Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:2 - ಕನ್ನಡ ಸತ್ಯವೇದವು C.L. Bible (BSI)

2 ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು, ಮತ್ತು ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಲೋಕದ ರಾಜರುಗಳು ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಲೋಕದ ಜನರು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜಗಾಚ್ಯಾ ಸಗ್ಳ್ಯಾ ರಾಜಾನಿ ತಿಚೆಕ್ನಾ ಆಂಗಾಚೊ ಸಮ್ಮಂದ್ ಕರ್‍ಲ್ಯಾನಾತ್, ಅನಿ ಜಗಾತ್ಲಿ ಲೊಕಾ ತಿಚ್ಯಾ ಬುರ್ಶ್ಯಾಪಾನಾಚ್ಯಾ ಆಯ್ದಾನಾತ್ಲೆ ವಾಯ್ನ್ ಫಿವ್ನ್ ಫಿದೊಡೆ ಹೊವ್ನ್ ಗೆಲ್ಯಾತ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:2
14 ತಿಳಿವುಗಳ ಹೋಲಿಕೆ  

ಅನಂತರ ಎರಡನೆಯ ದೇವದೂತನು ಬಂದನು. ಆತನು, “ಪತನ ಹೊಂದಿದಳು, ಪತನ ಹೊಂದಿದಳು ಬಾಬಿಲೋನ್ ಮಹಾನಗರಿ; ಹಾದರವೆಂಬ ಕಾಮೋದ್ರೇಕದ ಮದ್ಯವನು ಸಕಲರಿಗೂ ಕುಡಿಸಿದ ನಗರಿ ಪತನವಾದಳು,” ಎಂದು ಹೇಳಿದನು.


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ಬಾಬಿಲೋನ್ ನನ್ನ ಕೈಯಲ್ಲಿರುವ ಹೊನ್ನಿನ ಪಾನಪಾತ್ರೆ. ಲೋಕದವರೆಲ್ಲರು ಅದರಿಂದ ಕುಡಿದು ಮತ್ತರಾದರು. ರಾಷ್ಟ್ರಗಳು ಅದರಿಂದ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಅವಳೊಡನೆ ವ್ಯಭಿಚಾರಮಾಡಿದ ಹಾಗೂ ಭೋಗವಿಲಾಸದಿಂದ ಬಾಳಿದ ಭೂರಾಜರು ಅವಳನ್ನು ದಹಿಸುವ ಚಿತೆಯಿಂದ ಮೇಲೇರುವ ದಟ್ಟ ಹೊಗೆಯನ್ನು ದಿಟ್ಟಿಸಿ ನೋಡಿ ಶೋಕಿಸುವರು.


“ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ.


ಹೀಗೆ ದೈವಸಂಕಲ್ಪವು ನೆರವೇರಬೇಕೆಂದು ದೇವರೇ ಆ ಜನರನ್ನು ಪ್ರೇರೇಪಿಸುವರು. ಇದೇ ಪ್ರೇರಣೆಯಿಂದಾಗಿ ದೇವರ ವಾಕ್ಯ ನೆರವೇರುವವರೆಗೆ ಅವರು ಒಮ್ಮನಸ್ಸಿನಿಂದ ರಾಜ್ಯಾಧಿಕಾರವನ್ನು ಆ ಮೃಗಕ್ಕೆ ಒಪ್ಪಿಸಿಬಿಡುವರು.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಅವರು ಒಮ್ಮನಸ್ಸಿನವರಾಗಿ ತಮ್ಮ ಶಕ್ತಿಸಾಮರ್ಥ್ಯವನ್ನೂ ಅಧಿಕಾರವನ್ನೂ ಆ ಮೃಗಕ್ಕೆ ಒಪ್ಪಿಸಿಬಿಡುತ್ತಾರೆ.


ಇದೆಲ್ಲ ಆಗುವುದು ಅಮಿತ ಹಾದರದ ನಿಮಿತ್ತ ರಾಷ್ಟ್ರಗಳನು ತನ್ನ ಬೆಡಗು ಬಿನ್ನಾಣಗಳಿಂದ ಜಾರತನಕ್ಕೂ ಗುಲಾಮತನಕ್ಕೂ ಆಕೆ ತಂದುದರಿಂದ.


ಆದುದರಿಂದ ಅವನು ಮದುಮಗನನ್ನು ಕರೆದು, “ಜನರೆಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಹಂಚುತ್ತಾರೆ; ಅತಿಥಿಗಳು ಯಥೇಚ್ಛವಾಗಿ ಕುಡಿದಾದ ಮೇಲೆ ಸಾಧಾರಣ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದುದನ್ನು ಈವರೆಗೂ ಇಟ್ಟಿದ್ದೀಯಲ್ಲಾ!” ಎಂದು ಹೇಳಿದನು.


ಇಗೋ ನೋಡು, ಅವಳು ರೋಗದಿಂದ ಹಾಸಿಗೆ ಹಿಡಿಯುವಂತೆ ಮಾಡುತ್ತೇನೆ. ಅವಳೊಡನೆ ವ್ಯಭಿಚಾರ ಮಾಡುವವರು ಅವಳ ದುಷ್ಕೃತ್ಯಗಳನ್ನು ತ್ಯಜಿಸಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗದೆಹೋದರೆ, ಅವರು ಭೀಕರ ಕಷ್ಟನಷ್ಟಗಳಿಗೆ ಗುರಿಯಾಗುವಂತೆ ಮಾಡುತ್ತೇನೆ.


ಇಷ್ಟೇ ಅಲ್ಲದೆ ತಮ್ಮ ಕೊಲೆಗಡುಕತನ, ಮಾಟಮಂತ್ರ, ಹಾದರ ಮತ್ತು ಕಳ್ಳತನಗಳನ್ನು ತೊರೆದು ಮನಸ್ಸಾಂತರಗೊಳ್ಳಲಿಲ್ಲ.


ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು