Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:13 - ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಲವಂಗಚೆಕ್ಕೆ, ರಕ್ತಬೋಳ, ಧೂಪ, ಸುಗಂಧತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮ, ಮಾನುಷಪ್ರಾಣ ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಹೇಳಿಕೊಳ್ಳುತ್ತಾ ದುಃಖಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ವರ್ತಕರು ದಾಲ್ಚಿನ್ನಿ, ಸಾಂಬಾರ ಪದಾರ್ಥಗಳು, ಧೂಪ, ಪರಿಮಳತೈಲ, ಸಾಂಬ್ರಾಣಿ, ದ್ರಾಕ್ಷಾರಸ ಮತ್ತು ಆಲಿವ್‌ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು, ಕುರಿ, ಕುದುರೆಗಳು, ರಥಗಳು, ಗುಲಾಮರು ಮತ್ತು ಮಾನವ ಪ್ರಾಣಗಳನ್ನು ಮಾರುತ್ತಾರೆ. ವರ್ತಕರು ಅಳುತ್ತಾ ಹೀಗೆ ಹೇಳುವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸರಕುಗಳಾದ ದಾಲ್ಚಿನ್ನಿ ಮತ್ತು ಮಸಾಲೆ, ಧೂಪ, ಸುಗಂಧ ತೈಲ, ರಕ್ತಬೋಳ, ದ್ರಾಕ್ಷಾರಸ ಮತ್ತು ಓಲಿವ್ ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು ಮತ್ತು ಕುರಿಗಳು, ಕುದುರೆಗಳು, ವಾಹನಗಳು, ಗುಲಾಮರು ಹಾಗೂ ಮನುಷ್ಯರು ಇವುಗಳನ್ನೆಲ್ಲಾ ಆ ವರ್ತಕರು ಅವಳಿಗೆ ಮಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದಾಲ್ಚಿನಿ, ಮಸಾಲೊ, ಧುಪ್, ರಗಾತ್‍ಬೊಳ್, ಬರಿ ವಾಸ್ ಯೆತಲಿ ತೆಲಾ, ಬರಿ ವಾಸ್ ಯೆತಲೊ ಸಾಂಬಾರ್, ಅನಿ, ವಾಯ್ನ್ ಅನಿ ಜೈತುನಾಚೆ ತೆಲ್, ದಳಲ್ಲೆ ಪಿಟ್ಟ್ ಅನಿ ಘವ್; ಗೊರಾ, ಬಕ್ರಿ, ಘೊಡ್ಕಿ ಅನಿ ರಥಾ ಮಾನ್ಸಾಕ್ ಸೈತ್ ಗುಲಾಮ್ ಕರುನ್ ತೆಂಚೆಕ್ನಾ ಇಕಾತ್ ಘೆಯ್ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:13
25 ತಿಳಿವುಗಳ ಹೋಲಿಕೆ  

ಯಾವಾನಿನವರು, ತೂಬಲಿನವರು ಮತ್ತು ಮೆಷೆಕಿನವರು ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನು ಹಾಗು ತಾಮ್ರದ ಪಾತ್ರೆಗಳನ್ನು ನಿನಗೆ ಸರಬರಾಜು ಮಾಡುತ್ತಿದ್ದರು;


ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಬೆಳ್ಳಿಬಂಗಾರಕ್ಕಾಗಿ ಸಜ್ಜನರನ್ನು ಮಾರಿಬಿಡುತ್ತಾರೆ. ಒಂದು ಜೊತೆ ಜೋಡುಗಳ ಸಾಲವನ್ನು ಸಹ ತೀರಿಸಲಾಗದ ಬಡಬಗ್ಗರನ್ನೂ ವಿಕ್ರಯಿಸುತ್ತಾರೆ.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


“ನಾವು ನಮ್ಮಿಂದ ಆಗುವಷ್ಟು ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲಾದವರನ್ನು, ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎನ್ನಲು ಅವರು ಉತ್ತರಕೊಡದೆ ಸುಮ್ಮನೆ ಇದ್ದರು.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


“ಒಬ್ಬನು ಸ್ವದೇಶದವನಾದ ಇಸ್ರಯೇಲನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಿಬಿಡಬೇಕು.


“ಒಬ್ಬನು ಮತ್ತೊಬ್ಬನನ್ನು ಕದ್ದೊಯ್ದು ಅವನನ್ನು ಮಾರಿದ್ದರೂ ಅಥವಾ ತನ್ನಲ್ಲೇ ಖೈದಿಯಾಗಿಟ್ಟುಕೊಂಡಿದ್ದರೂ ಅಂಥವನಿಗೆ ಮರಣ ದಂಡನೆಯಾಗಬೇಕು.”


ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.


ಬಡವರನ್ನು ಬೆಳ್ಳಿಗೆ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನೂ ಬಿಡದಂತೆ ಮಾರಿಬಿಡೋಣ,” ಎಂದುಕೊಳ್ಳುತ್ತೀರಿ, ಅಲ್ಲವೆ?


ಬೋಗುಣಿಬಟ್ಟಲುಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುವವರೇ, ಅತ್ಯುತ್ತಮ ಸುಗಂಧತೈಲಗಳನ್ನು ಲೇಪಿಸಿಕೊಳ್ಳುವವರೇ, ನಿಮಗೆ ಧಿಕ್ಕಾರ! ಏಕೆಂದರೆ ನೀವು ಜೋಸೆಫನ ವಂಶದವರ ವಿನಾಶದ ಬಗ್ಗೆ ನಿಶ್ಚಿಂತರಾಗಿದ್ದೀರಿ.


ಎದ್ದೆ ನಾನು ನಲ್ಲನಿಗೆ ಬಾಗಿಲ ತೆರೆಯಲೆಂದು ಅಗುಳಿಯ ಮೇಲೆ ತೊಟ್ಟಿಕ್ಕಿತು ಪರಿಮಳ ನನ್ನ ಕೈಗಳಿಂದ ಆ ರಸಗಂಧ ದ್ರವ್ಯ ನನ್ನ ಬೆರಳುಗಳಿಂದ.


ರಸಗಂಧ, ಅಗರು, ಲವಂಗ ಚಕ್ಕೆಗಳಿಂದ ಅದನ್ನು ಘಮಘಮಗೊಳಿಸಿರುವೆ.


ಆಕೆ ಅರಸನಿಗೆ 4000 ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನೂ ಅಪರಿಮಿತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದದ್ದು ಯಾವುದೂ ಇರಲಿಲ್ಲ.


ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ಪ್ರತಿವರ್ಷ ಸುಮಾರು ಇಪ್ಪತ್ತಮೂರು ಸಾವಿರ ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು.


ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.


ನೀವು ಈಜಿಪ್ಟ್ ದೇಶವನ್ನು ಮರಳಿ ಎಂದಿಗೂ ನೋಡುವುದಿಲ್ಲವೆಂದು ಸರ್ವೇಶ್ವರ ಹೇಳಿದ್ದರೂ ಅವರು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗಮಾಡುವರು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನೇ ಗಂಡು ಹೆಣ್ಣು ಎನ್ನದೆ ಗುಲಾಮರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.”


ನೀನು ಹಚ್ಚಿಕೊಂಡಿರುವ ತೈಲ ಎನಿತು ಸುವಾಸನೀಯ ಸುರಿದ ಪರಿಮಳದಂತೆ ವ್ಯಾಪ್ತ ನಿನ್ನ ನಾಮಾಂಕಿತ ಕನ್ಯೆಯರೆಲ್ಲರು ನಿನ್ನನು ಪ್ರೀತಿಸದಿರಲು ಅಸಾಧ್ಯ.


ಅವರು ವೈರಿಗಳಿಂದ ಐವತ್ತು ಸಾವಿರ ಒಂಟೆಗಳನ್ನೂ ಎರಡು ಲಕ್ಷ ಐವತ್ತು ಸಾವಿರ ಕುರಿಗಳನ್ನೂ ಎರಡು ಸಾವಿರ ಕತ್ತೆಗಳನ್ನೂ ವಶಪಡಿಸಿಕೊಂಡರಲ್ಲದೆ, ಒಂದು ಲಕ್ಷ ಜನರನ್ನು ಯುದ್ಧಕೈದಿಗಳನ್ನಾಗಿ ಸೆರೆಹಿಡಿದರು.


ವರ್ತಕರು ಮಾರುವ ಸಕಲ ಸುಗಂಧ ತೈಲಗಳಿಂದ ರಸಗಂಧ ಸಾಂಬ್ರಾಣಿ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿ ಹೊರಹೊಮ್ಮುತ್ತಿರುವ ಅರಣ್ಯದ ಮಾರ್ಗವಾಗಿ ಬರುತ್ತಿರುವ ಆ ಮೆರವಣಿಗೆ ಯಾರದು?


“ಬಾಬಿಲೋನೇ, ನೀ ಹಂಬಲಿಸಿದ ಫಲ ನಿನ್ನಿಂದ ದೂರ ಸರಿಯಿತು ನಿನ್ನೆಲ್ಲ ವಿಲಾಸ ವೈಭವಗಳು ನಂದಿಹೋದವು ಮರಳಿ ಕಾಣವವು ಇನ್ನೆಂದಿಗೂ.”


ವ್ಯಾಪಾರ ಮಾಡಿ ಅವಳಿಂದ ಧನಿಕರಾದ ವರ್ತಕರು ಅವಳಿಗುಂಟಾದ ಚಿತ್ರಹಿಂಸೆಯನ್ನು ದೂರದಲ್ಲಿ ನಿಂತು ನೋಡಿ, ಭಯಭ್ರಾಂತರಾಗಿ ಅವಳನ್ನುದ್ದೇಶಿಸಿ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು