Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:11 - ಕನ್ನಡ ಸತ್ಯವೇದವು C.L. Bible (BSI)

11 ಹಿಂದೊಮ್ಮೆ ಇದ್ದು ಈಗ ಇಲ್ಲದಿರುವ ಮೃಗವು ಎಂಟನೆಯ ರಾಜನನ್ನು ಸೂಚಿಸುತ್ತದೆ. ಅದು ಆ ಏಳುಮಂದಿಗೆ ಸೇರಿದುದು ಮತ್ತು ವಿನಾಶದತ್ತ ತೆರಳುವಂಥಾದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸು; ಅವನು ಆ ಏಳು ಮಂದಿ ಅರಸುಗಳಿಗೆ ಸೇರಿದವನು; ನಾಶಕ್ಕೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಒಂದುಕಾಲದಲ್ಲಿ ಜೀವಿಸಿದ್ದು, ಆದರೆ ಈಗ ಜೀವಿಸಿಲ್ಲದ ಈ ಮೃಗವು ಎಂಟನೆಯ ರಾಜ. ಈ ಎಂಟನೆಯ ರಾಜನೂ ಮೊದಲ ಏಳು ರಾಜರುಗಳ ಗುಂಪಿಗೆ ಸೇರಿದವನು. ಅವನೂ ನಾಶವಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಿಂದೆ ಇದ್ದು ಈಗ ಇಲ್ಲದ ಆ ಮೃಗವು ಎಂಟನೆಯವನು. ಅವನು ಆ ಏಳು ಜನರಲ್ಲಿ ಸೇರಿದವನಾಗಿದ್ದು, ವಿನಾಶಕ್ಕೆ ಹೋಗುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ಲೈ ದಿಸ್ ಜಿವನ್ ಕರಿನಸಲ್ಲೆ ಭಯಾನಕ್ ಜನಾವಾರಾ ತ್ಯಾ ಸಾತ್ ರಾಜಾನಿತ್ಲೊ ಆಟ್ವೆಚೊ ರಾಜಾ ಅನಿ ತೊ ನಾಸ್ ಹೊವ್ನ್ ಜಾತಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:11
4 ತಿಳಿವುಗಳ ಹೋಲಿಕೆ  

ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ಅದರ ತಲೆಗಳಲ್ಲಿ ಒಂದು ತಲೆ ಗಾಯಗೊಂಡು ಅದು ಸಾಯುವ ಸ್ಥಿತಿಯಲ್ಲಿತ್ತು. ಆದರೆ ಮಾರಕವಾದ ಆ ಗಾಯವು ಗುಣವಾಯಿತು. ಇದನ್ನು ಕಂಡ ಭೂಲೋಕದವರೆಲ್ಲರೂ ವಿಸ್ಮಯಗೊಂಡು ಆ ಮೃಗವನ್ನು ಹಿಂಬಾಲಿಸಿದರು.


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.


ಈ ಮೃಗವು, ಮೊದಲನೆಯ ಮೃಗಕ್ಕಿದ್ದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲೇ ಚಲಾಯಿಸಿತು. ಮಾರಕವಾದ ಗಾಯದಿಂದ ಗುಣಹೊಂದಿದ ಆ ಮೊದಲನೆಯ ಮೃಗವನ್ನು ಭೂಲೋಕವು ಮತ್ತು ಅದರ ನಿವಾಸಿಗಳು ಆರಾಧಿಸುವಂತೆ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು