೇವಮಂದಿರದಿಂದ ಹೊರಗೆ ಬಂದನು. ಈತನು ಮೋಡದ ಮೇಲೆ ಕುಳಿತಿದ್ದ ಅವನನ್ನು ಉದ್ದೇಶಿಸಿ, “ಭೂಮಿಯ ಫಸಲು ಮಾಗಿದೆ, ಕೊಯ್ಲಿನ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ತೆಗೆದು ಕೊಯಿಲು ಮಾಡಲು ಆರಂಭಿಸು,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು