Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:5 - ಕನ್ನಡ ಸತ್ಯವೇದವು C.L. Bible (BSI)

5 ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವಳ ಹಣೆಯ ಮೇಲೆ - ಬಾಬೆಲೆಂಬ ಮಹಾನಗರಿ, ಭೂವಿುಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ಕಾರ್ಯಗಳಿಗೂ ತಾಯಿ ಎಂದು ಗೂಢಾರ್ಥವುಳ್ಳ ಹೆಸರು ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವಳ ಹಣೆಯ ಮೇಲೆ ಒಂದು ಬರಹವನ್ನು ಬರೆದಿತ್ತು. ಆ ಬರಹಕ್ಕೆ ಗೂಢಾರ್ಥವಿತ್ತು. ಅಲ್ಲಿ ಬರೆದಿದ್ದುದು ಹೀಗಿತ್ತು: ಬಾಬಿಲೋನ್ ಎಂಬ ಮಹಾನಗರಿಯು ಭೂಮಿಯಲ್ಲಿರುವ ಕೆಟ್ಟಕಾರ್ಯಗಳಿಗೆ ಮತ್ತು ಜಾರಸ್ತ್ರೀಯರಿಗೆ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಕೆಯ ಹಣೆಯ ಮೇಲೆ: “ಮಹಾ ಬಾಬಿಲೋನ್, ಜಾರ ಸ್ತ್ರೀಯರಿಗೂ ಭೂಮಿಯ ಎಲ್ಲಾ ಅಸಹ್ಯವಾದವುಗಳಿಗೂ ತಾಯಿ!” ಎಂದು ನಿಗೂಢ ಹೆಸರು ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಿಚ್ಯಾ ಕಪಾಳಾ ವರ್ತಿ ನಾವ್ ಲಿವಲ್ಲೆ ಹೊತ್ತೆ ತೆಚೊ ಘುಟಾಚೊ ಅರ್ಥ್ ಕಾಯ್ ಮಟ್ಲ್ಯಾರ್; “ಮೊಟ್ಯಾ ಬಾಬಿಲೊನ್ ಜಗಾತ್ಲ್ಯಾ ಸಗ್ಳ್ಯಾ ವ್ಯೆಭಿಚಾರ್ ಕರ್ತಲ್ಯಾಂಚ್ಯಾ ಅನಿ ವಾಯ್ಟ್ ಕರ್ತಲ್ಯಾಂಚ್ಯಾ ಬಾಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:5
18 ತಿಳಿವುಗಳ ಹೋಲಿಕೆ  

ಅನಂತರ ಎರಡನೆಯ ದೇವದೂತನು ಬಂದನು. ಆತನು, “ಪತನ ಹೊಂದಿದಳು, ಪತನ ಹೊಂದಿದಳು ಬಾಬಿಲೋನ್ ಮಹಾನಗರಿ; ಹಾದರವೆಂಬ ಕಾಮೋದ್ರೇಕದ ಮದ್ಯವನು ಸಕಲರಿಗೂ ಕುಡಿಸಿದ ನಗರಿ ಪತನವಾದಳು,” ಎಂದು ಹೇಳಿದನು.


ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


ಆ ದೇವದೂತನು ನನಗೆ ಹೀಗೆ ಹೇಳಿದನು : “ನೀನು ದಿಗ್ಭ್ರಮೆಗೊಂಡಿರುವುದೇಕೆ? ಆ ಸ್ತ್ರೀಯ ಹಾಗೂ ಅವಳ ವಾಹನವಾಗಿರುವ ಏಳು ತಲೆ, ಹತ್ತು ಕೊಂಬುಗಳುಳ್ಳ ಮೃಗದ ನಿಗೂಢತೆಯನ್ನು ನಾನು ನಿನಗೆ ವಿವರಿಸುತ್ತೇನೆ.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ಅಧರ್ಮವು ಈಗಾಗಲೇ ಗುಪ್ತವಾಗಿ ತನ್ನ ಕೆಲಸವನ್ನು ಸಾಧಿಸುತ್ತಿದೆ; ತಡೆಗಟ್ಟಿರುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.”


ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


“ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು.


ಹೀಗಿರಲು ಎಲೌ ಜಾರಿಣಿಯೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು