Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:9 - ಕನ್ನಡ ಸತ್ಯವೇದವು C.L. Bible (BSI)

9 “ಇದನ್ನು ಗ್ರಹಿಸಿಕೊಳ್ಳಲು ಬುದ್ಧಿ ಸಾಮರ್ಥ್ಯವಿರಬೇಕು. ಏಳು ತಲೆಗಳು ಆ ಸ್ತ್ರೀ ಕುಳಿತಿರುವ ಏಳು ಬೆಟ್ಟಗಳನ್ನೂ ಏಳು ರಾಜರನ್ನೂ ಸೂಚಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಇದನ್ನು ಗ್ರಹಿಸಿಕೊಳ್ಳಲು ಜ್ಞಾನವೂ, ವಿವೇಕವೂ ಬೇಕು. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದು ಬುದ್ಧಿವಂತನಿಗೆ ಮಾತ್ರ ಗೊತ್ತಾಗುವದು. ಆ ಏಳು ತಲೆಗಳು ಆ ಸ್ತ್ರೀ ಕೂತುಕೊಂಡಿರುವ ಏಳು ಬೆಟ್ಟಗಳೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಇದನ್ನು ಅರ್ಥಮಾಡಿಕೊಳ್ಳಲು ನಿನಗೆ ಬುದ್ಧಿ ಬೇಕು. ಆ ಮೃಗದ ಏಳು ತಲೆಗಳೇ ಆ ಸ್ತ್ರೀಯು ಕುಳಿತುಕೊಳ್ಳುವ ಏಳು ಬೆಟ್ಟಗಳಾಗಿವೆ. ಅವು ಏಳು ಮಂದಿ ರಾಜರುಗಳೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆ ಏಳು ತಲೆಗಳು, ಆ ಸ್ತ್ರೀ ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ. ಅವು ಏಳು ರಾಜರುಗಳಾಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹೆ ಅರ್ತ್ ಕರುನ್ ಘೆವ್ಕ್ ಉಲ್ಲೆ ಶಾನ್‍ಪಾನಾನ್ ಅನಿ ಬುದ್ದ್ ಅಸಲ್ಲೆ ಹೊವ್ಕ್ ಪಾಜೆ. ಸಾತ್ ಟಕ್ಲಿ ಮಟ್ಲ್ಯಾರ್ ತಿ ಬಾಯ್ಕೊಮನುಸ್ ಬಸ್ತಲ್ಯಾ ಸಾತ್ ಮಡ್ಡಿಯಾ ಅನಿ ಸಾತ್ ರಾಜಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:9
10 ತಿಳಿವುಗಳ ಹೋಲಿಕೆ  

ಇದನ್ನು ಅರ್ಥಮಾಡಿಕೊಳ್ಳಲು ಜ್ಞಾನ ಬೇಕು. ಬುದ್ಧಿವಂತನು ಮೃಗದ ಸಂಖ್ಯೆಯನ್ನು ಎಣಿಸಲಿ. ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆ. ಆ ಸಂಖ್ಯೆಯು 666.


ಆ ದೇವದೂತನು ನನಗೆ ಹೀಗೆ ಹೇಳಿದನು : “ನೀನು ದಿಗ್ಭ್ರಮೆಗೊಂಡಿರುವುದೇಕೆ? ಆ ಸ್ತ್ರೀಯ ಹಾಗೂ ಅವಳ ವಾಹನವಾಗಿರುವ ಏಳು ತಲೆ, ಹತ್ತು ಕೊಂಬುಗಳುಳ್ಳ ಮೃಗದ ನಿಗೂಢತೆಯನ್ನು ನಾನು ನಿನಗೆ ವಿವರಿಸುತ್ತೇನೆ.


ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರವುಳ್ಳ ಮಹಾನಗರದ ಸೂಚನೆಯಾಗಿದ್ದಾಳೆ.”


ನಾನು ದೇವರಾತ್ಮ ವಶನಾದೆ. ಆಗ ದೇವದೂತನು ನನ್ನನ್ನು ಅಡವಿಗೆ ಕೊಂಡೊಯ್ದನು. ಅಲ್ಲಿ, ಒಂದು ಕಡುಗೆಂಪಾದ ಮೃಗದ ಮೇಲೆ ಕುಳಿತಿದ್ದ ಸ್ತ್ರೀಯೊಬ್ಬಳನ್ನು ಕಂಡೆ. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಮಾತುಗಳೇ ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.


ನಾನು ಸಮುದ್ರದ ತೀರದಲ್ಲಿ ನಿಂತಿದ್ದೆ. ಆಗ ನನಗೆ ಈ ದೃಶ್ಯ ಕಾಣಿಸಿತು: ಒಂದು ಮೃಗ ಸಮುದ್ರದಿಂದ ಮೇಲೆ ಏರಿಬಂದಿತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಪ್ರತಿಯೊಂದು ಕೊಂಬಿನ ಮೇಲೂ ಒಂದೊಂದು ಮುಕುಟವಿತ್ತು, ತಲೆಗಳ ಮೇಲೆ ದೇವದೂಷಣೆ ಮಾಡುವ ಹೆಸರುಗಳು ಇದ್ದವು.


“ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


“ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು