Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:10 - ಕನ್ನಡ ಸತ್ಯವೇದವು C.L. Bible (BSI)

10 ಅವಳಿಗಾದ ಚಿತ್ರಹಿಂಸೆಯ ನಿಮಿತ್ತ ಭಯಪಟ್ಟು ದೂರದಲ್ಲೇ ನಿಂತು ಗೋಳಾಡುತ್ತಾ : “ಅಯ್ಯೋ ! ಅಯ್ಯೋ ! ಬಲಿಷ್ಠ ಬಾಬಿಲೋನ್ ಮಹಾನಗರಿಯೇ, ಒಂದೇ ತಾಸಿನಲ್ಲಿ ಬಂದೊದಗಿತಲ್ಲಾ ನಿನಗಿಂಥ ದುರ್ಗತಿ,” ಎಂದು ಪ್ರಲಾಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅಯ್ಯೋ, ಅಯ್ಯೋ, ಮಹಾಪಟ್ಟಣವೇ, ಬಾಬೆಲೇ, ಬಲಿಷ್ಠವಾದ ನಗರಿಯೇ, ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ಗಳಿಗೆಯಲ್ಲಿ ಬಂತಲ್ಲಾ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವಳ ಯಾತನೆಯನ್ನು ಕಂಡು ರಾಜರುಗಳು ಭಯದಿಂದ ದೂರನಿಂತು ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ, ಬಲಿಷ್ಠವಾದ ಬಾಬಿಲೋನ್ ಪಟ್ಟಣವೇ, ಒಂದೇ ಗಳಿಗೆಯಲ್ಲಿ ನಿನಗೆ ದಂಡನೆ ಆಯಿತಲ್ಲಾ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಕೆಯ ಯಾತನೆಯ ದೆಸೆಯಿಂದ ಹೆದರಿ, ದೂರದಲ್ಲಿ ನಿಂತು: “ ‘ಅಯ್ಯೋ! ಅಯ್ಯೋ! ಮಹಾನಗರಿಯೇ, ಬಲಿಷ್ಠನಗರಿ ಬಾಬಿಲೋನೇ! ಒಂದೇ ತಾಸಿನಲ್ಲಿ ನಿನಗೆ ತೀರ್ಪಾಯಿತಲ್ಲಾ?’ ಎಂದು ಶೋಕಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆನಿ ಧುರುಚ್ ಇಬೆ ರ್‍ಹಾತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತಿಚ್ಯಾ ಕಸ್ಟಾತ್ ಭಾಗ್ ಘೆವ್ಕ್ ತೆನಿ ಭಿಂಯಾಲೆ, ತೆನಿ, ಬಾಬಿಲೊನಾ ಮೊಟ್ಯಾ ಅನಿ ಘಟ್ಮುಟ್ ಶಾರಾ! ಕಾಯ್ ಹಿ ತುಜಿ ಗತ್! ಹೆ ಕಸ್ಲೆ ವಾಯ್ಟ್! ಖಾಲಿ ಎಕುಚ್ ಎಕ್ ತಾಸಾತ್ ಮಟ್ಲ್ಯಾರ್ ತುಕಾ ಶಿಕ್ಷಾ ದಿವ್ನ್ ಹೊಲಾ!” ಮನ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:10
17 ತಿಳಿವುಗಳ ಹೋಲಿಕೆ  

ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.


ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”


ಅನಂತರ ಎರಡನೆಯ ದೇವದೂತನು ಬಂದನು. ಆತನು, “ಪತನ ಹೊಂದಿದಳು, ಪತನ ಹೊಂದಿದಳು ಬಾಬಿಲೋನ್ ಮಹಾನಗರಿ; ಹಾದರವೆಂಬ ಕಾಮೋದ್ರೇಕದ ಮದ್ಯವನು ಸಕಲರಿಗೂ ಕುಡಿಸಿದ ನಗರಿ ಪತನವಾದಳು,” ಎಂದು ಹೇಳಿದನು.


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು.


ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು!


“ನೀನು ಕಂಡ ಹತ್ತು ಕೊಂಬುಗಳು ಹತ್ತು ರಾಜರುಗಳನ್ನು ಸೂಚಿಸುತ್ತವೆ. ಅವರು ಇನ್ನೂ ರಾಜ್ಯಭಾರವನ್ನು ವಹಿಸಿಕೊಂಡಿಲ್ಲ. ಆ ಮೃಗದ ಜೊತೆಯಲ್ಲಿ ರಾಜ್ಯವಾಳಲು ಒಂದು ಗಂಟೆಯವರೆಗೆ ಅವರಿಗೆ ಅಧಿಕಾರವನ್ನು ಕೊಡಲಾಗುವುದು.


ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.”


ಇಗೋ, ಸವಾರರು ಜೋಡಿಜೋಡಿಯಾಗಿ ಬರುತಿಹರು,” ಎಂದು ಕೂಗಿ ಹೇಳುತ್ತಿದ್ದಾನೆ. ಅನಂತರ ಅವನು, “ಬಾಬಿಲೋನ್ ಬಿದ್ದುಹೋಯಿತು. ಅದರ ಪೂಜಾ ವಿಗ್ರಹಗಳೆಲ್ಲ ಒಡೆದು ಬೀದಿಪಾಲಾಗಿವೆ,” ಎಂದನು.


ಹೀಗೆ ಅವರು ಸಮುದಾಯದಿಂದ ನಾಶವಾದರು. ಅವರ ಸುತ್ತಲಿದ್ದ ಇಸ್ರಯೇಲರೆಲ್ಲರೂ ಸಾಯುವವರ ಹಾಹಾಕಾರವನ್ನು ಕೇಳಿ, “ಭೂಮಿ ನಮ್ಮನ್ನು ನುಂಗದಿರಲಿ” ಎಂದುಕೊಂಡು ಓಡಿಹೋದರು.


ಒಂದೇ ದಿನದೊಳಗೆ, ಒಂದೇ ಕ್ಷಣದೊಳಗೆ ಪುತ್ರಶೋಕ, ವೈಧವ್ಯ - ಇವೆರಡು ಒದಗುವುವು ನಿನಗೆ. ಎಷ್ಟೇ ಮಂತ್ರತಂತ್ರಗಳನು ನಡೆಸಿದರೂ ಅನುಭವಿಸುವೆ ನೀ ಪೂರ್ತಿಯಾಗಿ ಇವುಗಳನು.


“ನಿನ್ನ ವಿನಾಶದ ಸುದ್ದಿಯನ್ನು, ರಾಷ್ಟ್ರಗಳಲ್ಲಿ ನಿನಗೇ ತಿಳಿಯದ ದೇಶಗಳಿಗೆ ನಾನು ಮುಟ್ಟಿಸುವಾಗ ಆ ದೇಶಗಳು ಕಳವಳಪಡುವುವು.


ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.


ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ಅವರು ಅವಳನ್ನು ದಹಿಸಿದ ಬೆಂಕಿಯ ದಟ್ಟ ಹೊಗೆಯನ್ನು ಕಂಡು, “ಈ ಮಹಾನಗರಿಗೆ ಸರಿಸಮನಾದ ನಗರವೊಂದುಂಟೇ?” ಎಂದು ಉದ್ಗರಿಸಿದರು.


ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು