Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:19 - ಕನ್ನಡ ಸತ್ಯವೇದವು C.L. Bible (BSI)

19 ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮಹಾ ಪಟ್ಟಣವು ಮೂರು ಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು. ಇದಲ್ಲದೆ ದೇವರು ದೊಡ್ಡ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಅವಳಿಗೆ ಕುಡಿಯಲು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಮಹಾನಗರವು ಒಡೆದು ಮೂರು ಭಾಗವಾಯಿತು. ಜನಾಂಗಗಳ ನಗರಗಳು ನಾಶವಾದವು. ಮಹಾನಗರವಾದ ಬಾಬಿಲೋನನ್ನು ದೇವರು ದಂಡಿಸದೆ ಬಿಡಲಿಲ್ಲ. ಆತನು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕುಡಿಯಲು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮಹಾ ಪಟ್ಟಣವು ಮೂರು ಭಾಗಗಳಾಗಿ ಹೋಯಿತು ಮತ್ತು ರಾಷ್ಟ್ರಗಳ ನಗರಗಳು ಬಿದ್ದವು. ಇದಲ್ಲದೆ ಮಹಾ ಬಾಬಿಲೋನಿಗೆ ರೋಷವೆಂಬ ದ್ರಾಕ್ಷಾರಸದ ಬಟ್ಟಲನ್ನು ಕೊಡುವಂತೆ ದೇವರಿಗೆ ಅದು ಜ್ಞಾಪಕಕ್ಕೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮೊಟೆ ಶಾರ್ ತಿನ್ ಭಾಗಾ ಹೊವ್ನ್ ಎಗಳ್ಳೆ ಅನಿ ಸಗ್ಳ್ಯಾ ದೆಶಾಂಚಿ ಶಾರಾ ನಾಸ್ ಹೊವ್ನ್ ಗೆಲಿ. ದೆವಾನ್ ಬಾಬಿಲೊನಾಚಿ ಯಾದ್ ಕರ್ಲ್ಯಾನ್, ಅನಿ ತಿಕಾ ಅಪ್ನಾಚ್ಯಾ ಮೊಟ್ಯಾ ರಾಗಾಚ್ಯಾ ಆಯ್ದಾನಾತ್ಲೆ ವಾಯ್ನ್ ಫಿವ್ಕ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:19
15 ತಿಳಿವುಗಳ ಹೋಲಿಕೆ  

ಅವಳ ಪಾಪಗಳು ಬೆಳೆಬೆಳೆದು ಆಗಸಕ್ಕೇರುತಿವೆ ಅವಳ ಅಕ್ರಮ ಅನ್ಯಾಯಗಳು ದೇವರ ನೆನಪಿನಲ್ಲಿವೆ.


ಅವಳಿಗಾದ ಚಿತ್ರಹಿಂಸೆಯ ನಿಮಿತ್ತ ಭಯಪಟ್ಟು ದೂರದಲ್ಲೇ ನಿಂತು ಗೋಳಾಡುತ್ತಾ : “ಅಯ್ಯೋ ! ಅಯ್ಯೋ ! ಬಲಿಷ್ಠ ಬಾಬಿಲೋನ್ ಮಹಾನಗರಿಯೇ, ಒಂದೇ ತಾಸಿನಲ್ಲಿ ಬಂದೊದಗಿತಲ್ಲಾ ನಿನಗಿಂಥ ದುರ್ಗತಿ,” ಎಂದು ಪ್ರಲಾಪಿಸುವರು.


ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರವುಳ್ಳ ಮಹಾನಗರದ ಸೂಚನೆಯಾಗಿದ್ದಾಳೆ.”


ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.”


ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


ದೂರ - ಹತ್ತಿರವಿರುವ ಉತ್ತರ ನಾಡಿನ ಎಲ್ಲ ಅರಸರು, ಲೋಕದ ಸಕಲ ರಾಜ್ಯಗಳು, ಇವರೆಲ್ಲರು ಕುಡಿದ ಮೇಲೆ ಬಾಬಿಲೋನಿನ ಅರಸನು ಕುಡಿಯುವನು.


ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು