Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:1 - ಕನ್ನಡ ಸತ್ಯವೇದವು C.L. Bible (BSI)

1 ಇವುಗಳಾದ ಬಳಿಕ ನಾನು ಮತ್ತೂ ಒಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಮತ್ತೊಬ್ಬ ದೇವದೂತನು ಇಳಿದುಬಂದನು. ಅವನು ವಿಶೇಷ ಅಧಿಕಾರ ಪಡೆದಿದ್ದನು. ಅವನ ತೇಜಸ್ಸು ಭೂಮಿಯನ್ನು ಬೆಳಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂವಿುಗೆ ಪ್ರಕಾಶವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಂತರ ಮತ್ತೊಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಈ ದೇವದೂತನಿಗೆ ಮಹಾ ಅಧಿಕಾರವಿತ್ತು. ಈ ದೇವದೂತನ ಪ್ರಭಾವವು ಭೂಮಿಯನ್ನು ಪ್ರಕಾಶಗೊಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದಾದನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಕೆಳಗೆ ಇಳಿದು ಬರುವುದನ್ನು ಕಂಡೆನು. ಅವನ ತೇಜಸ್ಸಿನಿಂದ ಭೂಮಿಯು ಬೆಳಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆಚ್ಯಾ ಮಾನಾ ಸರ್‍ಗಾ ವೈನಾ ಉತ್ರುನ್ ಯೆತಲ್ಯಾ ಎಕ್ ದೆವ್‍ದುತಾಕ್ ಮಿಯಾ ಬಗಟ್ಲೊ ಹ್ಯಾ ದೆವ್‍ದುತಾಕ್ ಮೊಟೊ ಅದಿಕಾರ್ ಹೊತ್ತೊ, ಅನಿ ಹ್ಯಾ ದೆವ್‍ದುತಾಚೊ ಮಹಿಮಾಚೊ ಪ್ರಭಾವ್ ಜಗಾ ವೈರ್ ಪುರಾ ಪಗಳಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:1
8 ತಿಳಿವುಗಳ ಹೋಲಿಕೆ  

ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.


ಆಕಾಶದ ಒಂದು ದಿಕ್ಕಿನಿಂದ ಇನ್ನೊಂದು ದಿಕ್ಕಿನವರೆಗೆ ಮಿನುಗಿ ಹೊಳೆಯುವ ಮಿಂಚಿನಂತೆ ನರಪುತ್ರನು ತಾನು ಬರುವ ಕಾಲದಲ್ಲಿ ಕಾಣಿಸಿಕೊಳ್ಳುವನು.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ನಾನು ಮತ್ತೊಂದು ದೃಶ್ಯವನ್ನು ಕಂಡೆ. ಒಬ್ಬ ಬಲಿಷ್ಠ ದೇವದೂತನು ಸ್ವರ್ಗದಿಂದ ಇಳಿದುಬಂದನು. ಅವನು ಮೇಘಾಂಬರನಾಗಿದ್ದನು. ಅವನ ತಲೆಯ ಮೇಲೆ ಮುಗಿಲು ಬಿಲ್ಲೊಂದು ಇತ್ತು. ಮುಖವು ಸೂರ್ಯನಂತೆ ಇತ್ತು. ಕಾಲುಗಳು ಅಗ್ನಿಸ್ತಂಭಗಳಂತಿದ್ದವು.


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ಆ ದೇವದೂತನು ನನಗೆ ಹೀಗೆ ಹೇಳಿದನು : “ನೀನು ದಿಗ್ಭ್ರಮೆಗೊಂಡಿರುವುದೇಕೆ? ಆ ಸ್ತ್ರೀಯ ಹಾಗೂ ಅವಳ ವಾಹನವಾಗಿರುವ ಏಳು ತಲೆ, ಹತ್ತು ಕೊಂಬುಗಳುಳ್ಳ ಮೃಗದ ನಿಗೂಢತೆಯನ್ನು ನಾನು ನಿನಗೆ ವಿವರಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು