Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:4 - ಕನ್ನಡ ಸತ್ಯವೇದವು C.L. Bible (BSI)

4 ಮೂರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ನದಿಗಳ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಸುರಿದನು. ನೀರೆಲ್ಲಾ ರಕ್ತಮಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೂರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮೂರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ನದಿಗಳು ಮತ್ತು ನೀರಿನ ಬುಗ್ಗೆಗಳೆಲ್ಲ ರಕ್ತವಾಗಿ ಪರಿಣಮಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೂರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ನದಿಗಳ ಮೇಲೂ ನೀರಿನ ಬುಗ್ಗೆಗಳ ಮೇಲೂ ಸುರಿಯಲು, ಅವು ರಕ್ತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಾನಾ ತಿನ್ವ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ನ್ಹಯಾಂಚ್ಯಾ ವರ್ತಿ ಅನಿ ಪಾನಿಯಾಂಚ್ಯಾ ಝರ್‍ಯಾಂಚ್ಯಾ ವರ್ತಿ ವೊತ್ಲ್ಯಾನ್. ತನ್ನಾ ತೆ ಸಗ್ಳೆ ರಗಾತ್ ಹೊವ್ನ್ ಬದಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:4
10 ತಿಳಿವುಗಳ ಹೋಲಿಕೆ  

ಆಗ ಜಲಾಧಿಕಾರಿಯಾದ ದೂತನು : “ತ್ರಿಕಾಲಸ್ಥನು ಪರಿಶುದ್ಧನು ನೀನೇ ನೀನಿತ್ತ ತೀರ್ಪು ನ್ಯಾಯಬದ್ಧವಾದುದೇ.


ಆತನು ಮಹಾಶಬ್ದದಿಂದ, “ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ; ಅವರಿಗೆ ಸ್ತುತಿಸ್ತೋತ್ರ ಸಲ್ಲಿಸಿರಿ. ಏಕೆಂದರೆ, ಅವರು ತೀರ್ಪುಕೊಡುವ ಗಳಿಗೆಯು ಬಂದಿದೆ. ಆದ್ದರಿಂದ ಭೂಸ್ವರ್ಗಗಳನ್ನೂ ಕಡಲುಕಾರಂಜಿಗಳನ್ನೂ ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸಿರಿ,” ಎಂದು ಹೇಳಿದನು.


ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಸರ್ವೇಶ್ವರ, ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಕಾಲುವೆ, ಹೊಳೆ, ಕೆರೆ ಇವುಗಳ ಮೇಲೆ ಚಾಚು. ಆಗ ಈಜಿಪ್ಟ್ ದೇಶದ ಮೇಲೆಲ್ಲಾ ಕಪ್ಪೆಗಳು ಏರಿಬರುವುವು, ಎಂದು ಹೇಳು.”


ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡತಗ್ಗು ತೊರೆಗಳಲ್ಲಿ ಬಿದ್ದುಹೋಗುವರು.


ಅಲ್ಲಿ ಆತ ರಕ್ತವಾಗಿಸಿದನು ನದಿನೀರನು I ಕುಡಿಯಲಾಗದಂತೆ ಮಾಡಿದನಾ ತೊರೆನೀರನು II


ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು