Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ಮಿಂಚು, ಗುಡುಗು, ಗರ್ಜನೆಗಳುಂಟಾದವು. ಇದಲ್ಲದೆ, ಭಯಂಕರವಾದ ಭೂಕಂಪ ಉಂಟಾಯಿತು. ಮಾನವ ಇತಿಹಾಸದಲ್ಲೇ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವಾಯಿತು; ಮನುಷ್ಯರು ಭೂವಿುಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು ಮತ್ತು ಭೂಕಂಪವೂ ಆಯಿತು. ಜನರು ಭೂಮಿಯ ಮೇಲೆ ಇರಲು ಆರಂಭಿಸಿದಂದಿನಿಂದ ಅಂತಹ ಭೀಕರ ಭೂಕಂಪವು ಎಂದೂ ಸಂಭವಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅಲ್ಲಿ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಮತ್ತು ಮಹಾಭೂಕಂಪವೂ ಸಂಭವಿಸಿದವು. ಮನುಷ್ಯನು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತನ್ನಾ ಜಿಮ್ನಿರ್ ಮಿಂಚ್‍ ಮಾರುಕ್‍ಲಾಗ್ಲೆ, ಅವಾಜಾ ಹೊವ್ಕ್‌ ಲಾಗ್ಲಿ, ಗುಡ್ಗುಡ್ಯಾಚೊ ಅವಾಜ್ ಹೊವ್ಕ್ ಲಾಗ್ಲೊ, ಲೈ ಮೊಟೆ ಭುಕಂಪ್ ಹೊಲೆ ಮಾನ್ಸಾಕ್ನಿ ರಚುನ್ ಹೊಲ್ಲ್ಯಾಕ್ನಾ ಅಜುನ್ ಪತರ್ ಅಸ್ಲೆ ಭುಕಂಪ್ ಕನ್ನಾಬಿ ಹೊವ್ಕ್ ನತ್ತೆ: ಹೆ ಸಗ್ಳ್ಯಾ ಭುಕಂಪಾಚ್ಯಾನ್ಕಿ ಮೊಟೆ ಭುಕಂಪ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:18
8 ತಿಳಿವುಗಳ ಹೋಲಿಕೆ  

ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರಹೊಮ್ಮುತ್ತಿದ್ದವು. ಆ ಸಿಂಹಾಸನದ ಮುಂದೆ ದೇವರ ಸಪ್ತ ಆತ್ಮಗಳನ್ನು ಸೂಚಿಸುವ ಸಪ್ತದೀಪಗಳು ಬೆಳಗುತ್ತಿದ್ದವು.


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ಅನಂತರ ಆ ದೇವದೂತನು ಧೂಪಾರತಿಯನ್ನು ಎತ್ತಿಕೊಂಡು, ಅದನ್ನು ಬಲಿಪೀಠದ ಮೇಲಿದ್ದ ಕೆಂಡಗಳಿಂದ ತುಂಬಿಸಿ, ಭೂಮಿಗೆ ಎಸೆದನು. ಆಗ ಮಿಂಚು, ಗುಡುಗು, ಗರ್ಜನೆಗಳು ಮತ್ತು ಭೂಕಂಪವು ಉಂಟಾದವು.


ಆ ಯಜ್ಞದ ಕುರಿಮರಿ ಆರನೆಯ ಮುದ್ರೆಯನ್ನು ಒಡೆದಾಗ, ದೊಡ್ಡ ಭೂಕಂಪವಾಯಿತು. ಸೂರ್ಯನು ಕರಿಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.


ಏಕೆಂದರೆ ಆಗ ಬರಲಿರುವ ಸಂಕಷ್ಟಗಳು ಸೃಷ್ಟಿಯ ಆದಿಯಿಂದ ಇಂದಿನವರೆಗೂ ಇರಲಿಲ್ಲ; ಇನ್ನು ಮುಂದಕ್ಕೂ ಇರುವುದಿಲ್ಲ.


ಗುಡುಗು, ಭೂಕಂಪ, ಮಹಾಗರ್ಜನೆ, ಬಿರುಗಾಳಿ, ಚಂಡಮಾರುತ, ಭಸ್ಮಮಾಡುವಂಥ ಅಗ್ನಿಜ್ವಾಲೆ - ಇವುಗಳ ಮೂಲಕ ಸರ್ವೇಶ್ವರ ನಿನ್ನ ಪರವಾಗಿ ಪ್ರತ್ಯಕ್ಷವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು