Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:7 - ಕನ್ನಡ ಸತ್ಯವೇದವು C.L. Bible (BSI)

7 ಆ ದೇವದೂತನು ನನಗೆ ಹೀಗೆ ಹೇಳಿದನು : “ನೀನು ದಿಗ್ಭ್ರಮೆಗೊಂಡಿರುವುದೇಕೆ? ಆ ಸ್ತ್ರೀಯ ಹಾಗೂ ಅವಳ ವಾಹನವಾಗಿರುವ ಏಳು ತಲೆ, ಹತ್ತು ಕೊಂಬುಗಳುಳ್ಳ ಮೃಗದ ನಿಗೂಢತೆಯನ್ನು ನಾನು ನಿನಗೆ ವಿವರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಆ ದೇವದೂತನು ನನಗೆ ಹೇಳಿದ್ದು - ನೀನೇಕೆ ಆಶ್ಚರ್ಯಪಟ್ಟಿ? ಆ ಸ್ತ್ರೀಯಿಂದಲೂ ಅವಳ ವಾಹನವಾಗಿದ್ದು ಏಳು ತಲೆಗಳೂ ಹತ್ತು ಕೊಂಬುಗಳೂ ಉಳ್ಳ ಮೃಗದಿಂದಲೂ ಸೂಚಿತವಾದ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ದೇವದೂತನು ನನಗೆ, “ನೀನೇಕೆ ಆಶ್ಚರ್ಯಗೊಂಡೆ? ಈ ಸ್ತ್ರೀಯ ಗೂಢಾರ್ಥವನ್ನು ಮತ್ತು ಈಕೆ ಸವಾರಿ ಮಾಡುತ್ತಿರುವ ಏಳು ತಲೆಗಳನ್ನು ಮತ್ತು ಹತ್ತು ಕೊಂಬುಗಳನ್ನು ಹೊಂದಿರುವ ಮೃಗದ ಗೂಢಾರ್ಥವನ್ನು ನಾನು ನಿನಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ದೂತನು ನನಗೆ: “ನೀನೇಕೆ ಆಶ್ಚರ್ಯಪಟ್ಟೆ? ನಾನು ನಿನಗೆ ಆ ಸ್ತ್ರೀಯ ವಿಷಯವಾಗಿಯೂ ಅವಳು ಹೊತ್ತುಕೊಂಡಿದ್ದ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದ ಮೃಗದ ವಿಷಯವಾಗಿಯೂ ಇರುವ ಗೂಡಾರ್ಥವನ್ನು ನಿನಗೆ ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 “ತುಕಾ ಕಶ್ಯಾಕ್ ಅಜಾಪ್ ದಿಸುಕ್ ಲಾಗ್ಲಾ!” ಮನುನ್ ದೆವಾಚ್ಯಾ ದುತಾನ್ ಮಾಕಾ ಇಚಾರ್‍ಲ್ಯಾನ್.ಮಿಯಾ ತುಕಾ ತ್ಯಾ ಬಾಯ್ಕೊಮಾನ್ಸೆಚೊ ಅನಿ ತಿಕಾ ವಾವುನ್ ಘೆವ್ನ್ ಅಸಲ್ಲ್ಯಾ ತ್ಯಾ ಭಯಾನಕ್ ಜನಾವಾರಾಚೊ ಅರ್ಥ್ ತುಕಾ ಸಾಂಗ್ತಾ ತೆಕಾ ಸಾತ್ ಟಕ್ಲಿ ಅನಿ ಧಾ ಶಿಂಗಾ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:7
6 ತಿಳಿವುಗಳ ಹೋಲಿಕೆ  

ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ಅಧರ್ಮವು ಈಗಾಗಲೇ ಗುಪ್ತವಾಗಿ ತನ್ನ ಕೆಲಸವನ್ನು ಸಾಧಿಸುತ್ತಿದೆ; ತಡೆಗಟ್ಟಿರುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.


ಆಕಾಶದಲ್ಲಿ ಮತ್ತೊಂದು ಚಿಹ್ನೆ ಕಾಣಿಸಿಕೊಂಡಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳಿದ್ದವು, ಹತ್ತು ಕೊಂಬುಗಳಿದ್ದವು; ಅದರ ಏಳು ತಲೆಗಳ ಮೇಲೆ ಏಳು ಮುಕುಟಗಳಿದ್ದವು.


ಇವುಗಳಾದ ಬಳಿಕ ನಾನು ಮತ್ತೂ ಒಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಮತ್ತೊಬ್ಬ ದೇವದೂತನು ಇಳಿದುಬಂದನು. ಅವನು ವಿಶೇಷ ಅಧಿಕಾರ ಪಡೆದಿದ್ದನು. ಅವನ ತೇಜಸ್ಸು ಭೂಮಿಯನ್ನು ಬೆಳಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು