Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:13 - ಕನ್ನಡ ಸತ್ಯವೇದವು C.L. Bible (BSI)

13 ಅವರು ಒಮ್ಮನಸ್ಸಿನವರಾಗಿ ತಮ್ಮ ಶಕ್ತಿಸಾಮರ್ಥ್ಯವನ್ನೂ ಅಧಿಕಾರವನ್ನೂ ಆ ಮೃಗಕ್ಕೆ ಒಪ್ಪಿಸಿಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ಶಕ್ತಿಯನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಹತ್ತು ರಾಜರುಗಳೆಲ್ಲರೂ ಒಂದೇ ಉದ್ದೇಶವುಳ್ಳವರಾಗಿದ್ದಾರೆ. ಅವರು ತಮ್ಮ ಶಕ್ತಿಯನ್ನು ಮತ್ತು ಅಧಿಕಾರವನ್ನು ಮೃಗಕ್ಕೆ ಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಏಕ ಮನಸ್ಸುಳ್ಳವರಾಗಿ, ಮೃಗಕ್ಕೆ ತಮ್ಮ ಬಲ ಮತ್ತು ಅಧಿಕಾರವನ್ನು ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹ್ಯಾ ಧಾ ಜಾನಾಂಚೊ ಉದ್ದೆಸ್‍ಬಿ ಎಕುಚ್, ಅನಿ ತೆನಿ ಅಪ್ನಾಚೊ ಬಳ್ ಅನಿ ಅಧಿಕಾರ್ ತ್ಯಾ ಭಯಾನಕ್ ಜನಾವಾರಾಕ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:13
7 ತಿಳಿವುಗಳ ಹೋಲಿಕೆ  

ಹೀಗೆ ದೈವಸಂಕಲ್ಪವು ನೆರವೇರಬೇಕೆಂದು ದೇವರೇ ಆ ಜನರನ್ನು ಪ್ರೇರೇಪಿಸುವರು. ಇದೇ ಪ್ರೇರಣೆಯಿಂದಾಗಿ ದೇವರ ವಾಕ್ಯ ನೆರವೇರುವವರೆಗೆ ಅವರು ಒಮ್ಮನಸ್ಸಿನಿಂದ ರಾಜ್ಯಾಧಿಕಾರವನ್ನು ಆ ಮೃಗಕ್ಕೆ ಒಪ್ಪಿಸಿಬಿಡುವರು.


ನಿಮ್ಮೆಲ್ಲರಲ್ಲಿ ಒಂದೇ ಮನಸ್ಸು, ಒಂದೇ ಪ್ರೀತಿ ಇರಲಿ. ನಿಮ್ಮ ಗುರಿ ಧ್ಯೇಯಗಳು ಒಂದೇ ಆಗಿರಲಿ. ಆಗ ನನ್ನ ಸಂತೋಷವು ಸಂಪೂರ್ಣಗೊಳ್ಳುವುದು.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವುವು:


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು