Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:12 - ಕನ್ನಡ ಸತ್ಯವೇದವು C.L. Bible (BSI)

12 ಇವರು ಚಿನ್ನ, ಬೆಳ್ಳಿ, ಮುತ್ತು ರತ್ನಾಭರಣಗಳನ್ನೂ ನಯವಾದ ನಾರುಮಡಿ, ಕೆನ್ನೀಲಿಯ ವಸ್ತ್ರ, ರೇಷ್ಮೆ ಬಟ್ಟೆ ಮತ್ತು ಕಡುಗೆಂಪು ಉಡುಪುಗಳನ್ನೂ ಎಲ್ಲಾ ಬಗೆಯ ಗಂಧಕ ಚಕ್ಕೆಗಳನ್ನೂ ಎಲ್ಲಾ ವಿಧದ ದಂತದ ಸಾಮಾನುಗಳನ್ನೂ ಬಹು ಬೆಲೆಬಾಳುವ ಮರದ, ಕಂಚಿನ, ಕಬ್ಬಿಣದ, ಚಂದ್ರಕಾಂತ ಶಿಲೆಯ ಸಾಮಾನುಗಳನ್ನೂ ಅವಳಿಗೆ ಮಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಷ್ಮೆ, ಕಡುಗೆಂಪು ಉಡುಪು ಸಕಲ ವಿಧವಾದ ಮರಮುಟ್ಟು ಮತ್ತು ದಂತದ ಸಾಮಾನುಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ. ಸುಗಂಧ ಸರಕುಗಳಾದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶಿಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ಜಂತದ ಸಾಮಾನು, ಬಹು ಬೆಲೆಯುಳ್ಳ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ ಇವುಗಳಿಂದ ಮಾಡಿದ ಸಕಲ ವಿಧವಾದ ಪಾತ್ರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರ ವರ್ಣದ ವಸ್ತ್ರ, ರೇಷ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ದಂತದಿಂದ ಮಾಡಿದ ನಾನಾ ಬಗೆಯ ವಸ್ತುಗಳು, ಬಹು ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ ಇವುಗಳನ್ನು ಮಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರ ಸರಕುಗಳಾದ ಚಿನ್ನ, ಬೆಳ್ಳಿ, ಬೆಲೆಬಾಳುವ ಕಲ್ಲು ಹಾಗೂ ಮುತ್ತುಗಳು, ನಯವಾದ ನಾರುಮಡಿ, ಕಡುಗೆಂಪು ವಸ್ತ್ರ, ರೇಷ್ಮೆ, ಊದಾವರ್ಣದ ವಸ್ತ್ರ, ಅಗಿಲು ಮರ ಮತ್ತು ದಂತ ಪಾತ್ರೆಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಆತ್ತಾ, ಕೊನ್‍ಬಿ ಸೊನೆ, ಚಾಂದಿ, ಮೊತಿಯಾ ಅನಿ ಕಿಮ್ತಿಚೆ ಪೊಡೆ, ಲೈ ಕಿಮ್ತಿಚೊ ಕಪ್ಡೊ, ಜಾಂಬ್ಳೆ, ರೆಶ್ಮಿ ಅನಿ ತಾಂಬ್ಡೆ ಗುಂಜ್ಲೆ ಕಪ್ಡೆ; ಸಗ್ಳ್ಯಾ ರಿತಿಚಿ ಬರಿ ವಾಸ್ ಯೆತಲೆ ಝಾಡಾಂಚೆ ತುಕ್ಡೆ, ಅನಿ ದಾತಾನಿ ಕರಲ್ಲಿ ಕಿಮ್ತಿಚಿ ನಾಕ್ಡಾ, ತಾಂಬ್ಯಾ, ಲೊಂಗ್ಟಾಚಿ, ಅನಿ ಚಂದ್ರಕಾಂತಿ ಗುಂಡೆ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:12
8 ತಿಳಿವುಗಳ ಹೋಲಿಕೆ  

ಆ ಸ್ತ್ರೀ ಕೆನ್ನೀಲಿಯ ಹಾಗೂ ಕಡುಗೆಂಪಾದ ಬಟ್ಟೆಯನ್ನು ಧರಿಸಿದ್ದಳು; ಚಿನ್ನ, ಮುತ್ತು, ರತ್ನಾಭರಣಗಳಿಂದ ಅಲಂಕೃತಳಾಗಿದ್ದಳು. ಕೈಯಲ್ಲಿ ಚಿನ್ನದ ಪಾತ್ರೆಯನ್ನೂ ಹಿಡಿದಿದ್ದಳು. ಅವಳ ಹಾದರದ ಅಸಹ್ಯಗಳಿಂದಲೂ ಕಳಂಕಗಳಿಂದಲೂ ಅದು ತುಂಬಿತ್ತು.


ಅಂತೆಯೇ ಲೆಬನೋನಿನಿಂದ ದೇವದಾರು ಮರವನ್ನೂ ತುರಾಯಿಮರವನ್ನೂ ಸುಗಂಧದ ಮರವನ್ನೂ ನನಗೆ ಕಳುಹಿಸಬೇಕು. ನಿನ್ನ ಆಳುಗಳು ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ಜಾಣರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಕೆಲಸಮಾಡುವರು.


ಸೂರೆ ಮಾಡಿರಿ ಅದರ ಬೆಳ್ಳಿಯನು, ಕೊಳ್ಳೆಹೊಡೆಯಿರಿ ಬಂಗಾರವನು. ಮಿತಿಯಿಲ್ಲ ಅದರ ಧನಕನಕಕೆ, ಎಲ್ಲೆಯಿಲ್ಲ ಅದರ ಅಮೂಲ್ಯ ಆಸ್ತಿಪಾಸ್ತಿಗೆ.


ನಾನು ದೇವರಾತ್ಮ ವಶನಾದೆ. ಆಗ ದೇವದೂತನು ನನ್ನನ್ನು ಅಡವಿಗೆ ಕೊಂಡೊಯ್ದನು. ಅಲ್ಲಿ, ಒಂದು ಕಡುಗೆಂಪಾದ ಮೃಗದ ಮೇಲೆ ಕುಳಿತಿದ್ದ ಸ್ತ್ರೀಯೊಬ್ಬಳನ್ನು ಕಂಡೆ. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಮಾತುಗಳೇ ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.


ವ್ಯಾಪಾರ ಮಾಡಿ ಅವಳಿಂದ ಧನಿಕರಾದ ವರ್ತಕರು ಅವಳಿಗುಂಟಾದ ಚಿತ್ರಹಿಂಸೆಯನ್ನು ದೂರದಲ್ಲಿ ನಿಂತು ನೋಡಿ, ಭಯಭ್ರಾಂತರಾಗಿ ಅವಳನ್ನುದ್ದೇಶಿಸಿ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು